Hijab Controversy: ರಾಜ್ಯದ ಅಲ್ಪಸಂಖ್ಯಾತರ ಶಾಲೆಗಳಲ್ಲಿ ಹಿಜಾಬ್ ನಿಷೇಧಿಸಿ ಆದೇಶ ಜಾರಿಗೊಳಿಸಿದ ಬೊಮ್ಮಾಯಿ ಸರ್ಕಾರ

Kanranataka Hijab Controversy - ಕರ್ನಾಟಕದ ಅಲ್ಪಸಂಖ್ಯಾತರ ಶಾಲೆಗಳಲ್ಲೂ (Karnataka Minority Schools)  ಹಿಜಾಬ್ ಅನ್ನು ನಿಷೇಧಿಸಲಾಗಿದೆ. ಈ ಸಂಬಂಧ ಬೊಮ್ಮಾಯಿ ಸರ್ಕಾರ (Bommai Government) ಗುರುವಾರ ಆದೇಶ ಹೊರಡಿಸಿದೆ. 

Written by - Nitin Tabib | Last Updated : Feb 18, 2022, 11:24 AM IST
  • ಕರ್ನಾಟಕದ ಅಲ್ಪಸಂಖ್ಯಾತರ ಶಾಲೆಗಳಲ್ಲೂ (Karnataka Minority Schools) ಹಿಜಾಬ್ ಅನ್ನು ನಿಷೇಧಿಸಲಾಗಿದೆ.
  • ಈ ಸಂಬಂಧ ಬೊಮ್ಮಾಯಿ ಸರ್ಕಾರ (Bommai Government) ಗುರುವಾರ ಆದೇಶ ಹೊರಡಿಸಿದೆ.
  • 'ಹೈಕೋರ್ಟ್‌ನ ಈ ಮೊದಲು ನೀಡಿರುವ ಆದೇಶವು ವಸತಿ ಶಾಲೆಗಳು, ಕಾಲೇಜುಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೌಲಾನಾ ಆಜಾದ್ ಮಾದರಿ ಆಂಗ್ಲ ಮಾಧ್ಯಮ ಶಾಲೆಗಳಿಗೂ ಕೂಡ ಅನ್ವಯಿಸುತ್ತದೆ'
Hijab Controversy: ರಾಜ್ಯದ ಅಲ್ಪಸಂಖ್ಯಾತರ ಶಾಲೆಗಳಲ್ಲಿ ಹಿಜಾಬ್ ನಿಷೇಧಿಸಿ ಆದೇಶ ಜಾರಿಗೊಳಿಸಿದ ಬೊಮ್ಮಾಯಿ ಸರ್ಕಾರ title=
Karnataka Hijab Controversy

Kanranataka Hijab Controversy - ಕರ್ನಾಟಕದ ಅಲ್ಪಸಂಖ್ಯಾತರ ಶಾಲೆಗಳಲ್ಲೂ (Karnataka Minority Schools)  ಹಿಜಾಬ್ ಅನ್ನು ನಿಷೇಧಿಸಲಾಗಿದೆ. ಈ ಸಂಬಂಧ ಬೊಮ್ಮಾಯಿ ಸರ್ಕಾರ (Bommai Government) ಗುರುವಾರ ಆದೇಶ ಹೊರಡಿಸಿದೆ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ (Minority Welfare Department) ನಡೆಸುತ್ತಿರುವ ಶಾಲೆಗಳು ಸೇರಿದಂತೆ ರಾಜ್ಯದ ಮೌಲಾನಾ ಆಜಾದ್ ಮಾದರಿ ಆಂಗ್ಲ ಮಾಧ್ಯಮ (Moulana Azad Model English Mediam Schools) ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಹಿಜಾಬ್ (Hijab) ಧರಿಸದಂತೆ ನಿರ್ಬಂಧ ಹೇರಲಾಗಿದೆ.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಹಜ್ ಮತ್ತು ವಕ್ಫ್ ಇಲಾಖೆ ಕಾರ್ಯದರ್ಶಿ ಮೇಜರ್ ಮಣಿವಣ್ಣನ್ ಪಿ ಈ ಸಂಬಂಧ ಆದೇಶ (Government Of Karnataka) ಹೊರಡಿಸಿದ್ದಾರೆ. ತರಗತಿಯೊಳಗೆ ವಿದ್ಯಾರ್ಥಿಗಳು ಕೇಸರಿ ಶಾಲು, ಸ್ಕಾರ್ಫ್ ಮತ್ತು ಹಿಜಾಬ್ ಧರಿಸುವುದನ್ನು ನಿಷೇಧಿಸುವ ಕರ್ನಾಟಕ ಹೈಕೋರ್ಟ್‌ನ (Karnataka High Court) ಮಧ್ಯಂತರ ಆದೇಶವನ್ನು ಇಲಾಖೆ ತನ್ನ ಆದೇಶದಲ್ಲಿ ಉಲ್ಲೇಖಿಸಿದೆ.

