ಬೆಂಗಳೂರು: 2019 ಡಿಸೆಂಬರ್ 5ರಂದು ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ(Karnataka by-polls) ನಡೆಯಲಿದೆ. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರಿ ಕಚೇರಿಗಳು ಹಾಗೂ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸುವಂತೆ ಚುನಾವಣಾ ಆಯೋಗ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.


COMMERCIAL BREAK
SCROLL TO CONTINUE READING

ಕರ್ನಾಟಕ ಉಪಚುನಾವಣೆ: 15 ಕ್ಷೇತ್ರಗಳಲ್ಲಿ 248 ಸ್ಪರ್ಧಿಗಳು ಕಣಕ್ಕೆ!


ಉಪ ಚುನಾವಣೆ ನಡೆಯುವ ಕ್ಷೇತ್ರಗಳ ವ್ಯಾಪ್ತಿಗೆ ಒಳಪಡುವ ಸರ್ಕಾರಿ ಕಛೇರಿಗಳು, ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರು, ಕೈಗಾರಿಕಾ ಸಂಸ್ಥೆಗಳು, ಸಹಕಾರ ಸಂಘ ಸಂಸ್ಥೆಗಳಲ್ಲಿ ಕೆಲಸ ಮಾಡುವ ನೌಕರರು ಹಾಗೂ ಸಿಬ್ಬಂದಿಗೆ ಮತದಾನ ಮಾಡಲು ಅನುಕೂಲವಾಗುವಂತೆ ವೇತನ ಸಹಿತ ರಜೆ ಘೋಷಿಸುವಂತೆ ರಾಜ್ಯ ಸರ್ಕಾರಕ್ಕೆ ಚುನಾವಣಾ ಆಯೋಗದಿಂದ ನಿರ್ದೇಶಿಸಲಾಗಿದೆ.


ಬಿಜೆಪಿ ಮತ್ತು ವಿರೋಧ ಪಕ್ಷದ ಕಾಂಗ್ರೆಸ್ ಮತ್ತು ಜನತಾದಳ-ಸೆಕ್ಯುಲರ್ (ಜೆಡಿ-ಎಸ್) ಎಲ್ಲಾ 15 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರತ್ಯೇಕವಾಗಿ ಸ್ಪರ್ಧಿಸುತ್ತಿದ್ದು ತ್ರಿಕೋನ ಸ್ಪರ್ಧೆ ಏರ್ಪಡುವ ಸಾಧ್ಯತೆಯಿದೆ.  ಡಿಸೆಂಬರ್ 5 ರಂದು ಉಪಚುನಾವಣೆಗೆ ಮತದಾನ ನಡೆಯಲಿದ್ದು, ಡಿಸೆಂಬರ್ 9 ರಂದು ಮತ ಎಣಿಕೆ ನಡೆಯಲಿದೆ.


ಡಿಸೆಂಬರ್ 5 ರಂದು ಅಥಣಿ, ಕಾಗವಾಡ, ಗೋಕಾಕ್, ಯೆಲ್ಲಾಪುರ, ಹಿರೇಕೆರೂರ್, ರಾಣಿಬೆನ್ನೂರ್, ವಿಜಯನಗರ, ಚಿಕ್ಕಬಳ್ಳಾಪುರ, ಕೆ.ಆರ್. ಪುರ, ಯಶ್ವಂತಪುರ, ಮಹಾಲಕ್ಷ್ಮಿ ಲೇಔಟ್, ಶಿವಾಜಿನಗರ, ಹೊಸಕೋಟೆ, ಕೆ.ಆರ್. ಪೇಟೆ ಮತ್ತು ಹುಣಸೂರು ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿದೆ.