ಚಾಮರಾಜನಗರ: ಸಾರ್ವಜನಿಕ ಮಸೀದಿ ದರ್ಶನದಿಂದ ಹಿಂದೂ-ಮುಸ್ಲಿಂರ ಭಾವೈಕ್ಯತೆಯನ್ನು ಹಿಮ್ಮಡಿಗೊಳಿಸುತ್ತದೆ ಎಂದು ಹರವೆ ವಿರಕ್ತ ಮಠಾಧ್ಯಕ್ಷರಾದ ಸರ್ಪಭೂಷಣ ಸ್ವಾಮೀಜಿ ತಿಳಿಸಿದರು. ನಗರದ ಡಿವಿಯೇಷನ್ ರಸ್ತೆಯಲ್ಲಿರುವ ಮದೀನಾ ಮಸೀದಿಯಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ಹಾಗೂ ಮದೀನಾ ಮಸೀದಿ ಆಶ್ರಯದಲ್ಲಿ ಸೀರತ್ ಪ್ರಯುಕ್ತ ನಡೆದ ಸಾರ್ವಜನಿಕ ಮಸೀದಿ ದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.


COMMERCIAL BREAK
SCROLL TO CONTINUE READING

ದೇವಸ್ಥಾನಗಳು, ಚರ್ಚುಗಳಲ್ಲಿ ದೇವರು ಇದ್ದಾನೆ ಎಂದು ಪ್ರಾರ್ಥನೆ ಸಲ್ಲಿಸುವಂತೆ ಮುಸ್ಲಿಂ ಸಮುದಾಯವರಿಗೆ ಮಸೀದಿಗಳಲ್ಲಿ ದೇವರು ಕಾಣುತ್ತಾನೆ. ಹೀಗಾಗಿ ಅವರು ಮಸೀದಿಗಳಲ್ಲಿ ಪ್ರಾರ್ಥನೆ ಮಾಡುವ ಮೂಲಕ ತಮ್ಮ ಇಷ್ಟಾರ್ಥಗಳನ್ನುಈಡೇರಿಸಿಕೊಳ್ಳುತ್ತಾರೆ. ಆದೇ ರೀತಿ ಹಿಂದೂಗಳು ದೇವಸ್ಥಾನಗಳಲ್ಲಿ, ಕ್ರೈಸ್ತರು ಚರ್ಚುಗಳಲ್ಲಿ ಪ್ರಾರ್ಥಿಸುತ್ತಾರೆ. ಮಸೀದಿಗಳು ಸಹ ಪುಣ್ಯಕ್ಷೇತ್ರಗಳಾಗಿದ್ದು, ಈ ನಿಟ್ಟಿನಲ್ಲಿ ಮಸೀದಿಗಳಿಗೆ ಸಾರ್ವಜನಿಕರು ಮುಕ್ತ ಪ್ರವೇಶ ದೊರೆತಾಗ ಇತರೇ ಧರ್ಮದವರಲ್ಲಿರುವ ತಪ್ಪುಗ್ರಹಿಕೆ ಹಾಗೂ ಅಂತರ ದೂರವಾಗುತ್ತದೆ. ಪರಸ್ಪರ ಭಾವೈಕ್ಯತೆ, ಸಾಮರಸ್ಯ ಮೂಡುತ್ತದೆ ಎಂದು ತಿಳಿಸಿದರು. 


ಇದನ್ನೂ ಓದಿ: ಹೇಮಾ ಕಮಿಟಿ ಮಾದರಿ ಇಲ್ಲೂ ಆಗಬೇಕು ತಾರಾ


ಜಮಾಅತೆ ಇಸ್ಲಾಮೀ ಹಿಂದ್ ರಾಜ್ಯ ಕಾರ್ಯದರ್ಶಿ ಮಹಮ್ಮದ್ ಕುಂಞ ಮಾತನಾಡಿ, ಮಸೀದಿ ದರ್ಶನ ಎನ್ನುವುದು ಪ್ರತಿಯೊಬ್ಬ ಮನುಷ್ಯನಿಗೂ ತಿಳುವಳಿಕೆ ಮೂಡಿಸುವ ಕಾರ್ಯಕ್ರಮವಾಗಿದೆ. ಯಾವುದೇ ಮನುಷ್ಯ ಆ ಧರ್ಮದ ಬಗ್ಗೆ ಅರಿವಿಲ್ಲದೆ ಅದರ ಪೂರ್ವಾಪರ ಚಿಂತನೆ ಇಲ್ಲದೆ ದ್ವೇಷ ಮಾಡುವ ಮನೋಭಾವ ಬೆಳೆಸಿಕೊಳ್ಳುತ್ತಾನೆ. ಹೀಗಾಗಿ ಇದರ ಬಗ್ಗೆ ತಿಳುವಳಿಕೆ ಮೂಡಿಸಲು ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು. 


ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಎ.ಆರ್.ಕೃಷ್ಣಮುರ್ತಿ, ಎಚ್.ಎಂ.ಗಣೇಶ್ ಪ್ರಸಾದ್ ಉಪಸ್ಥಿತರಿದ್ದರು. ಮಸೀದಿ ಸಮಿತಿ ಅವರಿಂದ ಬಾಳೆ ಎಲೆಯಲ್ಲಿ ಹೋಳಿಗೆ ಊಟದ ಸಹ ಪಂಕ್ತಿ ಭೋಜನಾ ವ್ಯವಸ್ಥೆ ಮಾಡಲಾಗಿತ್ತು. ಬೆಳಗ್ಗೆಯಿಂದ ಸಾಯಂಕಾಲದವರೆಗೂ ಸಾರ್ವಜನಿಕರಿಗೆ ಮಸೀದಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. 


ಇದನ್ನೂ ಓದಿ: ನನಗೆ ಯಾವತ್ತೂ ಕೆಟ್ಟ ಅನುಭವ ಆಗಿಲ್ಲ ಎನ್ನುತ್ತಾರೆ ನಟಿ ವಾಣಿಶ್ರೀ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.