)
Devanahalli: ರಾಷ್ಟ್ರೀಯ ಹೆದ್ದಾರಿ ಬಚ್ಚಹಳ್ಳಿ ಫ್ಲೈಓವರ್ ಮೇಲೆ ಭಾನುವಾರ ಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್ವೇ ರಸ್ತೆಯಲ್ಲಿ ವೇಗವಾಗಿ ಬಂದ ಕಾರು ಚಾಲಕನ ನಿರ್ಲಕ್ಷ್ಯದಿಂದ ನಡೆದ ಹಿಟ್ ಅಂಡ್ ರನ್ ದುರಂತದಲ್ಲಿ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬಾಣಸವಾಡಿ ಮೂಲದ ನೇತ್ರಾವತಿ (31) ಮೃತ ದುರ್ದೈವಿ. ಬೆಂಗಳೂರಿನಿಂದ ಚಿಕ್ಕಬಳ್ಳಾಪುರ ಕಡೆಗೆ ಬೈಕ್ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
ಮಾಹಿತಿ ಪ್ರಕಾರ, ಬೈಕ್ಗೆ ಹಿಂಬದಿಯಿಂದ ಗುದ್ದಿದ ಕಾರಿನ ಆಘಾತಕ್ಕೆ ನೇತ್ರಾವತಿ ಸಮತೋಲನ ಕಳೆದುಕೊಂಡು ಫ್ಲೈಓವರ್ ಮೇಲಿಂದ ಕೆಳಗೆ ಬಿದ್ದಿದ್ದಾರೆ. ತಲೆಗೆ ಬಲವಾದ ಪೆಟ್ಟು ಬಿದ್ದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪತಿ ಬೈಕ್ನ ಎಡಭಾಗಕ್ಕೆ ಬಿದ್ದು ಗಾಯಗೊಂಡಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಅಪಘಾತಕ್ಕೆ ಕಾರಣವಾದ ಕಾರು ಚಾಲಕ ಕಾರು ನಿಲ್ಲಿಸದೆ ಪರಾರಿಯಾಗಿದ್ದಾನೆ. ಘಟನೆಯ ನಂತರ ದೇವನಹಳ್ಳಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿರುವ ಕಾರು ಚಾಲಕನ ಪತ್ತೆಗಾಗಿ ತೀವ್ರ ಶೋಧ ಕಾರ್ಯ ನಡೆಯುತ್ತಿದೆ.
ಪೊಲೀಸರು ವಾಹನ ಸಿಸಿಟಿವಿ ದೃಶ್ಯ ಹಾಗೂ ಸಾಕ್ಷಿಗಳ ಆಧಾರದ ಮೇಲೆ ಕಾರು ಮತ್ತು ಚಾಲಕನ ಗುರುತು ಪತ್ತೆಹಚ್ಚುವ ಪ್ರಯತ್ನ ನಡೆಸುತ್ತಿದ್ದಾರೆ. ಈ ಘಟನೆ ದೇವನಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಆತಂಕವನ್ನುಂಟುಮಾಡಿದೆ.