ಬೆಂಗಳೂರು : ನಗರದಲ್ಲಿ ಸ್ಥಗಿತಗೊಳಿಸಲಾಗಿರುವ ಟೋಯಿಂಗ್ ವ್ಯವಸ್ಥೆಯನ್ನು ಪುನಃ ಜಾರಿ ಗೊಳಿಸುವ ಯಾವುದೇ ಪ್ರಸ್ತಾವನೆ ಸದ್ಯಕ್ಕೆ ಸರ್ಕಾರದ ಮುಂದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಸಚಿವರು, ನಗರದಲ್ಲಿ ಸಾರ್ವಜನಿಕ ಸ್ನೇಹಿ ಮತ್ತು ಸುಗಮ ವಾಹನ ಪಾರ್ಕಿಂಗ್ ವ್ಯವಸ್ಥೆ ಜಾರಿಗೊಳಿಸುವ ಬಗ್ಗೆ ವಿಸ್ತೃತವಾದ ಚರ್ಚೆ ಹಾಗೂ ತಜ್ಞರ ಸಲಹೆ ಪಡೆದ ತೀರ್ಮಾನ ಕೈಗೊಳ್ಳಲಾಗುವುದು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೂ ಈ ಬಗ್ಗೆ ಚರ್ಚೆ ನಡೆಸಿದ್ದು, ಟೋಯಿಂಗ್ ಬಗ್ಗೆ ಯಾವುದೇ ಅಂತಿಮ ತೀರ್ಮಾನವಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.


ಇದನ್ನೂ ಓದಿ: PM Modi Fitness: 72ರ ಹರೆಯದಲ್ಲೂ ಪ್ರಧಾನಿ ಮೋದಿ ಹೇಗೆ ಫಿಟ್ ಆಗಿದ್ದಾರೆ ಗೊತ್ತಾ?


ಸಾರ್ವಜನಿಕರಿಂದ ಟೋಯಿಂಗ್ ವ್ಯವಸ್ಥೆ ಬಗ್ಗೆ ಇದ್ದ ಜನಾಕ್ರೋಶ ಹಾಗೂ ಕಿರುಕುಳಗಳ ಬಗ್ಗೆ ಬಂದ ದೂರುಗಳ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗಿತ್ತು ಎಂದು ನೆನಪಿಸಿದ ಸಚಿವರು, ಹಳೆಯ ವ್ಯವಸ್ಥೆಯನ್ನು ಪುನಃ ಜಾರಿಗೊಳಿಸಲಾಗುವುದಿಲ್ಲ ಎಂದು ತಿಳಿಸಿದ್ದಾರೆ.https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.