ಹಿಂದೂ ವಿರೋಧಿ ಕಾಂಗ್ರೆಸ್ ಧೋರಣೆ ಬಗ್ಗೆ ಟೀಕಿಸಿದ ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ
ಕಾಂಗ್ರೆಸ್ ನಾಯಕ ಸತೀಶ್ ಜಾರಕಹೊಳಿಯವರು ಹಿಂದೂ ಧರ್ಮದ ಬಗ್ಗೆ ಅವಹೇಳನ ಕಾರಿಯಾಗಿ ಮಾತನಾಡಿದ ಬಗ್ಗೆ, ಮಾಧ್ಯಮ ಮಿತ್ರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ. `ಅವರ ಹೇಳಿಕೆ ನನಗೆ ಆಶ್ಚರ್ಯ ತಂದಿಲ್ಲ, ಅವರು ತಮ್ಮ ಪಕ್ಷದ ನಿಜ ಧೋರಣೆಯನ್ನು, ಧ್ವನಿಸಿದ್ದಾರೆ`. - ಗೃಹ ಸಚಿವ ಆರಗ ಜ್ಞಾನೇಂದ್ರ
ಬೆಂಗಳೂರು: ಹಿಂದೂ ಪದ ಅಂದರೆ ಕಾಂಗ್ರೆಸ್ ನಾಯಕರಿಗೆ ಅಶ್ಲೀಲ ಹಾಗೂ ಅದೇ ರೀತಿಯಲ್ಲಿ ಕೇಸರಿ ಎಂದರೆ ಅವರಿಗೆ ಅಲರ್ಜಿ, ಈ ನಿಲುವು, ಆ ಪಕ್ಷದ ಸಿದ್ದಾಂತದ ಒಂದು ಅವಿಭಾಜ್ಯ ಅಂಗವಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ರವರು ಕಾಂಗ್ರೆಸ್ ನಾಯಕರ ಬಗ್ಗೆ ಕಿಡಿ ಕಾರಿದರು.
ಕಾಂಗ್ರೆಸ್ ನಾಯಕ ಸತೀಶ್ ಜಾರಕಹೊಳಿಯವರು ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಬಗ್ಗೆ, ಮಾಧ್ಯಮ ಮಿತ್ರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ. "ಅವರ ಹೇಳಿಕೆ ನನಗೆ ಆಶ್ಚರ್ಯ ತಂದಿಲ್ಲ, ಅವರು ತಮ್ಮ ಪಕ್ಷದ ನಿಜ ಧೋರಣೆಯನ್ನು, ಧ್ವನಿಸಿದ್ದಾರೆ" ಎಂದರು.
ಕಾಂಗ್ರೆಸ್ ಪಕ್ಷದ ಹಿಂದೂ ವಿರೋಧಿ ನಡೆಯಿಂದಾಗಿ, ದೇಶದಲ್ಲಿ ಅಪ್ರಸ್ತುತವಾಗಿದೆ ಎಂದು ಇದೇ ವೇಳೆ ಕಾಂಗ್ರೆಸ್ ಧೋರಣೆ ವಿರುದ್ಧ ಗೃಹ ಸಚಿವರು ವಾಗ್ಧಾಳಿ ನಡೆಸಿದರು.
ಇದನ್ನೂ ಓದಿ- ಸತೀಶ್ ಜಾರಕಿಹೊಳಿ ಹಿಂದೂ ವಿರೋಧಿ ಹೇಳಿಕೆ: ಜನರು ತಕ್ಕ ಉತ್ತರ ಕೊಡ್ತಾರೆ- ಸಚಿವೆ ಶಶಿಕಲಾ ಜೊಲ್ಲೆ
ಈ ಸಂದರ್ಭದಲ್ಲಿ ಕೆಲವು ಸಂಘಟನೆಗಳು, ಟಿಪ್ಪು ಆಚರಣೆ ನಡೆಸುವ ಪ್ರಯತ್ನದ ಬಗ್ಗೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಗೃಹ ಸಚಿವರು, "ಸ್ಥಳೀಯ ಸಂಸ್ಥೆಗಳು ಈ ಕುರಿತು ನಿರ್ಧಾರ ತೆಗೆದುಕೊಳ್ಳುತ್ತವೆ" ಎಂದರು.
ಪ್ರಧಾನ ಮಂತ್ರಿ ನರೆಂದ್ರ ಮೋದಿಯವರ ಬೆಂಗಳೂರು ಭೇಟಿಯ ಬಗ್ಗೆ ಮಾಹಿತಿ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ನಾಡ ಪ್ರಭು ಶ್ರೀ ಕೆಂಪೇಗೌಡರ ಪ್ರತಿಮೆಯ ಅನಾವರಣ, ವಂದೇ ಭಾರತ್ ರೈಲಿಗೆ ಚಾಲನೆ ಹಾಗೂ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಎರಡನೇ ಟರ್ಮಿನಲ್ ನ ಉದ್ಘಾಟನೆ ಸಮಾರಂಭ ಸೇರಿದಂತೆ ಹಲವು ಕಾರ್ಯಕ್ರಮ ಗಳಲ್ಲಿ ಭಾಗವಹಿಸುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಬೃಹತ್ ಜನಸ್ತೋಮವನ್ನೂ ಉದ್ದೇಶಿಸಿ ಮಾತಾಡಲಿದ್ದಾರೆ ಎಂದು ಮಾಹಿತಿ ನೀಡಿದರು.
ಇದನ್ನೂ ಓದಿ- ಸಿದ್ದರಾಮಯ್ಯಗೆ ಪರಮೇಶ್ವರ್, ಖರ್ಗೆ & ಡಿಕೆಶಿ ಖೆಡ್ಡಾ ತೋಡುವುದು ಖಚಿತ: ಬಿಜೆಪಿ
ಪ್ರಧಾನಿಯವರ ಭೇಟಿಯ ಹಿನ್ನಲೆಯಲ್ಲಿ ಸುಗಮ ಸಂಚಾರ ವ್ಯವಸ್ಥೆ ಹಾಗೂ ಭದ್ರತಾ ಕ್ರಮಗಳ ನಿರ್ವಹಣೆಗೆ ಸುಮಾರು ನಾಲ್ಕು ಸಾವಿರ ರಕ್ಷಣಾ ಸಿಬ್ಬಂದಿಯನ್ನು ನಿಯುಕ್ತಿ ಗೋಳಿಸಲಾಗುತ್ತಿದೆ ಎಂದವರು ತಿಳಿಸಿದರು. ಈ ಸಂದರ್ಭದಲ್ಲಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.