ದಲಿತ ಉದ್ಯಮಿಗಳ ಸಮಸ್ಯೆ ಇತ್ಯರ್ಥಕ್ಕೆ ಉನ್ನತ ಮಟ್ಟದ ಸಮಿತಿ: ಸಚಿವ ಎಂ ಬಿ ಪಾಟೀಲ

ಬೆಂಗಳೂರು: ದಲಿತ ಉದ್ದಿಮೆದಾರರು ಎದುರಿಸುತ್ತಿರುವ ನಾನಾ ಸಮಸ್ಯೆಗಳನ್ನು ಆಲಿಸುವುದು ಮತ್ತು ಅದಕ್ಕೆ ಪರಿಹಾರ ಕಂಡುಹಿಡಿಯುವ ಕೆಲಸವನ್ನು ಈ ಸಮಿತಿ ಮಾಡಲಿದೆ ಎಂದು ಅವರು ಹೇಳಿದರು.

Written by - Prashobh Devanahalli | Last Updated : Jun 21, 2024, 08:37 PM IST
    • ಸೆಲ್ವಕುಮಾರ್ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲಾಗುವುದು
    • ದಲಿತ ಉದ್ದಿಮೆದಾರರು ಎದುರಿಸುತ್ತಿರುವ ನಾನಾ ಸಮಸ್ಯೆಗಳನ್ನು ಆಲಿಸುವುದು
    • ಭಾರೀ ಮತ್ತು ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿಕೆ
ದಲಿತ ಉದ್ಯಮಿಗಳ ಸಮಸ್ಯೆ ಇತ್ಯರ್ಥಕ್ಕೆ ಉನ್ನತ ಮಟ್ಟದ ಸಮಿತಿ: ಸಚಿವ ಎಂ ಬಿ ಪಾಟೀಲ title=
MB Patil

ಬೆಂಗಳೂರು: ರಾಜ್ಯದ ದಲಿತ ಉದ್ಯಮಿಗಳು ಎದುರಿಸುತ್ತಿರುವ ನಾನಾ ಸಮಸ್ಯೆಗಳನ್ನು ಪರಿಹರಿಸುವ ಉದ್ದೇಶದಿಂದ ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲಾಗುವುದು ಎಂದು ಭಾರೀ ಮತ್ತು ಕೈಗಾರಿಕಾ ಸಚಿವ ಎಂ ಬಿ ಪಾಟೀಲ ತಿಳಿಸಿದರು.

ಖನಿಜ ಭವನದಲ್ಲಿ ಶುಕ್ರವಾರ ನಡೆದ ರಾಜ್ಯಸಭೆ ಮಾಜಿ ಸದಸ್ಯ ಎಲ್.ಹನುಮಂತಯ್ಯ ಅಧ್ಯಕ್ಷತೆಯ ಕರ್ನಾಟಕ ದಲಿತ ಉದ್ದಿಮೆದಾರರ ಸಂಘದ ಸದಸ್ಯರ ಜತೆ ನಡೆದ ಸಭೆಯಲ್ಲಿ ಸಚಿವರು ಈ ಘೋಷಣೆ ಮಾಡಿದರು.

ಇದನ್ನೂ ಓದಿ: ʼಚಿತ್ತಾರ ಸ್ಟಾರ್ ಅವಾರ್ಡ್ಸ್-2024ʼ : ನಟ ದರ್ಶನ್‌ಗೆ ʼಅತ್ಯುತ್ತಮ ನಟ ಪ್ರಶಸ್ತಿʼ..

ದಲಿತ ಉದ್ದಿಮೆದಾರರು ಎದುರಿಸುತ್ತಿರುವ ನಾನಾ ಸಮಸ್ಯೆಗಳನ್ನು ಆಲಿಸುವುದು ಮತ್ತು ಅದಕ್ಕೆ ಪರಿಹಾರ ಕಂಡುಹಿಡಿಯುವ ಕೆಲಸವನ್ನು ಈ ಸಮಿತಿ ಮಾಡಲಿದೆ ಎಂದು ಅವರು ಹೇಳಿದರು.

ನಿಯಮಗಳ ಪ್ರಕಾರ ರಾಜ್ಯದ ಕೈಗಾರಿಕಾ ಪ್ರದೇಶಗಳಲ್ಲಿ ದಲಿತ ಉದ್ದಿಮೆದಾರರಿಗೆ ಶೇಕಡ 24.10ರಷ್ಟು ಕೈಗಾರಿಕಾ ನಿವೇಶನ ಗಳನ್ನು ಹಂಚಲು ಸರಕಾರ ಬದ್ಧವಾಗಿದೆ. ಇದರಂತೆ, ವಿವಿಧ ಕೈಗಾರಿಕಾ ಪ್ರದೇಶಗಳಲ್ಲಿ ಇನ್ನೂ 391 ಎಕರೆಯಷ್ಟು ಜಾಗವನ್ನು ಪರಿಶಿಷ್ಟರಿಗೆ ಹಂಚುವುದು ಬಾಕಿ ಇದನ್ನು ಆದಷ್ಟು ಬೇಗ ಹಂಚಿಕೆ ಮಾಡಲಾಗುವುದು ಎಂದು ಹೇಳಿದರು.

