ಚಿಕ್ಕೋಡಿ: ‘ಹಿಂದೂ’ ಪದದ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ನೀಡಿದ್ದ ಹೇಳಿಕೆಗೆ ಯುವ ಬ್ರಿಗೇಡ್ ಮುಖ್ಯಸ್ಥ, ಹಿಂದೂ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ತಿರುಗೇಟು ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಬೆಳಗಾವಿ ಜಿಲ್ಲೆಯ ಯಮಕರಮಡಿ ಗ್ರಾಮದಲ್ಲಿ ಆಯೋಜಿಸಿದ್ದ ‘ನಾನು ಹಿಂದೂ’ ಕಾರ್ಯಕ್ರಮದಲ್ಲಿ ಬುಧವಾರ ಮಾತನಾಡಿರುವ ಚಕ್ರವರ್ತಿ ಸೂಲಿಬೆಲೆಯವರು ಸತೀಶ್ ಜಾರಕಿಹೊಳಿಗೆ ಬಹಿರಂಗ ಸವಾಲು ಹಾಕಿದ್ದಾರೆ.


ಇದನ್ನೂ ಓದಿ: "ನಾನು ಪ್ರಾರಂಭಿಸಿದ ಕೆಲಸಗಳು ನನ್ನ ಕಾಲದಲ್ಲೇ ಕಂಪ್ಲೀಟ್ ಆಗಬೇಕು"


‘ನನ್ನ ತಾಯಿ ಹಿಂದೂ ಧರ್ಮದ ಬಗ್ಗೆ ಮಾತನಾಡಿದರೆ ನಾನು ಸುಮ್ಮನೆ ಬಿಡುವುದಿಲ್ಲ. ಹಿಂದೂ ಧರ್ಮದ ಬಗ್ಗೆ ಮಾತನಾಡುವುದಕ್ಕೆ ನಾನು ಬಹಿರಂಗವಾಗಿ ಚರ್ಚೆ ಹಾಕುತ್ತೇನೆ ಬನ್ನಿ ಸಾಹುಕಾರರೇ’ ಅಂತಾ ಸತೀಶ್‍ ಜಾರಕಿಹೊಳಿಗೆ ಸೂಲಿಬೆಲೆ ಬಹಿರಂಗ ಚರ್ಚೆಗೆ ಆಹ್ವಾನಿದ್ದಾರೆ. ಬಹಿರಂಗ ಚರ್ಚೆಗೆ ಬರುವಂತೆ ಸತೀಶ್ ಜಾರಕಿಹೊಳಿಗೆ ಚಕ್ರವರ್ತಿ ಸೂಲಿಬೆಲೆ ಸವಾಲು ಹಾಕಿರುವ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.


ಬೆಳಗಾವಿ ಜಿಲ್ಲೆಯ ನಿಪ್ಪಾಣಿಯಲ್ಲಿ ಆಯೋಜಿಸಲಾಗಿದ್ದ ‘ಬುದ್ಧ ಮತ್ತು ಅಂಬೇಡ್ಕರ್ ಸಮಾವೇಶ’ದಲ್ಲಿ ಮಾತನಾಡಿದ್ದ ಸತೀಶ್ ಜಾರಕಿಹೊಳಿ, ‘ಹಿಂದೂ ಪದವೆಂದರೆ ಅದು ಕೆಟ್ಟ ಅರ್ಥಗಳನ್ನು ಕೊಡುವಂತದ್ದು’ ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದರು. ‘ಹಿಂದೂ ಎಂಬ ಪದ ಮೂಲತಃ ಭಾರತದ್ದಲ್ಲ, ಅದು ಪರ್ಷಿಯಾದಿಂದ ಬಂದ ಪದ. ಅಸಲಿಗೆ ಹಿಂದೂ ಎಂಬ ಪದಕ್ಕೆ ಪರ್ಷಿಯಾ ಭಾಷೆಯಲ್ಲಿ ಅಶ್ಲೀಲವಾದ ಅರ್ಥಗಳಿವೆ’ ಅಂತಾ ಸತೀಶ್ ಹೇಳಿದ್ದರು. ಅವರ ಈ ಹೇಳಿಕೆ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಹಿಂದೂ ಧರ್ಮದ ಅರ್ಥದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಸತೀಶ್ ಜಾರಕಿಹೊಳಿ ವಿರುದ್ಧ ಎಲ್ಲೆಡೆ ಆಕ್ರೋಶ ಭುಗಿಲೆದ್ದಿತ್ತು. ಅವರ ವಿವಾದಾತ್ಮಕ ಹೇಳಿಕೆ ವಿರೋಧಿಸಿ ಯಮಕನಮರಡಿಯಲ್ಲಿ ‘ನಾನು ಹಿಂದೂ’ ಕಾರ್ಯಕ್ರಮ ಆಯೋಜಿಸಲಾಗಿತ್ತು.


ಇದನ್ನೂ ಓದಿ: ಅಂಜನಾದ್ರಿ ಬೆಟ್ಟದಲ್ಲಿ ಹನುಮ ಮಾಲಾಧಾರಿಗಳಿಗೆ ಅಚ್ಚುಕಟ್ಟಿನ ವ್ಯವಸ್ಥೆಗೆ ಸೂಚನೆ 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.