ದುರುಪಯೋಗ ತಡೆಗಟ್ಟಲು ಹೈ-ರೆಸ್ಯೂಲೆಷನ್ ಜಾಮರ್ ಅಳವಡಿಕೆ: ಗೃಹ ಸಚಿವ ಪರಮೇಶ್ವರ
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಡೆದ ರಾಷ್ಟ್ರಪತಿಗಳ ಸುಧರಣಾ ಸೇವೆ ಪದಕ ಹಾಗೂ ಮುಖ್ಯಮಂತ್ರಿಗಳ ಪದಕ ಪ್ರದಾನ ಮತ್ತು ಸನ್ನಡತೆಯ ಶಿಕ್ಷಾಬಂಧಿಗಳ ಅವಧಿಪೂರ್ವ ಬಿಡುಗಡೆ ಸಮಾರಂಭದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಹೈ ರೆಸ್ಯೂಲೇಷನ್ ಜಾಮರ್’ಗಳನ್ನು ಅಳವಡಿಸಿದ್ದರಿಂದ ನೆರೆಹೊರೆಯ ನಿವಾಸಿಗಳಿಗೆ ತೊಂದರೆಯಾಗಿದ್ದು, ಇದನ್ನು ನಿವಾರಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ತಿಳಿಸಿದರು.
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಡೆದ ರಾಷ್ಟ್ರಪತಿಗಳ ಸುಧರಣಾ ಸೇವೆ ಪದಕ ಹಾಗೂ ಮುಖ್ಯಮಂತ್ರಿಗಳ ಪದಕ ಪ್ರದಾನ ಮತ್ತು ಸನ್ನಡತೆಯ ಶಿಕ್ಷಾಬಂಧಿಗಳ ಅವಧಿಪೂರ್ವ ಬಿಡುಗಡೆ ಸಮಾರಂಭದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಇದನ್ನೂ ಓದಿ: ಮದುವೆಯಾಗಿ ಮಗಳಿದ್ದರೂ ಸಹ ಕನ್ನಡದ ಖ್ಯಾತ ನಟಿ ಜೊತೆ ಸೌರವ್ ಗಂಗೂಲಿ ಡೇಟಿಂಗ್! ಸಂದರ್ಶನದಲ್ಲಿ ರಿವೀಲ್ ಆಯ್ತು ‘ದಾದ’ ಅಪೇರ್!!
ಈ ಹಿಂದೆ ಜೈಲಿನ ಒಳಗೆ ಫೋನ್ ತಂದುಕೊಡುತ್ತಾರೆ. ಕೈದಿಗಳು ಹೊರಗಿನವರ ಜೊತೆ ಸಂಪರ್ಕ ಮಾಡುತ್ತಾರೆ ಎಂಬ ಆರೋಪಗಳು ಕೇಳಿ ಬಂದಿವೆ. ಜೈಲಿನಲ್ಲಿ ಬೇರೆ ರಾಜ್ಯದ ಕೈದಿಗಳು ಇದ್ದಾರೆ. ಇಂತಹ ಸಂದರ್ಭದಲ್ಲಿ ಜಾಮರ್ ಅಳವಡಿಸುವುದರಿಂದ ಅಕ್ರಮಗಳನ್ನು ತಡೆಗಟ್ಟಬಹುದು ಎಂದರು.
ಹೈ ರೆಸ್ಯೂಲ್ಯೂಷನ್ ಜಾಮರ್ ಹಾಕಿರುವುದರಿಂದ ಸುಮಾರು 800 ಮೀಟರ್ ವ್ಯಾಪ್ತಿಯವರೆಗೂ ಕಾರ್ಯನಿರ್ವಹಿಸುತ್ತದೆ. ಸ್ವಾಭಾವಿಕವಾಗಿ ಕಾಂಪೌಂಡ್‌ನಿಂದ ಹೊರಗು ವ್ಯಾಪಿಸಿರುವುದರಿಂದ ಜನರಿಗೆ ತೊಂದರೆಯಾಗಿತ್ತು. ಜಾಮರ್ ಕಾರ್ಯನಿರ್ವಹಣೆಯ ವ್ಯಾಪ್ತಿಯನ್ನು 100 ಮೀಟರ್‌ಗೆ ಇಳಿಸಲಾಗಿದೆ. ಜಾಮರ್‌ಗಳನ್ನು ತೆಗೆಯುವುದಿಲ್ಲ ಎಂದು ತಿಳಿಸಿದರು.
