ಚನ್ನಪಟ್ಟಣ: ವಿಧಾನಸಭಾ ಚುನಾವಣಾಯ ಜಿದ್ದಾ-ಜಿದ್ದಿಯ ಕಣವಾಗಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಸಚಿವ ಹೆಚ್.ಎಂ. ರೇವಣ್ಣ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಚಿಂತನೆ ನಡೆಸಿದೆ.


COMMERCIAL BREAK
SCROLL TO CONTINUE READING

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಪ್ರಬಲ ಅಭ್ಯರ್ಥಿಯಾಗಿರುವ ಸಿ.ಪಿ. ಯೋಗೇಶ್ವರ್ ಅವರನ್ನು ಸೋಲಿಸಲು, ಯೋಗೇಶ್ವರ್ ವಿರುದ್ಧ ಹೆಚ್.ಎಂ. ರೇವಣ್ಣ ಅವರನ್ನು ಕಣಕ್ಕಿಳಿಸುವ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ಹೇಳಲಾಗುತ್ತಿದ್ದು, ಕಾಂಗ್ರೆಸ್ ಪಕ್ಷದ ಈ ನಡೆ ರೇವಣ್ಣ ಅವರಿಗೆ ವರವಾಗಲಿದೆಯೋ? ಶಾಪವಾಗಲಿದೆಯೋ? ಎಂಬುದನ್ನು ಕಾದುನೋಡಬೇಕಿದೆ. 


ಚನ್ನಪಟ್ಟಣ ಕ್ಷೇತ್ರದಿಂದ ಬಿಜೆಪಿಯಿಂದ ಸಿ.ಪಿ. ಯೋಗೇಶ್ವರ್, ಜೆಡಿಎಸ್ ನಿಂದ ಹೆಚ್.ಡಿ. ಕುಮಾರಸ್ವಾಮಿ ಕಣದಲ್ಲಿದ್ದು ಇದೀಗ ಕಾಂಗ್ರೆಸ್ ನಿಂದ ಹೆಚ್.ಎಂ. ರೇವಣ್ಣ ಸ್ಪರ್ಧಿಸಲಿದ್ದಾರೆ.


ಚನ್ನಪಟ್ಟಣ ಕ್ಷೇತ್ರದಲ್ಲಿ ಸಿ.ಪಿ. ಯೋಗೇಶ್ವರ್ ಪ್ರಬಲ ಅಭ್ಯರ್ಥಿ
ಚನ್ನಪಟ್ಟಣ ಕ್ಷೇತ್ರದಲ್ಲಿ ಸಾಧನೆಯ ಹ್ಯಾಟ್ರಿಕ್ ವಿಜಯ ಸಾಧಿಸಿ ಶಾಸಕರಾಗಿ ಕಾರ್ಯನಿರ್ವಯಿಸಿತ್ತಿರುವ ಸಿ.ಪಿ. ಯೋಗೇಶ್ವರ್ ಯಾವುದೇ ಪಕ್ಷದಿಂದ ಕನಕ್ಕಿಳಿದರೂ ಗೆಲುವು ಸಾಧಿಸುವಂತಹ ಪ್ರಬಲ ಅಭ್ಯರ್ಥಿ. ಈ ಹಿಂದೆ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದರಲ್ಲದೆ, ಕಾಂಗ್ರೆಸ್ ಪಕ್ಷದಿಂದ ಹಾಗೂ ಸಮಾಜವಾದಿ ಪಕ್ಷದಿಂದಲೂ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಅವರನ್ನು ಚನ್ನಪಟ್ಟಣ ಕ್ಷೇತ್ರದಿಂದ ಕಣಕ್ಕಿಳಿಸಿದೆ.