ಬೆಂಗಳೂರು: ಸ್ವಚ್ಚ ರಾಜಕಾರಣದಲ್ಲಿ ಬದ್ಧತೆ ಹೊಂದಿರುವ ನಾನು, ಸಮಾಜದ್ರೋಹಿಗಳೂ ಮತ್ತು ಪೀಡಕರಿಂದ ಅಕ್ರಮವಾಗಿ ಹಣ ಗಳಿಸಬೇಕಾದ ಸಂದರ್ಭ ಬಂದರೆ, ಬದುಕಲು ಇಚ್ಛಿಸುವುದಿಲ್ಲ. ಸ್ಯಾಂಟ್ರೊ ರವಿಯಂತಹ ವ್ಯಕ್ತಿಗಳಿಂದ ಆಮಿಷಕ್ಕೆ ಒಳಗಾಗುವಂತಹ ಪ್ರಸಂಗ ಬರುವಂತಾದರೆ, ಸಾವನ್ನು ಬಯಸುತ್ತೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಸಚಿವರು ಕಳೆದ ರಾತ್ರಿ ಬೆಂಗಳೂರಿನ ಮಲೆನಾಡು ಮಿತ್ರ ವೃಂದ ಆಯೋಜಿಸಿದ್ದ ವಾರ್ಷಿಕ ಕ್ರೀಡಾಕೂಟದ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು.


ಇದನ್ನೂ ಓದಿ:  IND vs SL: ಕೊಹ್ಲಿ ಭೇಟಿಯಾಗಲು ಮೈದಾನಕ್ಕೇ ಓಡೋಡಿ ಬಂದ ಅಭಿಮಾನಿ ಮಾಡಿದ್ದೇನು ಗೊತ್ತಾ?


ತನ್ನ ಗುಜರಾತ್ ಪ್ರವಾಸಕ್ಕೂ, ಸ್ಯಾಂಟ್ರೋ ರವಿ ಬಂಧನಕ್ಕೂ ತಳುಕು ಹಾಕಿ ಮಾತನಾಡುತ್ತಿರುವ ಕೆಲವು ನಾಯಕರ ಬಗ್ಗೆ ಪ್ರಸ್ತಾಪಿಸಿದ ಸಚಿವರು, "ನನ್ನ ಗುಜರಾತ್ ಪ್ರವಾಸ ಬಹಳ ಹಿಂದೆಯೇ ನಿಗದಿಯಾಗಿತ್ತು. ಹಾಗೂ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳ ನಿಯೋಗದ ನೇತೃತ್ವ ವಹಿಸಿದ್ದ ನನ್ನ ಗುಜರಾತ್ ಭೇಟಿ ಹಾಗೂ ಕಾರ್ಯಕ್ರಮಗಳು, ಪಾರದರ್ಶಕವಾಗಿವೆ" ಎಂದು ಹೇಳಿದರು.


"ಒಂದು ವೇಳೆ ಸ್ಯಾಂಟ್ರೋ ರವಿಯಂತಹ ವ್ಯಕ್ತಿಗಳಿಂದ ಆಮಿಷಕ್ಕೆ ಒಳಗುವಂತಹ ಪರಿಸ್ಥಿತಿ ಬಂದರೆ, ಆತ್ಮಹತ್ಯೆ ದಾರಿ ತುಳಿಯುತ್ತೇನೆ"ಎಂದು ಭಾವುಕರಾಗಿ ಹೇಳಿದರು.


ಗುಜರಾತ್ ಪ್ರವಾಸದ ಸಂದರ್ಭದಲ್ಲಿ, ರಾಜ್ಯದಲ್ಲಿ ವಿಧಿ ವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ ಕುರಿತು, ರಾಷ್ಟ್ರೀಯ ವಿಧಿ ವಿಜ್ಞಾನ ವಿಶ್ವವಿದ್ಯಾಲಯದ ಉಪ ಕುಲಪತಿಗಳು ಹಾಗೂ ಇತರ ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಿದ್ದೇನೆ. ಇದರ ಮುಂದುವರಿದ ಭಾಗವಾಗಿ ಶೀಘ್ರದಲ್ಲಿಯೇ ವಿಶ್ವವಿದ್ಯಾಲಯದ ಶಂಕುಸ್ಥಾಪನಾ ಕಾರ್ಯಕ್ರಮವೂ ನಡೆಯಲಿದೆ ಎಂದರು.


ಇದನ್ನೂ ಓದಿ: ಫ್ಲಿಪ್‌ಕಾರ್ಟ್ ಬಿಗ್ ಸೇವಿಂಗ್ ಡೇಸ್ ಸೇಲ್‌ನಲ್ಲಿ ಐಫೋನ್ 14ರ ಮೇಲೆ ಬಂಪರ್ ಡಿಸ್ಕೌಂಟ್


ಗುಜರಾತ್ ಮುಖ್ಯಮಂತ್ರಿ ಭೂಪೆಂಧ್ರ ಭಾಯಿ ಪಟೇಲ್ ಅವರನ್ನು ಭೇಟಿ ಮಾಡಿದ್ದೇನೆ. ಎಲ್ಲವೂ ತೆರದ ಪುಸ್ತಕದಂತೆ ಇದೆ. ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿದ ವ್ಯಕ್ತಿಯೊಬ್ಬರು ಜವಾಬ್ದಾರಿಯುತವಾಗಿ ವರ್ತಿಸಬೇಕು ಎಂದು  ಹೇಳಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.