ಇಲಾಖೆಯಲ್ಲಿ ಬದಲಾವಣೆಯನ್ನು ತರಲು ಹೆಚ್ಚು ಪ್ರೋತ್ಸಾಹ ನೀಡಲಾಗುತ್ತಿದೆ. ಸನ್ನಡತೆಯ ಬಿಡುಗಡೆ ಹೊಂದಿರುವ ಸತೀಶ್ ಎಂಬಾತ 'ತಾನು ಕಾನೂನು ಡಿಪ್ಲೋಮಾ ಮುಗಿಸಿದ್ದೇನೆ. ಹೊರಗಡೆ ಹೋದಾಗ ಜೀವನಕ್ಕೆ ಉಪಯೋಗವಾಗುತ್ತದೆ' ಎಂದು ಹೇಳಿದ್ದಾನೆ. ಬಹಳ ಜನ ಪರಿವರ್ತನೆ ಹೊಂದಲು ಇಂತಹ ಅವಕಾಶ ಕಲ್ಪಿಸಿಕೊಡುತ್ತೇವೆ. ಕಾರ್ಪೆಂಟರ್, ಎಲೆಕ್ಟ್ರಿಕ್ ಕೆಲಸ, ಕಂಪ್ಯೂಟರ್ ತರಬೇತಿ ಕಲಿಸಿಕೊಡುತ್ತೇವೆ. ಕೈದಿಗಳು ಬದಲಾವಣೆ ಹೊಂದಲು ಅವಕಾಶವಾಗುತ್ತದೆ ಎಂದು ಹೇಳಿದರು.
ನಟ ದರ್ಶನ್‌ಗೆ ರಾಜಾತೀಥ್ಯ ಸಿಗುತ್ತಿದೆ ಎಂಬ ಆರೋಪದ ಕುರಿತು ಪ್ರತಿಕ್ರಿಯಿಸಿದ ಅವರು ಜೈಲಿನ ಒಳಗೆ ನೇರವಾಗಿ ಬರಲು ನನಗೆ ಅವಕಾಶವಿಲ್ಲ. ಊಟ ಉಪಚಾರ ವಿಚಾರದಲ್ಲಿ ಬೇರೆ ರೀತಿ ಅತೀಥ್ಯ ನೀಡಿಲ್ಲ. ಜೈಲಿನಲ್ಲಿರುವ ಎಲ್ಲರಂತೆಯೇ ದರ್ಶನ್‌ಗೆ ವ್ಯವಸ್ಥೆ ಇದೆ. ಬಿರಿಯಾನಿ ಕೊಟ್ಟರು ಎಂದು ಕೆಲವರು ಆರೋಪಿಸಿದ್ದಾರೆ. ಅಂತಹ ಯಾವುದೇ ಘಟನೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು.
ಇದನ್ನೂ ಓದಿ: ಗೆಳೆಯನ ಪೋಟೊ ರಿವೀಲ್ ಮಾಡುವ ಮೂಲಕ ಪಡ್ಡೆ ಹುಡುಗರ ಹೃದಯ ಒಡೆದ ಸ್ಮೃತಿ ಮಂಧಾನ..!
ಕೆಳಹಂತದ ಅಧಿಕಾರಿಗಳು ಹಲವು ವರ್ಷಗಳಿಂದ ಠಿಕಾಣಿ ಹೂಡಿದ್ದಾರೆ. ಅಂತವರು ಅಕ್ರಮಗಳಿಗೆ ಕೈಜೋಡಿಸುತ್ತಿದ್ದಾರೆ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ಇದೆಲ್ಲವು ನನ್ನ ಗಮನಕ್ಕೆ ಇದೆ. ಬೇರೆಡೆ ವರ್ಗಾವಣೆಯಾದವರು ಮತ್ತೇ ಅದೇ ಸ್ಥಳಕ್ಕೆ ಮರು ವರ್ಗಾವಣೆಯಾಗಿಲ್ಲ. ನಾನೇ ವರ್ಗಾವಣೆ ಮಾಡುವುದರಿಂದ, ಅಂತಹ ಒಂದು ನಿದರ್ಶನವನ್ನು ತೋರಿಸಿ. ಇದು ಸಾಧ್ಯವೇ ಇಲ್ಲ. ಇಲಾಖೆಯಲ್ಲಿ ಮತ್ತಷ್ಟು ಸುಧಾರಣೆ ತರಲು ಕೆಲವು ನಿಯಮಗಳನ್ನು ರೂಪಿಸಲಾಗುತ್ತಿದೆ ಎಂದು ತಿಳಿಸಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.