ಮಂಡ್ಯ: ಹಿಂದಿ ರಾಷ್ಟ್ರೀಯ ಭಾಷೆ ಅಲ್ಲ. ಒಂದು ವೇಳೆ ಬಲವಂತವಾಗಿ ಹಿಂದಿ ಭಾಷೆಯನ್ನು ಹೇರಿಕೆ ಮಾಡಿದರೆ ರಕ್ತಪಾತ ಉಂಟಾಗಬಹುದು ಎಂದು ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗುಡುಗಿದ್ದಾರೆ.
ಮಂಡ್ಯದ ಕರ್ನಾಟಸ ಸಂಘದ ಕಚೇರಿ ಆವರಣದಲ್ಲಿ ನಡೆದ ಡಾ. ಹಮಾನಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಸಿದ್ದರಾಮಯ್ಯ(Siddaramaiah), ಕರ್ನಾಟಕ ಸೇರಿ ದಕ್ಷಿಣ ಭಾರತದ ರಾಜ್ಯಗಳಲ್ಲಿ ಕೇಂದ್ರ ಸರ್ಕಾರ ಹಿಂದಿ ಹೇರಿಕೆ ಮಾಡಲು ಶ್ರಮಿಸುತ್ತಿದೆ. ಇದನ್ನು ಸಹಿಸಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತ ಪಡಿಸಿದರು.
BY Vijayendra: 'ನನ್ನ ಬದುಕು ತೆರೆದ ಪುಸ್ತಕ-ಯಾರು ಬೇಕಾದ್ರೂ ನೋಡಬಹುದು'
ಉತ್ತರ ಭಾರತದ ಐದಾರು ರಾಜ್ಯಗಳು ಹೊರೆತು ಪಡಿಸಿದರೆ ಪಂಜಾಬ್, ತಮಿಳುನಾಡು, ಕೇರಳ, ಆಂಧ್ರ ಪ್ರದೇಶ, ಮಹಾರಾಷ್ಟ್ರ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಹಿಂದಿ(Hindi) ಮಾತನಾಡುವವರು ಇಲ್ಲ. ಹೀಗಿರುವಾಗ ಹಿಂದಿ ರಾಷ್ಟ್ರಭಾಷೆಯಾಗಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.
Tik Tok ಖರೀದಿಗೆ ಆಸಕ್ತಿ ತೋರಿದ ಬೆಂಗಳೂರು ಮೂಲ ಕಂಪನಿ..!
ಕರ್ನಾಟಕದಲ್ಲಿ ಕನ್ನಡ(Kannada)ವನ್ನು ಬದಿಗೆ ತಳ್ಳಿ, ಹಿಂದಿ ಭಾಷೆ ಮುನ್ನಲೆಗೆ ಬರಲು ಸಾಧ್ಯವೇ ಇಲ್ಲ. ನಮ್ಮ ದೇಶ ಹಲವು ಭಾಷೆ, ಸಂಸ್ಕೃತಿ, ಧರ್ಮಗಳಿಂದ ತುಂಬಿಕೊಂಡಿರುವ, ವಿವಿಧತೆಯಲ್ಲಿ ಏಕತೆಯನ್ನು ಕಾಣುವ ರಾಷ್ಟ್ರ. ಹೀಗಿರುವಾಗ ಹಿಂದಿ ಸಾರ್ವಭೌಮ ಭಾಷೆಯಾಗಲು ಸಾಧ್ಯವೇ? ಒಂದು ವೇಳೆ ಬಲವಂತವಾಗಿ ಹಿಂದಿಯನ್ನು ಕನ್ನಡಿಗರ ಮೇಲೆ ಹೇರಿದರರೆ ರಕ್ತಪಾತ ಉಂಟಾಗಬಹುದು ಎಂದು ಎಚ್ಚರಿಸಿದ್ದಾರೆ.
Siddaramaiah: 'ಅಹಿಂದ ಸಮಾವೇಶದ ಬದಲು ಕಾಂಗ್ರೆಸ್ ಸಮಾವೇಶ ಮಾಡುವೆ'
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.