ಬೆಂಂಗಳೂರು : ಸರ್ಕಾರಿ ಅಧಿಕಾರಿಯಾಗಿದ್ದು, ಕಾನೂನು ಬಾಹೀರ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ರಕ್ಷಣೆ ಮಾಡುವುದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ ಎಂದು ತಿಳಿಸಿರುವ ಹೈಕೋರ್ಟ್, ಧಾರವಾಡ ಜಿಲ್ಲಾ ಪಂಚಾಯತ್ ಅಧ್ಯಕ್ಷ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಆಪ್ತ ಕಾರ್ಯದರ್ಶಿಯಾಗಿದ್ದ ಸೋಮಶೇಖರ್ ನ್ಯಾಮಗೌಡರ್ ವಿರುದ್ಧದ ಪ್ರಕರಣ ರದ್ದುಗೊಳಿಸಲು ನಿರಾಕರಿಸಿದೆ.
ಇದನ್ನೂ ಓದಿ: ಇಸ್ರೇಲ್ ನಾಯಕತ್ವವನ್ನು ತಿರುವುಹಾದಿಯಲ್ಲಿ ತಂದು ನಿಲ್ಲಿಸಿದ ಹಮಾಸ್‌ನ 'ಅಲ್ - ಅಕ್ಸಾ ಫ್ಲಡ್' ಕಾರ್ಯಾಚರಣೆ
ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ೨೧ನೇ ಆರೋಪಿಯಾಗಿರುವ ನ್ಯಾಯಮಗೌಡರ್(ಪ್ರಸ್ತುತ ತುಮಕೂರು ಜಿಲ್ಲೆಯ ತಿಪಟೂರಿನ ಎಪಿಎಂಸಿ ಕಾರ್ಯದರ್ಶಿ) ವಿರುದ್ಧದ ಪ್ರಕರಣ ಕೈ ಬಿಡುವುದಕ್ಕೆ ನಿರಾಕರಿಸಿದ್ದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.
ಪ್ರಕರಣ ಸಂಬಂಧ ಸಿಬಿಐ ಸಲ್ಲಿಸಿದ್ದ ಆರೋಪ ಪಟ್ಟಿ ಮತ್ತು ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿ ನ್ಯಾಯಪೀಠ, ಮೇಲ್ನೋಟಕ್ಕೆ ಆರೋಪಿಯ ವಿರುದ್ಧ ಸಾಕ್ಷ್ಯಾಧಾರಗಳು ಲಭ್ಯವಿದೆ. ಜತೆಗೆ, ಯೋಗೇಶ್ ಗೌಡ ಅವರ ಕೊಲೆಗೆ ಸಂಬಂಧಿಸಿದಂತೆ ಆರೋಪಿಗಳು ರೂಪಿಸಿರುವ ಸಂಚಿನ ಕುರಿತು ಅರ್ಜಿದಾರರಿಗೆ ಅರಿವಿತ್ತು ಎಂದು ವಿಶೇಷ ನ್ಯಾಯಾಲಯ ತಿಳಿಸಿದೆ. ಜತೆಗೆ, ಶ್ರೀನಿವಾಸ ರೆಡ್ಡಿ ಮತ್ತು ರಾಕೆಶ್ ಶರ್ಮಾ ಮತ್ತಿತರರು ನಡುವಿನ ಪ್ರಕರಣದಲ್ಲಿ ಸುಪ್ರೀಕೋರ್ಟ್ ಹೇಳಿರುವಂತೆ, ಸರ್ಕಾರಿ ನೌಕರರಿಗಿರುವ ರಕ್ಷಣೆಯನ್ನು ಕಾನೂನು ಬಾಹಿರ ಕೃತ್ಯಗಳಲ್ಲಿ ಬಳಕೆ ಮಾಡುವುದಕ್ಕೆ ಸಾಧ್ಯವಿಲ್ಲ ಎಂದು ತಿಳಿಸಿದೆ ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ.
ಇದನ್ನೂ ಓದಿ: ಸಚಿವರ ಮೇಲೆ ಹಣದ ಸುರಿಮಳೆ..! ಕಾಂಗ್ರೆಸ್ ನಾಯಕರ ಕಾಲಡಿ ನೋಟುಗಳ ರಾಶಿ
ಅಲ್ಲದೆ, ಸುಳ್ಳು ಪ್ರವಾಸ ಕಾರ್ಯಕ್ರಮವನ್ನು ಸಿದ್ದಪಡಿಸುವುದು ಯೋಗೇಶ್ ಗೌಡರ ಕೊಲೆಗೆ ಸಂಚು ರೂಪಿಸಿರುವ ಭಾಗವಾಗಿದೆ. ಜತೆಗೆ ಎಲ್ಲ ಕಾರ್ಯಗಳನ್ನು ಪ್ರಮುಖ ಆರೋಪಿ ವಿನಯ್ ಕುಲಕರ್ಣಿ ಅವರ ಸೂಚನೆಯಂತೆ ನಡೆದುಕೊಂಡಿದ್ದಾರೆ ಎಂಬುದು ತಿಳಿದು ಬಂದಿದ್ದು, ಅರ್ಜಿ ವಜಾಗೊಳಿಸುತ್ತಿರುವುದಾಗಿ ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ.ಜತೆಗೆ, ಯೋಗೇಶ್‌ಗೌಡ ಅವರ ಕೊಲೆ ಸಂದರ್ಭದಲ್ಲಿ ಸಚಿವರು ದೆಹಲಿಯಲ್ಲಿದ್ದರೂ ಎಂಬುದಾಗಿ ಹೇಳಿಕೊಳ್ಳುವುದಕ್ಕಾಗಿ ಸಚಿವರ ಆಪ್ತ ಕಾರ್ಯದರ್ಶಿಯಾಗಿದ್ದ ನ್ಯಾಮಗೌಡ ಅವರು ೨೦೧೬ರ ಜೂನ್ ೧೨ ರಂದು ಪ್ರಕರಣದ ಆರೋಪಿಯಾಗಿರುವ ವಿನಯ್ ಕುಲಕರ್ಣಿ ಅವರಿಗೆ ಸುಳ್ಳು ಪ್ರವಾಸ ಕಾರ್ಯಕ್ರಮವನ್ನು ಸೃಷ್ಠಿಸಿದ್ದರು.
