ಬೆಂಗಳೂರು : ರಾಜ್ಯದಲ್ಲಿ ನಡೆದಿರುವ ಕೊಲೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಗೃಹಮಂತ್ರಿ ಅರಗ ಜ್ಞಾನೇಂದ್ರ ವಿರುದ್ದ ಸಾರ್ವಜನಿಕರಿಂದ ಅಸಮಾಧಾನ ವ್ಯಕ್ತ ವಾಗುತ್ತಿದೆ. ಇತ್ತೀಚೆಗಷ್ಟೇ ಘಟನೆಗೆ ಸಂಬಂಧಪಟ್ಟಂತೆ ಅರಗ ಜ್ಞಾನೇಂದ್ರ ಮನೆ ಮೇಲೆ ಮುತ್ತಿಗೆ  ಹಾಕಲಾಗಿತ್ತು.  ಈ ಹಿನ್ನೆಲೆಯಲ್ಲಿ ಇದೀಗ ಬೆಂಗಳೂರು ಪೊಲೀಸರು ಎಚ್ಚೆತ್ತುಕೊಂಡಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಂಗಳುರಿನಲ್ಲಿದ್ದು, ಅವರಿಗೆ ಭಾರೀ ಭದ್ರತೆ ಒದಗಿಸಲಾಗಿದೆ. 


COMMERCIAL BREAK
SCROLL TO CONTINUE READING

ಸಂಕಲ್ಪ ಸಮೃದ್ದಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನಿನ್ನೆ ರಾತ್ರಿ ಬೆಂಗಳೂರಿಗೆ ಆಗಮಿಸಿದ್ದಾರೆ. ಈ ನಿಟ್ಟಿನಲ್ಲಿ ಬೆಂಗಳೂರು ಪೊಲೀಸರು ಬಹಳ ಎಚ್ವರಿಕೆಯ ಹೆಜ್ಜೆ ಇಡುತ್ತಿದ್ದಾರೆ. ರಾಜ್ಯ ಗೃಹ ಸಚಿವರಿಗೆ ಆದ ರೀತಿ ಕೇಂದ್ರ ಗೃಹ ಸಚಿವರಿಗೂ ಆಗದಂತೆ  ತೀವ್ರ ನಿಗಾ ವಹಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನೂ ಕೈಗೊಳ್ಳಲಾಗಿದೆ.


ಇದನ್ನೂ ಓದಿ ಕಾಂಗ್ರೆಸ್ ದೌರ್ಬಲ್ಯದ ಮೇಲೆ ನಾವು ರಾಜಕೀಯ ಮಾಡುವುದಿಲ್ಲ -ಹೆಚ್.ಡಿ.ಕುಮಾರಸ್ವಾಮಿ


ಅಮಿತ್ ಷಾ ಝಡ್ ಫ್ಲಸ್ ಭದ್ರತೆ ಇದ್ದರೂ ಕೂಡಾ ಬೆಂಗಳೂರು ಪೊಲೀಸರಿಂದಲೂ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ತಾಜ್ ವೆಸ್ಟ್ ಏಂಡ್ ಸುತ್ತಮುತ್ತ ಭಾರೀ ಬಂದೋಬಸ್ತ್ ಮಾಡಿಕೊಳ್ಳಲಾಗಿದೆ. ಹೋಟೆಲ್ ಸುತ್ತಮುತ್ತ 2500 ಪೊಲೀಸರ ನಿಯೋಜನೆ ಮಾಡಲಾಗಿದೆ. 


7 ಮಂದಿ ಡಿಸಿಪಿ ನೇತೃತ್ವದಲ್ಲಿ ಬಿಗಿಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. 18 ಎಸಿಪಿ, 53 ಇನ್ಸ್ ಪೆಕ್ಟರ್, 147ಸಬ್ ಇನ್ಸ್ ಪೆಕ್ಟರ್, 180 ಎಎಸ್ ಐ, 1162 ಹೆಡ್ ಕಾನ್ಸ್ ಟೇಬಲ್, 15 ಕೆಎಸ್ ಆರ್ ಪಿ ಬೆಟಾಲಿಯನ್ ನಿಯೋಜನೆ ಮಾಡಲಾಗಿದೆ. ಒಟ್ಟಿನಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗೃತಾ ಕ್ರಮ ಕೈಗೊಳ್ಳಲಾಗಿದೆ. 


ಇದನ್ನೂ ಓದಿ : "ಸಿದ್ರಾಮಯ್ಯನವರು ಈ ನಾಡಿಗೆ ಕೊಟ್ಟಂತಹ ಹಲವು ಜನಪರ ಯೋಜನೆಗಳನ್ನ ಜನರು ಮರೆತಿಲ್ಲ"


 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.