ಬೆಂಗಳೂರು: ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತ ಹರ್ಷ ಕೊಲೆಗೆ (Harsha Murder Case) ಸಂಬಂಧಿಸಿದಂತೆ ರಾಜ್ಯ ಪೊಲೀಸ್ ಮುಖ್ಯಸ್ಥರಿಗೆ ಪತ್ರ ಬರೆದಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, ಒಂದು ವಾರದಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ನಿರ್ದೇಶಿಸಿದ್ದಾರೆ. 


COMMERCIAL BREAK
SCROLL TO CONTINUE READING

ಇದನ್ನೂ ಓದಿ:ಹಿಜಾಬ್ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರ ವಿರುದ್ಧ ಟ್ವೀಟ್.. ನಟ ಚೇತನ್ ಅರೆಸ್ಟ್


ಸುದ್ದಿಗಾರರೊಂದಿಗೆ ಇಂದು ಮಾತಾನಾಡಿದ ಸಚಿವರು, ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತ ಹರ್ಷ ಹತ್ಯೆ ಕುರಿತಂತೆ ಇದುವರೆಗೆ ಎಂಟು ಆರೋಪಿ ಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ಹೇಳಿದ್ದಾರೆ.


ಬಂಧಿತರಾದ ಆರೋಪಿಗಳು ಒಂದಕ್ಕಿಂತ ಹೆಚ್ಚು ಅಪರಾಧ ಕೃತ್ಯಗಳನ್ನು ಮಾಡಿದ್ದು, ಇವರ ಬೆಳವಣಿಗೆಗೆ ಕಡಿವಾಣ ಹಾಕಲು ವಿಫಲರಾದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಬಗ್ಗೆಯೂ ಸಾರ್ವಜನಿಕರಿಂದ ದೂರುಗಳು ಬಂದಿವೆ. ಈ ಬಗ್ಗೆ ತನಿಖೆ ನಡೆಸಿ ವರದಿ ನೀಡಲು ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.


ಸಮಾಜ ಘಾತುಕರ ಬೆಳವಣಿಗೆಯಲ್ಲಿ ಪೊಲೀಸರ ಪಾತ್ರದ ಕುರಿತು ವರದಿ ಕೇಳಿದ್ದೇನೆ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: UT Khadar: ಸಾವಿನ‌ ಮನೆಯಲ್ಲಿ ರಾಜಕಾರಣ ಮಾಡುವವರಿಗೆ ತಕ್ಕ ಶಾಸ್ತಿ ಆಗಲಿದೆ: ಖಾದರ್


ಈ ಬಗ್ಗೆ ರಾಜ್ಯ ಪೊಲೀಸ್ ಮುಖ್ಯಸ್ಥರಿಗೆ ಪತ್ರ ಬರೆದಿರುವ ಗೃಹ ಸಚಿವರು (Home Minister), ಒಂದು ವಾರದಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ನಿರ್ದೇಶಿಸಿದ್ದಾರೆ. 


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.