ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಭಾಗವಲ್ಲ : ಹೈಕೋರ್ಟ್

ಹಿಜಾಬ್ ಗೆ ಅವಕಾಶ ಕೋರಿ ಸಲ್ಲಿಸಲಾಗಿದ್ದ ಎಲ್ಲಾ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಹಿಜಾಬ್ ಇಸ್ಲಾಂ ಧರ್ಮದ ಅವಿಭಾಜ್ಯ ಅಂಗವಲ್ಲ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ.

Written by - Zee Kannada News Desk | Last Updated : Mar 15, 2022, 11:49 AM IST
  • ಹಿಜಾಬ್ ಗೆ ಅವಕಾಶ ಕೋರಿದ್ದ ಎಲ್ಲಾ ರಿಟ್ ಅರ್ಜಿ ವಜಾ
  • ಸರ್ಕಾರದ ಆದೇಶ ಸರಿಯಿದೆ ಎಂದ ಹೈ ಕೋರ್ಟ್
  • ಹೈಕೋರ್ಟ್ ವಿಸ್ತೃತ ಪೀಠ ಮಹತ್ವದ ಆದೇಶ
ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಭಾಗವಲ್ಲ  : ಹೈಕೋರ್ಟ್ title=
ಹಿಜಾಬ್ ಗೆ ಅವಕಾಶ ಕೋರಿದ್ದ ಎಲ್ಲಾ ರಿಟ್ ಅರ್ಜಿ ವಜಾ (file photo)

ಬೆಂಗಳೂರು : ಹಿಜಾಬ್ ವಿವಾದಕ್ಕೆ (Hijab Row)  ಸಂಬಂಧಿಸಿದಂತೆ ಕರ್ನಾಟಕ ಹೈ ಕೋರ್ಟ್ (Karnataka High Court) ತೀರ್ಪು ಪ್ರಕಟಿಸಿದೆ. ಹಿಜಾಬ್ ಗೆ ಅವಕಾಶ ಕೋರಿ ಸಲ್ಲಿಸಲಾಗಿದ್ದ ಎಲ್ಲಾ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಹಿಜಾಬ್ ಇಸ್ಲಾಂ ಧರ್ಮದ ಅವಿಭಾಜ್ಯ ಅಂಗವಲ್ಲ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ.

ಹಿಜಾಬ್ ಧಾರ್ಮಿಕ ನಂಬಿಕೆಯ ಭಾಗವಾಗಿರುವುದರಿಂದ ತರಗತಿಯಲ್ಲಿ ಶಾಲಾ ಸಮವಸ್ತ್ರದ ಜೊತೆಗೆ ಹಿಜಾಬ್ (Hijab) ಧರಿಸಲು ಅವಕಾಶ ನೀಡುವಂತೆ ಕೋರಿ , ಉಡುಪಿಯ  ವಿದ್ಯಾರ್ಥಿನಿಯರು ಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಹಿಜಾಬ್ ಗೆ ಅನುಮತಿ ಕೋರಿ ಸಲ್ಲಿಸಲಾಗಿದ್ದ ಎಲ್ಲಾ ಅರ್ಜಿಯನ್ನು ರಾಜ್ಯ ಹೈ ಕೋರ್ಟ್ ವಜಾ ಮಾಡಿದೆ (Karnataka High Court).

ಇದನ್ನೂ ಓದಿ : HD Kumaraswamy : 'ತಾಜ್ ವೆಸ್ಟೆಂಡ್‌ನಲ್ಲಿ ರಾಸಲೀಲೆ ಮಾಡಲು ನಾನು ಹೋಗುತ್ತಿರಲಿಲ್ಲ'

ಕರ್ನಾಟಕ ಹೈ ಕೋರ್ಟ್‌ನ ತೀರ್ಪನ್ನು ಸ್ವಾಗತಿಸುವುದಾಗಿ ಶಿಕ್ಷಣ ಸಚಿವ ಬಿಸಿ ನಾಗೇಶ್ ಹೇಳಿದ್ದಾರೆ. ಈ ನೆಲ, ಕಾನೂನು ಅಂತಿಮ ಎಂದು ಅವರು ಹೇಳಿದ್ದಾರೆ. 

 

ಹಿಜಾಬ್ ತೀರ್ಪು ಹಿನ್ನೆಲೆಯಲ್ಲಿ ನಗರದಾದ್ಯಂತ 10 ಸಾವಿರಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಯನ್ನು  ನಿಯೋಜಿಸಲಾಗಿದೆ (High Security). ಸೂಕ್ಷ್ಮ ಹಾಗೂ ಅತಿಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದೆ. ಅಯಾ ವಿಭಾಗಗಳಲ್ಲಿ ಡಿಸಿಪಿಗಳಿಂದ ಬಂದೋಬಸ್ತ್ ಪರಿಶೀಲನೆ ನಡೆಸಲಾಗಿದೆ. ಇಬ್ಬರು ಹೆಚ್ಚುವರಿ ಪೊಲೀಸ್ ಆಯುಕ್ತರು, 8 ಡಿಸಿಪಿ, 40 ಎಸಿಪಿ, 120 ಇನ್ಸ್‌ಪೆಕ್ಟರ್ ಗಗಳನ್ನೂ  ಭದ್ರತೆಗೆ ನಿಯೋಜಿಸಲಾಗಿದೆ. ಅಲ್ಲದೆ, 40 ಸಿಎಆರ್, 30 ಕೆಎಸ್ಆರ್ ಪಿ ತುಕಡಿಯನ್ನು ಕೂಡಾ ನಿಯೋಜಿಸಲಾಗಿದೆ.  

ನಗರದಾದ್ಯಂತ 144 ಸೆಕ್ಷನ್ ಜಾರಿ ಮಾಡಲಾಗಿದೆ.  ಒಂದು ವಾರಗಳವರೆಗೆ ನಗರದಲ್ಲಿ  ಪ್ರತಿಭಟನೆಗಳಿಗೆ ನಿರ್ಬಂಧ ಹೇರಲಾಗಿದೆ. ಸೋಷಿಯಲ್ ಮೀಡಿಯಾ (Social Media)ಚಟುವಟಿಕೆಗಳ ಮೇಲೆ ಕೂಡಾ ಖಾಕಿ ಹದ್ದಿನ ಕಣ್ಣು ಇರಿಸಲಿದೆ. ನಗರದ ಶಾಲಾ ಕಾಲೇಜುಗಳ ಮೇಲೆ ಹೆಚ್ಚಿನ ನಿಗಾ ವಹಿಸಲು ಸೂಚಿಸಲಾಗಿದೆ. 

 

ಇದನ್ನೂ ಓದಿ :  ಇಂದಿರಾ ಕ್ಯಾಂಟೀನ್ ಮುಳುಗಿಸುತ್ತಿರುವ ಭ್ರಷ್ಟ ಬಿಜೆಪಿ ಸರ್ಕಾರ: ಕಾಂಗ್ರೆಸ್ ಆಕ್ರೋಶ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News