'ಹೈಕೋರ್ಟ್‌ನ ಈ ಮೊದಲು ನೀಡಿರುವ ಆದೇಶವು ವಸತಿ ಶಾಲೆಗಳು, ಕಾಲೇಜುಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೌಲಾನಾ ಆಜಾದ್ ಮಾದರಿ ಆಂಗ್ಲ ಮಾಧ್ಯಮ ಶಾಲೆಗಳಿಗೂ ಕೂಡ ಅನ್ವಯಿಸುತ್ತದೆ. ಮೌಲಾನಾ ಆಜಾದ್ ಮಾಡೆಲ್ ಇಂಗ್ಲಿಷ್ ಮೀಡಿಯಂ ಶಾಲೆಗಳು ಹಾಗೂ ಅಲ್ಪಸಂಖ್ಯಾತರ ಇಲಾಖೆ ಅಡಿಯಲ್ ಬರುವ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಕೇಸರಿ ಶಾಲು, ಸ್ಕಾರ್ಫ್ ಹಾಗೂ ಹಿಜಾಬ್ ಧರಿಸುವುದು ನಿಷೇಧಿಸಲಾಗಿದೆ' ಎಂದು ಆದೇಶದಲ್ಲಿ ಹೇಳಲಾಗಿದೆ.

ಇದನ್ನೂ ಓದಿ-Karnataka Hijab row: "ಪ್ರತಿಭಟನೆ ಮುಂದುವರಿದರೆ ಕಠಿಣ ಕ್ರಮ"- ಗೃಹ ಸಚಿವರ ಎಚ್ಚರಿಕೆ

ಶಾಲಾ-ಕಾಲೇಜುಗಳಲ್ಲಿ ಅಲ್ಪಸಂಖ್ಯಾತ ಬಾಲಕಿಯರ ವಿಚಾರದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಆದೇಶ ಬಂದಿದೆ. ಕಳೆದ ವಾರ, ಹೈಕೋರ್ಟ್ ಆದೇಶದ ನಂತರ ಬುರ್ಖಾ ಮತ್ತು ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರಿಗೆ ಶಾಲಾ-ಕಾಲೇಜುಗಳಲ್ಲಿ ಪ್ರವೇಶ ನಿರಾಕರಿಸಲಾಗಿತ್ತು.

ಇದನ್ನೂ ಓದಿ-DK Shivakumar vs KS Eshwarappa: ಏಕವಚನದಲ್ಲಿ ಬೈದಾಡಿಕೊಂಡ ಡಿಕೆಶಿ ಮತ್ತು ಈಶ್ವರಪ್ಪ

ಈ ಮಧ್ಯೆ, ಶಿವಮೊಗ್ಗ ಜಿಲ್ಲಾ ಪ್ರಾಧಿಕಾರ ಹೊರಡಿಸಿರುವ ನಿಷೇಧಾಜ್ಞೆ ಉಲ್ಲಂಘಿಸಿದ ಒಂಬತ್ತು ಜನರ ವಿರುದ್ಧ ಸಿಆರ್‌ಪಿಸಿ ಸೆಕ್ಷನ್ 144 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಜಿಲ್ಲಾ ಕೇಂದ್ರ ಪಟ್ಟಣದ ಪಿಯು ಕಾಲೇಜು ಕ್ಯಾಂಪಸ್‌ನಲ್ಲಿ ಮುಸ್ಲಿಂ ಹುಡುಗಿಯರು ಬುರ್ಖಾ ಧರಿಸಲು ಅವಕಾಶ ನೀಡದ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಿದ್ದರು.

ಇದನ್ನೂ ಓದಿ-ಕೊತ್ವಾಲ್ ಶಿಷ್ಯನೆಂಬ ಮಾತ್ರಕ್ಕೆ ಸದನದಲ್ಲೂ ಅದೇ ರೀತಿ ವರ್ತಿಸುವುದು ತರವೇ?: ಡಿಕೆಶಿಗೆ ಬಿಜೆಪಿ ಪ್ರಶ್ನೆ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News