‘ಹಿಂದುತ್ವ ಮತ್ತು ದೇವಸ್ಥಾನ ಯಾರ ಖಾಸಗಿ ಆಸ್ತಿಯಲ್ಲ’ : ಡಿಸಿಎಂ ಡಿಕೆ
12 ಜ್ಯೋತಿರ್ಲಿಂಗಗಳಲ್ಲಿ ಒಂದಾದ ಮಹಾಕಾಳೇಶ್ವರ ದೇವಸ್ಥಾನಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭೇಟಿ ನೀಡಿದ್ದಾರೆ. ಈ ವೇಳೆ ಬಿಜೆಪಿ ವಿರುದ್ಧ ವಾಗ್ಧಾಳಿ ನಡೆಸಿ, ‘ಹಿಂದುತ್ವ ಮತ್ತು ದೇವಸ್ಥಾನ ಯಾರ ಖಾಸಗಿ ಆಸ್ತಿಯಲ್ಲ’ ಎಂದು ಕಿಡಿಕಾರಿದರು.
ಉಜ್ಜಯಿನಿ : ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು 12 ಜ್ಯೋತಿರ್ಲಿಂಗಗಳಲ್ಲಿ ಒಂದಾದ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಕಾಲಭೈರವನ ಆಶೀರ್ವಾದ ಪಡೆದರು. ನಂತರ ಸ್ಥಳೀಯ ಕಾಂಗ್ರೆಸ್ ಮುಖಂಡರೊಂದಿಗೆ 'ಬಸ್ಮ ಆರತಿ'ಯಲ್ಲಿ ಪಾಲ್ಗೊಂಡರು.
ಇನ್ನು ಇದೆ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ‘ಹಿಂದುತ್ವ ಮತ್ತು ದೇವಸ್ಥಾನ ಯಾರ ಖಾಸಗಿ ಆಸ್ತಿಯಲ್ಲ’ ಎಂದು ಹೇಳಿಕೆ ನೀಡಿದರು. ಅಲ್ಲದೆ, 2023ರ ನವೆಂಬರ್ ಅಥವಾ ಅದಕ್ಕೂ ಮುನ್ನ ಚುನಾವಣೆ ನಡೆಯಲಿರುವ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Free Bus: ಐದು ಮಹಿಳೆಯರಿಗೆ ಮಾದರಿ ಸ್ಟಿಕರ್ ನೀಡುವ ಮೂಲಕ ಶಕ್ತಿ ಯೋಜನೆಗೆ ಚಾಲನೆ
ಕರ್ನಾಟಕದಂತೆಯೇ ಮಧ್ಯಪ್ರದೇಶದ ಜನರೂ "ಬಿಜೆಪಿಯ ಭ್ರಷ್ಟಾಚಾರದಿಂದ" ಸಂಕಷ್ಟಕ್ಕೆ ಸಿಲುಕಿದ್ದಾರೆ ಹಾಗಾಗಿ ಮುಂಬರುವ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ ಎಂದು ಡಿಕೆ ಶಿವಕುಮಾರ್ ಭವಿಷ್ಯ ನುಡಿದರು.
ಈ ಬಾರಿ ಮಧ್ಯಪ್ರದೇಶದಲ್ಲೂ ಡಬಲ್ ಇಂಜಿನ್ ನಿಯಮ ಜಾರಿಯಾಗಲಿದ್ದು, ಮಾಜಿ ಮುಖ್ಯಮಂತ್ರಿಗಳಾದ ಕಮಲ್ ನಾಥ್, ದಿಗ್ವಿಜಯ್ ಸಿಂಗ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಪಕ್ಷದ ಯಶಸ್ಸಿಗೆ ಒಗ್ಗೂಡಿ ಶ್ರಮಿಸುತ್ತಿದ್ದಾರೆ ಎಂದರು. ಇತ್ತೀಚಿನ ಕರ್ನಾಟಕ ಚುನಾವಣೆಗಿಂತ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.