ಕೋವಿಡ್ ಪೂರ್ವದಲ್ಲಿ ಹಂಚಿಕೆಯಾಗಿರುವ ಫಲಾನುಭವಿಗಳಿಗೆ ಯೋಜನೆ ಜಾರಿ ಮತ್ತು ಹಣ ಪಾವತಿಗೆ ಈ ಹಿಂದೆ ಒಂದು ವರ್ಷ ನೀಡಿದ್ದ ವಿನಾಯಿತಿಯನ್ನು ಸಚಿವರು ಉದ್ದಿಮೆದಾರರ ಮನವಿ ಮೇರೆಗೆ ಎರಡು ವರ್ಷಗಳ ವಿನಾಯಿತಿ ನೀಡಿದರು.

ಹಳೇ ಕೈಗಾರಿಕಾ ಪ್ರದೇಶಗಳಲ್ಲಿ ಹಂಚಿಕೆಯಾಗದೆ ಉಳಿದಿರುವ ನಿವೇಶನಗಳ ಪೈಕಿ ಶೇ 25ರಷ್ಟು‌ ನಿವೇಶನಗಳನ್ನು ಪರಿಶಿಷ್ಟರಿಗೆ ಹಂಚಿಕೆ ಮಾಡಲಾಗುವುದು ಎಂದೂ ತಿಳಿಸಿದರು.

ಕೆಲವು ಸಂದರ್ಭಗಳಲ್ಲಿ ದಲಿತ ಉದ್ದಿಮೆದಾರರ ಯೋಜನಾ ಪ್ರಸ್ತಾವನೆಗಳ ಸ್ವರೂಪ ಬದಲಾದಂತೆ ನಿಗದಿತ ಪ್ರಮಾಣಕ್ಕಿಂತ ಕಡಿಮೆ ಕೈಗಾರಿಕಾ ನಿವೇಶನ ಕೊಡಲಾಗಿದೆ. ಇಂತಹ ಪ್ರಕರಣಗಳಲ್ಲಿ ಹೂಡಿಕೆಯು 15 ಕೋಟಿ ರೂ.ಗಳಿಗಿಂತ ಕಡಿಮೆಯಾಗಿದ್ದಲ್ಲಿ ಅಂತಹ ಪ್ರಕರಣಗಳನ್ನು ಆಯಾ ಜಿಲ್ಲಾಧಿಕಾರಿಗಳ ನೇತೃತ್ವದ ಸಮಿತಿಗೆ ವಹಿಸುವ ಬಗ್ಗೆ ಕ್ರಮವಹಿಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.

ದಾಬಸ್ ಪೇಟೆ, ಹಾಸನ, ಬಿಡದಿ ಸೇರಿದಂತೆ ಹಲವೆಡೆಗಳಲ್ಲಿ ಪರಿಶಿಷ್ಟರಿಗೆ ಕೊಟ್ಟಿರುವ ನಿವೇಶನಗಳಲ್ಲಿ ಸಮಸ್ಯೆ ಇದ್ದು ಅದನ್ನು ಆದಷ್ಟು ಬೇಗ ಪರಿಹರಿಸುವ ಬಗ್ಗೆ ಕ್ರಮವಹಿಸಲಾಗಿದೆ ಎಂದರು.

ಇದನ್ನೂ ಓದಿ:  ನಿತ್ಯ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಅಜ್ವೈನ್ ನೀರು ಕುಡಿದರೆ ಏನಾಗುತ್ತೆ?

ಅಂತಿಮವಾಗಿ ಕರ್ನಾಟಕ ದಲಿತ ಉದ್ದಿಮೆದಾರರ ಸಂಘದ ಉಪಾಧ್ಯಕ್ಷ ಶ್ರೀನಿವಾಸನ್ ಮಾತನಾಡಿ, 'ಸಚಿವರು ನಮ್ಮ ಬಹುತೇಕ ಎಲ್ಲ ಬೇಡಿಕೆಗಳನ್ನು ಈಡೇರಿಸಿದ್ದಾರೆ. ಹೀಗಾಗಿ ಸಚಿವರಿಗೆ ನನ್ನ ಅಭಿನಂದನೆಗಳು ಎಂದು ಮೆಚ್ಚುಗೆಯ ಮಾತುಗಳನ್ನಾಡಿದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News