ಡಿಕೆಶಿಯನ್ನು ಸಂಪುಟದಿಂದ ವಜಾ ಮಾಡಲು ಹೆಚ್.ಎಂ.ರಮೇಶ್ ಗೌಡ ಒತ್ತಾಯ
ಹಾಸನ ಜಿಲ್ಲೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೆನ್ ಡ್ರೈವ್ ಹಂಚಿದ ಪಿತೂರಿ ಆರೋಪಕ್ಕೆ ಗುರಿಯಾಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಎಂದು ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಒತ್ತಾಯ ಮಾಡಿದ್ದಾರೆ.
ಬೆಂಗಳೂರು: ಹಾಸನ ಜಿಲ್ಲೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೆನ್ ಡ್ರೈವ್ ಹಂಚಿದ ಪಿತೂರಿ ಆರೋಪಕ್ಕೆ ಗುರಿಯಾಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಎಂದು ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಒತ್ತಾಯ ಮಾಡಿದ್ದಾರೆ.
ಇದನ್ನೂ ಓದಿ: ಕಾಂಗ್ರೆಸ್ ಜಯಭೇರಿ ಬಾರಿಸುತ್ತೆ : ಸಂಯುಕ್ತಾ ಪಾಟೀಲ್ ಭರವಸೆ
ಜೆಡಿಎಸ್ ಕಚೇರಿ ಜೆಪಿ ಭವನದ ಬಳಿ ಹಮ್ಮಿಕೊಳ್ಳಲಾಗಿದ್ದ ಬೃಹತ್ ಪ್ರತಿಭಟನೆಯಲ್ಲಿ ನೇತೃತ್ವ ವಹಿಸಿ ಮಾತನಾಡಿದ ಅವರು; ಅಶ್ಲೀಲ ವಿಡಿಯೋಗಳನ್ನು ಯಾರು ಸೋರಿಕೆ ಮಾಡಿದರು ಎನ್ನುವ ಅಂಶವನ್ನು ಬಿಜೆಪಿ ನಾಯಕ, ವಕೀಲ ದೇವರಾಜ್ ಗೌಡ ಅವರು ಬಹಿರಂಗ ಮಾಡಿದ್ದಾರೆ. ಅವರು ನೇರವಾಗಿಯೇ ಸಾಕ್ಷಿ ಸಮೇತ ಡಿಕೆಶಿ ಹೆಸರು ಹಾಗೂ ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ ಅವರ ಹೆಸರನ್ನು ಹೇಳಿದ್ದಾರೆ ಎಂದರು.
ಇದನ್ನೂ ಓದಿ: ಧಾರವಾಡದ ಶಾರದಾ ಶಾಲೆಯಲ್ಲಿನ ಮತಕೇಂದ್ರದಲ್ಲಿ ವಿನಯ್ ಕುಲಕರ್ಣಿ ಮತದಾನ
ಇಷ್ಟು ಸೂಕ್ಷ್ಮ ಪ್ರಕರಣದ ಬಗ್ಗೆ ಅತ್ಯಂತ ಜವಾಬ್ದಾರಿಯುತವಾಗಿ ವರ್ತಿಸಬೇಕಿದ್ದ ಉಪ ಮುಖ್ಯಮಂತ್ರಿ, ರಾಜಕೀಯ ಸ್ವಾರ್ಥಕ್ಕಾಗಿ ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಬೇಕು, ಅದಕ್ಕಾಗಿ ಜೆಡಿಎಸ್ ಬಿಜೆಪಿ ಮೈತ್ರಿಗೆ ಧಕ್ಕೆ ಉಂಟು ಮಾಡುವ ಏಕೈಕ ಉದ್ದೇಶದಿಂದ ಈ ಸಂಚು ನಡೆಸಿದ್ದಾರೆ. ಹೀಗಾಗಿ ಅವರನ್ನು ವಜಾ ಮಾಡಬೇಕು ಎಂದು ಅವರು ಆಗ್ರಹಿಸಿದರು.
ಫಲಕ ಹಿಡಿದು ಪ್ರತಿಭಟನೆ
ಜೆಡಿಎಸ್ ಕಾರ್ಯಕರ್ತರು ಡಿಕೆಶಿ ವಿರುದ್ಧ ನಾಮಫಲಕ ಹಿಡಿದು ಪ್ರತಿಭಟನೆ ನಡೆಸಿದರು. ಪಕ್ಷದ ನೂರಾರು ಮಹಿಳಾ ಕಾರ್ಯಕರ್ತರು, ಮುಖಂಡರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.