ಮಂಗಳೂರು : ಜಿಲ್ಲೆಯ ಉಪ್ಪಿನಂಗಡಿ ಕಾಲೇಜಿನಿಂದ ಅಮಾನತಾಗಿದ್ದ ಆರು ವಿದ್ಯಾರ್ಥಿನಿಯರು ಇಂದು ಮರಳಿ ಹಾಜರಾಗಿದ್ದಾರೆ.
ಹಿಜಾಬ್ ಧರಿಸಿ ಸರ್ಕಾರಿ ನಿಯಮಾವಳಿಯನ್ನು ಉಲ್ಲಂಘಿಸಿ ತರಗತಿಗೆ ಪ್ರವೇಶಿಸುತ್ತಿದ್ದ 24 ವಿದ್ಯಾರ್ಥಿನಿಯರನ್ನು ಅಮಾನತು ಮಾಡಲಾಗಿತ್ತು. ಇದಕ್ಕೂ ಮೊದಲು 6 ಜನ ವಿದ್ಯಾರ್ಥಿನಿಯರು ಅಮಾನತು ಆಗಿದ್ದರು, ಅವರು ಇಂದು ಕಾಲೇಜಿಗೆ ಹಾಜರಾಗಿದ್ದಾರೆ.
ಇದನ್ನೂ ಓದಿ : 3ನೇ ಸ್ಥಾನಕ್ಕೆ ಕಡೆಯವರೆಗೂ ಕಾಯಬೇಕು, ನಮಗೇ ಗೆಲುವು: ಸಿಎಂ ಬೊಮ್ಮಾಯಿ..!
46 ಮಂದಿ ವಿದ್ಯಾರ್ಥಿನಿಯರು ಹಿಜಾಬ್ ತೆಗೆದಿಟ್ಟು ಸಮವಸ್ತ್ರದೊಂದಿಗೆ ತರಗತಿಗೆ ಹಾಜರಾಗಲು ನಿರ್ಧಾರದ ಮಾಡಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಸೋಮವಾರದಂದು ಕಾಲೇಜು ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಲಾಗಿತ್ತು. ವಿದ್ಯಾರ್ಥಿನಿಯರ ಹೆತ್ತವರಿಗೆ ಘಟನೆಯ ಬಗ್ಗೆ ಮಾಹಿತಿ ನೀಡಲಾಗಿತ್ತು. ಬಹುತೇಕ ಹೆತ್ತವರು ತಮ್ಮ ಮಕ್ಕಳು ಹಿಜಾಬ್ ಹೋರಾಟದಲ್ಲಿ ಭಾಗಿಯಾಗಿರುವ ಬಗ್ಗೆ ತಮಗೆ ಮಾಹಿತಿಯೇ ಇಲ್ಲವೆಂದಿದ್ದರು. ಹಿಜಾಬ್ ಧರಿಸಿ ತರಗತಿ ಪ್ರವೇಶಿಸಿದ್ದಕ್ಕಾಗಿ ಒಂದು ವಾರದ ಹಿಂದೆ 6 ಮಂದಿ ವಿದ್ಯಾರ್ಥಿನಿಯರು ಅಮಾನತಾಗಿದ್ದರು.
ಸಧ್ಯ ವಿದ್ಯಾರ್ಥಿನಿಯರು ಕಾಲೇಜಿಗೆ ಬಂದು ಕಾಲೇಜಿನ ಸಮವಸ್ತ್ರ ನಿಯಮಾವಳಿಯನ್ನು ಪಾಲಿಸುವುದಾಗಿ ಹೇಳಿಕೆ ನೀಡಿ, ತರಗತಿಗೆ ಹಾಜರಾಗಿದ್ದಾರೆ. ಸುಮಾರು 40ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಕಾಲೇಜಿಗೂ ಬಾರದೇ, ಪ್ರತಿಭಟನೆಯಲ್ಲೂ ಪಾಲ್ಗೊಳ್ಳದ ಕಾಲೇಜಿನಿಂದ ಹೊರಗುಳಿದಿದ್ದರು.
ಉಪ್ಪಿನಂಗಡಿ ಕಾಲೇಜಿನಲ್ಲಿ ಒಟ್ಟು 101 ಮುಸ್ಲಿಂ ವಿದ್ಯಾರ್ಥಿನಿಯರಿದ್ದಾರೆ. ಅವರಲ್ಲಿ 24 ಮಂದಿ ಅಮಾನತಾಗಿದ್ದರು. ಉಳಿದ ವಿದ್ಯಾರ್ಥಿನಿಯರು ಗೈರಾಗುತ್ತಿದ್ದರು. ಸದ್ಯ ಒಂದು ವಾರ ತರಗತಿ 24 ವಿದ್ಯಾರ್ಥಿನಿಯರು ನಿರ್ಬಂಧಕ್ಕೆ ಒಳಗಾಗಿದ್ದಾರೆ. ಅವಧಿ ಮುಗಿದ ಬಳಿಕ ಸೋಮವಾರ ತರಗತಿಗೆ ಹಾಜರಾಗುವ ಸಾಧ್ಯತೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ : ಸಿದ್ದರಾಮಯ್ಯ ಎರಡು ತಲೆ ಹಾವು: ಸಚಿವ ಶ್ರೀರಾಮುಲು
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