ನ್ಯಾಯಾಲಯದಲ್ಲಿ ಹಿಜಾಬ್ ಪ್ರಕರಣ ಹೂಡಿದ್ದ ವಿದ್ಯಾರ್ಥಿನಿಯ ತಂದೆಯ ಹೋಟೆಲ್ ಮೇಲೆ ದಾಳಿ, ಸಹೋದರನಿಗೆ ಗಾಯ
ಕರ್ನಾಟಕ ಹೈಕೋರ್ಟ್‌ನಲ್ಲಿ ಹಿಜಾಬ್‌ಗಾಗಿ ಹೋರಾಟ ನಡೆಸುತ್ತಿರುವ ವಿದ್ಯಾರ್ಥಿನಿಯ ತಂದೆಯ ಹೋಟೆಲ್ ಮೇಲೆ ಸೋಮವಾರ ತಡರಾತ್ರಿ ಕೆಲವು ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ.
ಬೆಂಗಳೂರು : ಕರ್ನಾಟಕ ಹೈಕೋರ್ಟ್‌ನಲ್ಲಿ (Karnataka High Court)ಹಿಜಾಬ್‌ಗಾಗಿ ಹೋರಾಟ ನಡೆಸುತ್ತಿರುವ ವಿದ್ಯಾರ್ಥಿನಿಯ ತಂದೆಯ ಹೋಟೆಲ್ ಮೇಲೆ ಸೋಮವಾರ ತಡರಾತ್ರಿ ಕೆಲವು ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಇದರಲ್ಲಿ ವಿದ್ಯಾರ್ಥಿನಿಯ ಸಹೋದರ ಸೈಫ್ ಗಾಯಗೊಂಡಿದ್ದಾರೆ. ಸೈಫ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಹಿಂದೂ ಸಂಘಟನೆಯ ಕಾರ್ಯಕರ್ತರ ಮೇಲೆ ಆರೋಪ :
ದಾಳಿಕೋರರು ಹಿಂದೂ ಸಂಘಟನೆಯ ಕಾರ್ಯಕರ್ತರು ಎಂದು, ವಿದ್ಯಾರ್ಥಿನಿಯ ಕುಟುಂಬದವರು ಆರೋಪಿಸಿದ್ದಾರೆ. ಪೊಲೀಸರು (Police)ಸ್ಥಳಕ್ಕೆ ಆಗಮಿಸಿದ ತಕ್ಷಣ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಉಡುಪಿಯ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ : ಶಿವಮೊಗ್ಗದಲ್ಲಿ ಹರ್ಷ ಕೊಲೆ ಪ್ರಕರಣ: ಮೂವರು ಆರೋಪಿಗಳ ಬಂಧನ
ಪ್ರಕರಣದ ತನಿಖೆ ಮುಂದುವರಿದಿದೆ :
ಈ ಘಟನೆಯ ಬಗ್ಗೆ ವಿದ್ಯಾರ್ಥಿನಿಯ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಪ್ರಕರಣದ ತನಿಖೆ ಕೂಡಾ ಮುಂದುವರೆದಿದೆ. ಸರಿಯಾದ ಸಮಯದಲ್ಲಿ ಸರಿಯಾದ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಪೊಲೀಸರು (Police)ತಿಳಿಸಿದ್ದಾರೆ.
ಏನಿದು ಪ್ರಕರಣ :
ಕರ್ನಾಟಕದ ಉಡುಪಿಯಲ್ಲಿ, ಕಾಲೇಜಿನಲ್ಲಿ ಹಿಜಾಬ್ (Hijab) ಧರಿಸಲು ಅವಕಾಶ ನೀಡದಿರುವ ಶಾಲಾ ಕಾಲೇಜು ಆಡಳಿತದ ನಿರ್ಧಾರದ ವಿರುದ್ದ ಕೆಲವು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದರು (Hijab Protest). ಇದಾದ ಬಳಿಕ ಹಿಜಾಬ್ ಗೆ ಅವಕಾಶ ನೀಡುವುದಾದರೆ ನಾವು ಕೇಸರಿ ಶಾಲು ಹಾಕಿಕೊಂಡು ಬರುತ್ತೇವೆ ಎಂದು ಕೆಲವು ವಿದ್ಯಾರ್ಥಿಗಳು ಕೇಸರಿ ಶಾಲು ಹಾಕಿಕೊಂಡು ಬಂದಿದ್ದರು. ನಂತರ ಇದು ದೇಶದ ಬೇರೆ ಬೇರೆ ಪ್ರದೇಶಗಳಿಗೂ ಹಬ್ಬಿಕೊಂಡಿತ್ತು. ಹಿಜಾಬ್ ವಿವಾದದ ನಡುವೆ ಭಾನುವಾರ ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತನ ಹತ್ಯೆ ನಡೆದಿದೆ. ಬಜರಂಗದಳ ಕಾರ್ಯಕರ್ತ ಹರ್ಷಣ ಹತ್ಯೆಯ ನಂತರ ಶಿವಮೊಗ್ಗ ಜಿಲ್ಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಹಿಜಾಬ್ ವಿರುದ್ಧ ಮತ್ತು ಕೇಸರಿ ಶಾಲನ್ನು ಬೆಂಬಲಿಸಿ ಹರ್ಷ ತಮ್ಮ ಫೇಸ್‌ಬುಕ್ ಪ್ರೊಫೈಲ್‌ನಲ್ಲಿ ಪೋಸ್ಟ್ ಮಾಡಿದ್ದರೂ. ಈ ಹಿನ್ನೆಲೆಯಲ್ಲಿ ಹಿಜಾಬ್ ವಿವಾದಕ್ಕೂ (Hijab Contraversy), ಈ ಹತ್ಯೆಗೂ ಲಿಂಕ್ ಇದೆಯೇ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ಹರ್ಷ ಹತ್ಯೆ ಪೂರ್ವನಿಯೋಜಿತ, ನಿರ್ದಾಕ್ಷಿಣ್ಯ ಕ್ರಮಕ್ಕೆ ಒತ್ತಾಯ: ಸಚಿವ ಕೆ.ಸುಧಾಕರ್
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.