ಜತೆಗೆ ಅದೇ ದಿನ ನವದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿಯಾಗುವುದಕ್ಕಾಗಿ ತೆರಳುತ್ತಿರುವುದಾಗಿ ವಿಮಾನ ಟಿಕೆಟ್‌ಗಳನ್ನು ಕಾಯ್ದಿರಿಸಿದ್ದರು ಎಂದು ಸಿಬಿಐ ಆರೋಪಿಸಿತ್ತು. ಆದರೆ, ಸಭೆಗೆ ಸಂಬಂಧಿಸಿಂತೆ ಕೇಂದ್ರ ಸಚಿವರಿಗೆ ಯಾವುದೇ ಮನವಿಯನ್ನು ರವಾನಿಸಿರಲಿಲ್ಲ. ಜತೆಗೆ, ಅದೇ ಸಂದರ್ಭದಲ್ಲಿ ಕೇಂದ್ರ ಸಚಿವರು ರಾಷ್ಟ್ರ ಮಟ್ಟದ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ಅಲಹಾಬಾದ್‌ಗೆ ಭೇಟಿ ನಿಡಿದ್ದರು ಎಂದು ಸಿಬಿಐ ತನ್ನ ಆರೋಪ ಪಟ್ಟಿಯಲ್ಲಿ ತಿಳಿಸಿತ್ತು.
ಪ್ರಕರಣದಲ್ಲಿ ಅರ್ಜಿದಾರರು ಸಾರ್ವಜನಿಕ ಸೇವಕನಾಗಿದ್ದು, ತನ್ನ ಸ್ಥಾನವನ್ನು ದುರುಪಯೋಗ ಪಡಿಸಿಕೊಂಡಿದ್ದಾನೆ. ಆದ್ದರಿಂದ ವಿಚಾರಣೆ ಸಂದರ್ಭದಲ್ಲಿ ಅರ್ಜಿದಾರರ ಕರ್ತವ್ಯಗಳು ಅಧಿಕೃತ ಎಂಬ ಅಂಶ ಕಂಡು ಬಂದಲ್ಲಿ ಅವರನ್ನು ವಿಚಾರಣೆಯಿಂದ ಕೈಬಿಡಬಹುದು. ಜತೆಗೆ, ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆದು ವಿಚಾರಣೆ ಮುಂದುವರೆಸಬಹುದು ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ.
ಇದನ್ನೂ ಓದಿ: ಇಂದು ವಿಚಾರಣೆಗೆ ಹಾಜರಾಗಲಿರುವ ಅಂಬಿಕಾಪತಿ
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ತಮ್ಮ ವಿರುದ್ಧದ ಆರೋಪಗಳು ಸಚಿವಾಗಿದ್ದ ವಿನಯ್ ಕುಲಕರ್ಣಿ ಅವರ ಅಧಿಕೃತ ಕರ್ತವ್ಯದಲ್ಲಿದ್ದು, ನಿರ್ವಹಿಸಿರುವ ಕೆಲಸಗಳಾಗಿವೆ. ಆದರೆ, ಸರ್ಕಾರಿ ಅಧಿಕಾರಿಯಾಗಿರುವುದರಿಂದ ತಮ್ಮ ವಿರುದ್ಧ ಸಕ್ಷಮ ಪ್ರಾಧಿಕಾರ ಪ್ರಾಧಿಕಾರದ ಅನುಮತಿ ಪಡೆಯದ ವಿಚಾಣೆಗೆ ಪರಿಗಣಿಸಿದ್ದು, ಪ್ರಕರಣ ರದ್ದು ಮಾಡಬೇಕು ಎಂದು ಕೋರಿದ್ದರು.ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ತಮ್ಮ ವಿರುದ್ಧದ ಆರೋಪಗಳು ಸಚಿವಾಗಿದ್ದ ವಿನಯ್ ಕುಲಕರ್ಣಿ ಅವರ ಅಧಿಕೃತ ಕರ್ತವ್ಯದಲ್ಲಿದ್ದು, ನಿರ್ವಹಿಸಿರುವ ಕೆಲಸಗಳಾಗಿವೆ. ಆದರೆ, ಸರ್ಕಾರಿ ಅಧಿಕಾರಿಯಾಗಿರುವುದರಿಂದ ತಮ್ಮ ವಿರುದ್ಧ ಸಕ್ಷಮ ಪ್ರಾಧಿಕಾರ ಪ್ರಾಧಿಕಾರದ ಅನುಮತಿ ಪಡೆಯದ ವಿಚಾಣೆಗೆ ಪರಿಗಣಿಸಿದ್ದು, ಪ್ರಕರಣ ರದ್ದು ಮಾಡಬೇಕು ಎಂದು ಕೋರಿದ್ದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.