ಬೆಂಗಳೂರು: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ನಿಧನದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿಯೂ 7 ದಿನಗಳ ಶೋಕ ಆಚರಿಸಲಾಗುತ್ತಿದ್ದು, ಆಗಸ್ಟ್ 17ರಂದು ಶಾಲಾ ಕಾಲೇಜುಗಳಿಗೆ ರಾಜ್ಯ ಸರ್ಕಾರ ರಜೆ ಘೋಷಿಸಿದೆ. 


COMMERCIAL BREAK
SCROLL TO CONTINUE READING

ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, "ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ನಿಧನಕ್ಕೆ ತೀವ್ರ ಶೋಕ ವ್ಯಕ್ತಪಡಿಸಿರುವ ಕರ್ನಾಟಕ ಸರ್ಕಾರ ಆ.16-22ರ ವರೆಗೆ 7ದಿನಗಳ ಶೋಕಾಚರಣೆ ಘೋಷಿಸಿದೆ. ತುರ್ತು ಪರಿಸ್ಥಿತಿ ನಿಭಾಯಿಸುವ ಕಾರ್ಯಾಚರಣೆಯಲ್ಲಿ ತೊಡಗಿರುವವರನ್ನು ಹೊರತುಪಡಿಸಿ ಉಳಿದವರಿಗೆ ಅನ್ವಯಿಸುವಂತೆ ಶಾಲಾ ಕಾಲೇಜುಗಳು ಹಾಗೂ ಸರ್ಕಾರಿ ಕಚೇರಿಗಳಿಗೆ ಆ.17ರಂದು ರಜೆ ಘೋಷಿಸಲಾಗಿದೆ" ಎಂದಿದ್ದಾರೆ. 



ಇದಕ್ಕೂ ಮುನ್ನ ವಾಜಪೇಯಿ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ವಾಜಪೇಯಿ ದೇಶ ಕಂಡಂತಹ ಅಪರೂಪದ ರಾಜಕಾರಣಿ. ಅವರು ಯಾರಿಗೂ ನೋವು ಕೊಡದ ಅಜಾತಶತ್ರು, ಬಹಳ ನಿಷ್ಠೆಯಿಂದ ಕೆಲಸ ಮಾಡಿದ್ದವರು. ಅವರ ನಿಧನದಿಂದ ದೇಶ ಒಬ್ಬ ದಾರ್ಶನಿಕ ವ್ಯಕ್ತಿತ್ವದ ರಾಜಕಾರಣಿಯನ್ನು ಕಳೆದುಕೊಂಡಂತಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.