Mangaluru auto blast : ನಾಳೆ ಮಂಗಳೂರಿಗೆ ಗೃಹ ಸಚಿವರ ಭೇಟಿ, ಹಿರಿಯ ಅಧಿಕಾರಿಗಳ ಜೊತೆ ಸಭೆ

Home Minister Araga Jnanendra : ಆಟೋ ರಿಕ್ಷಾ ಸ್ಫೋಟ ಘಟನೆಯ ಹಿನ್ನೆಲೆಯಲ್ಲಿ, ಗೃಹ ಸಚಿವ ಆರಗ ಜ್ಞಾನೇಂದ್ರ ರವರು ನಾಳೆ ಮಂಗಳೂರಿಗೆ ಭೇಟಿ ನೀಡಿ, ಹಿರಿಯ ಅಧಿಕಾರಿ ಗಳೊಂದಿಗೆ ಸಭೆ ನಡೆಸಲಿದ್ದಾರೆ. ಮಂಗಳೂರು ಭೇಟಿ ಸಂದರ್ಭದಲ್ಲಿ ಸಚಿವರು, ಸ್ಫೋಟ ಘಟನೆಯಿಂದ ಗಾಯಗೊಂಡ ಆಟೋ ರಿಕ್ಷಾ ಚಾಲಕನನ್ನೂ ಭೇಟಿಯಾಗಿ ಸಾಂತ್ವನ ಹೇಳಲಿದ್ದಾರೆ.    

Written by - Chetana Devarmani | Last Updated : Nov 22, 2022, 01:27 PM IST
  • ಆಟೋ ರಿಕ್ಷಾ ಸ್ಫೋಟ ಘಟನೆಯ ಹಿನ್ನೆಲೆ
  • ನಾಳೆ ಮಂಗಳೂರಿಗೆ ಗೃಹ ಸಚಿವರ ಭೇಟಿ
  • ಹಿರಿಯ ಅಧಿಕಾರಿಗಳ ಜೊತೆ ಸಭೆ
Mangaluru auto blast : ನಾಳೆ ಮಂಗಳೂರಿಗೆ ಗೃಹ ಸಚಿವರ ಭೇಟಿ, ಹಿರಿಯ ಅಧಿಕಾರಿಗಳ ಜೊತೆ ಸಭೆ title=
ಗೃಹ ಸಚಿವ ಆರಗ ಜ್ಞಾನೇಂದ್ರ

ಶಿವಮೊಗ್ಗ : ಆಟೋ ರಿಕ್ಷಾ ಸ್ಫೋಟ ಘಟನೆಯ ಹಿನ್ನೆಲೆಯಲ್ಲಿ, ಗೃಹ ಸಚಿವ ಆರಗ ಜ್ಞಾನೇಂದ್ರ ರವರು ನಾಳೆ ಮಂಗಳೂರಿಗೆ ಭೇಟಿ ನೀಡಿ, ಹಿರಿಯ ಅಧಿಕಾರಿ ಗಳೊಂದಿಗೆ ಸಭೆ ನಡೆಸಲಿದ್ದಾರೆ. ರಾಜ್ಯ ಪೊಲೀಸ್ ಮುಖ್ಯಸ್ಥ ಪ್ರವೀಣ್ ಸೂದ್ ಹಾಗೂ ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಅಲೋಕ್ ಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ಸಭೆಯಲ್ಲಿ ಘಟನೆಯ ಸಂಬಂಧ ಚರ್ಚೆ ನಡೆಯಲಿದೆ.

ಇದನ್ನೂ ಓದಿ : ಮತ್ತೆ ಬಂದ ಮೃತ ವ್ಯಕ್ತಿ…ದೆವ್ವದ ಜೊತೆ ಮಾತನಾಡಿದ ಸಿಬ್ಬಂದಿ..ಕ್ಯಾಮರಾದಲ್ಲಿ ವಿಡಿಯೋ ಸೆರೆ

ಮಂಗಳೂರು ಭೇಟಿ ಸಂದರ್ಭದಲ್ಲಿ ಸಚಿವರು, ಸ್ಫೋಟ ಘಟನೆಯಿಂದ ಗಾಯಗೊಂಡ ಆಟೋ ರಿಕ್ಷಾ ಚಾಲಕನನ್ನೂ ಭೇಟಿಯಾಗಿ ಸಾಂತ್ವನ ಹೇಳಲಿದ್ದಾರೆ. ಈ ಬಗ್ಗೆ ಇಂದು ಮಾತನಾಡಿದ ಸಚಿವ ಆರಗ ಜ್ಞಾನೇಂದ್ರ ಮಂಗಳೂರು ಆಟೋ ರಿಕ್ಷಾ ಸ್ಫೋಟ ಘಟನೆಯನ್ನು ರಾಜ್ಯ ಪೊಲೀಸರು ಗಂಭೀರವಾಗಿ ಪರಿಗಣಿಸಿ ತನಿಖೆಯನ್ನು ತೀವ್ರಗೊಳಿಸಿದ್ದಾರೆ ಎಂದರು.

ಭಯೋತ್ಪಾದನೆ ಚಟುವಟಿಕೆಗಳನ್ನು ಅಮೂಲಗ್ರಹವಾಗಿ ತನಿಖೆ ಮಾಡಿ ದುಷ್ಕರ್ಮಿಗಳನ್ನು ಮಟ್ಟ ಹಾಕಲು ರಾಜ್ಯ ಪೋಲಿಸರು ಕೇಂದ್ರ ತನಿಖಾ ಸಂಸ್ಥೆಗಳ ಸಹಯೋಗದೊಂದಿಗೆ ಶ್ರಮಿಸುತ್ತಿದ್ದಾರೆ. ಸ್ಫೋಟಕವನ್ನು ತಯಾರಿಸಿ ಭಯೋತ್ಪಾದನೆ ಕೃತ್ಯ ನಡೆಸಲು ತೆರಳುತ್ತಿದ್ದ ಹಾಗೂ ಸುಟ್ಟ ಗಾಯಗಳಿಂದ, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಉಗ್ರ ಶಾರೀಕ್ ನಿಂದ ಇನ್ನೂ ಹೆಚ್ಚಿನ ಮಾಹಿತಿ ಹೊರ ಬರಬೇಕಿದೆ ಎಂದು ಹೇಳಿದರು.

ಇದುವರೆಗಿನ ಮಾಹಿತಿ ಆಧಾರದ ಮೇಲೆ ರಾಜ್ಯ ಪೊಲೀಸರು, ಉಗ್ರಗಾಮಿ ಚಟುವಟಕೆಗಳಿಗೆ ಸ್ನೇಹಹಸ್ತ ಚಾಚಿದವರ  ವಿರುದ್ಧ, ಕಾರ್ಯಾಚರಣೆ ತೀವ್ರಗೊಳಿಸಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಮಾಹಿತಿ ನೀಡಿದರು.

ಇದನ್ನೂ ಓದಿ : ಮಂಗಳ ದೋಷ ಪರಿಹಾರಕ್ಕಾಗಿ ಇಂದು ಈ ವಸ್ತುಗಳನ್ನು ತಪ್ಪದೇ ದಾನ ಮಾಡಿ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News