ಕಾಲೇಜು ವಿದ್ಯಾರ್ಥಿನಿಯರನ್ನು ಬಳಸಿ ಹೈಟೆಕ್ ವೇಶ್ಯಾವಾಟಿಕೆ; ನಾಲ್ವರ ಬಂಧನ..!

ಈ ಹಿಂದೆ ವೇಶ್ಯಾವಾಟಿಕೆ ದಂಧೆಯಲ್ಲಿ ಓರ್ವ ಅಪ್ರಾಪ್ತ ವಿದ್ಯಾರ್ಥಿನಿ ಸೇರಿದಂತೆ ನಾಲ್ವರು ಸಂತ್ರಸ್ಥರನ್ನು ಮಂಗಳೂರು ಪೊಲೀಸರು ರಕ್ಷಿಸಿದ್ದರು.

Written by - Zee Kannada News Desk | Last Updated : Mar 8, 2022, 06:09 PM IST
  • ಮಂಗಳೂರಿನಲ್ಲಿ ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯರನ್ನು ಬಳಸಿಕೊಂಡು ಹೈಟೆಕ್ ವೇಶ್ಯಾವಾಟಿಕೆ ದಂಧೆ
  • ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ನಾಲ್ವರನ್ನು ಬಂಧಿಸಿದ ಪೊಲೀಸರು
  • ಘಟನೆಗೆ ಸಂಬಂಧಿಸಿದಂತೆ 5 ಪ್ರಕರಣ ದಾಖಲಿಸಿ 10 ಮಂದಿ ವಿರುದ್ಧ ಎಫ್‌ಐಆರ್ ದಾಖಲಿಸಿದ ಖಾಕಿಪಡೆ
ಕಾಲೇಜು ವಿದ್ಯಾರ್ಥಿನಿಯರನ್ನು ಬಳಸಿ ಹೈಟೆಕ್ ವೇಶ್ಯಾವಾಟಿಕೆ; ನಾಲ್ವರ ಬಂಧನ..! title=
ನಾಲ್ವರು ಆರೋಪಿಗಳನ್ನು ಬಂಧಿಸಿದ ಮಂಗಳೂರು ಪೊಲೀಸರು

ಮಂಗಳೂರು: ಕರಾವಳಿ ಜಿಲ್ಲೆಯಲ್ಲಿ ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯರನ್ನು ಬಳಸಿಕೊಂಡು ನಡೆಸುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ ದಂಧೆಯ ಮತ್ತೊಂದು ಕರಾಳಮುಖ ಬಯಲಾಗಿದೆ. ಮತ್ತೊಬ್ಬ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಬಳಸಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.

ಈ ಹಿಂದೆ ವೇಶ್ಯಾವಾಟಿಕೆ ದಂಧೆಯಲ್ಲಿ ಓರ್ವ ಅಪ್ರಾಪ್ತ ವಿದ್ಯಾರ್ಥಿನಿ ಸೇರಿದಂತೆ ನಾಲ್ವರು ಸಂತ್ರಸ್ಥರನ್ನು ಮಂಗಳೂರು ಪೊಲೀಸರು ರಕ್ಷಿಸಿದ್ದರು. ಇದೀಗ ಮತ್ತೊಬ್ಬ ವಿದ್ಯಾರ್ಥಿನಿಯನ್ನು ರಕ್ಷಣೆ ಮಾಡಿದ್ದಾರೆ. ಮಂಗಳೂರು ಪೊಲೀಸರು ಮತ್ತೆ ಪ್ರತ್ಯೇಕ 4 ಪೋಕ್ಸೋ ಪ್ರಕರಣ ಸೇರಿದಂತೆ ಒಟ್ಟು ಐದು ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.  

ಇದನ್ನೂ ಓದಿ: Kolar Crime News: ಮಕ್ಕಳಿಗೆ ಶ್ರೀಮಂತಿಕೆ ತೋರಿಸಲು ಕಳ್ಳನಾದ ತಂದೆ..!

ನಾಲ್ವರು ಆರೋಪಿಗಳ ಬಂಧನ

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ರಶೀದ್ ಸಾಹೇಬ್(73), ಮೊಹಮ್ಮದ್ ಆಲಿ(74), ಗ್ರೆಗರಿ ಲಿಯೋನಾರ್ಡ್ ಸಿಕ್ವೇರಾ(62) ಹಾಗೂ ಇಸ್ಮಾಯಿಲ್(41) ಬಂಧಿತರು. ಗ್ರಾಹಕರ ರೀತಿಯಲ್ಲಿ ಬಂದು ಈ ನಾಲ್ವರು ಆರೋಪಿಗಳು ವಿದ್ಯಾರ್ಥಿನಿಗೆ ಲೈಂಗಿಕ ‌ಕಿರುಕುಳ ನೀಡಿದ್ದರು. ಈ ಬಗ್ಗೆ ಮಂಗಳೂರಿನ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರಿನ ನಂದಿಗುಡ್ಡ ರಿಯಾನಾ ರೆಸಿಡೆನ್ಸಿ ಅಪಾರ್ಟ್ಮೆಂಟ್‌ನ ಪೆಂಟ್ ಹೌಸ್‌ನಲ್ಲಿ ಹೈಟೆಕ್ ವೇಶ್ಯಾವಾಟಿಕೆ ಬೆಳಕಿಗೆ ಬಂದಿತ್ತು. ಮಂಗಳೂರಿನ ಸಿಸಿಬಿ ಪೊಲೀಸರು ಪ್ರಕರಣದ ಬೆನ್ನು ಬಿದ್ದು ತನಿಖೆ ನಡೆಸಿದ್ದರು. ಈ ಸಂಬಂಧ ಇದೀಗ 5 ಪ್ರಕರಣಗಳನ್ನು ದಾಖಲಿಸಿ 10 ಮಂದಿಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ: Ukraine Russia War: ಬೆಕ್ಕಿನೊಂದಿಗೆ ಸೇಫಾಗಿ ಬಂದು ಡಿಸಿಗೆ ಧನ್ಯವಾದ ಹೇಳಿದ ವಿದ್ಯಾರ್ಥಿನಿ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News