G. Parameshwar: ಬಜರಂಗ ದಳ ಬ್ಯಾನ್ ಮಾಡುವ ಸಂದರ್ಭ ಬರಲಾರದು, ಬಂದರೆ ಮಾಡ್ತೀವಿ : ಡಾ ಜಿ.ಪರಮೇಶ್ವರ್

Dr. G. Parameshwar Spoke About Police Discipline: ವಿಧಾನಸೌಧದಲ್ಲಿ ಮಾತನಾಡಿದ ಗೃಹ ಸಚಿವ ಡಾ.ಜಿ ಪರಮೇಶ್ವರ್, ಲಾಟಿ ಏಟು ತಿನ್ನಬೇಕೋ? ಗುಂಡು ಹಾರಿಸಿಕೊಳ್ಳಬೇಕೋ ಅಥವಾ ಶಾಂತಿಯಿಂದ ರಾಜ್ಯ ನಡೆಸಬೇಕೋ ಎಂದು ಜನರೇ ತೀರ್ಮಾನ ಮಾಡಲಿ ಎಂದರು.

Written by - Zee Kannada News Desk | Last Updated : Jun 1, 2023, 01:56 PM IST
  • ಶಾಂತಿ, ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ವ್ಯಕ್ತಿ ಅಥವಾ ಸಂಘಟನೆ ವಿರುದ್ಧ ಕ್ರಮ
  • ಬಜರಂಗ ದಳ ಬ್ಯಾನ್ ಮಾಡುವ ಸಂದರ್ಭ ಬರಲಾರದು
  • ನಾಗರೀಕ ಸಮುದಾಯ ಹಾಗೂ ಸಂಘಟನೆಗಳಿಗೆ ಮನವಿ
G. Parameshwar: ಬಜರಂಗ ದಳ ಬ್ಯಾನ್ ಮಾಡುವ ಸಂದರ್ಭ ಬರಲಾರದು, ಬಂದರೆ ಮಾಡ್ತೀವಿ : ಡಾ ಜಿ.ಪರಮೇಶ್ವರ್ title=

ಬೆಂಗಳೂರು: ವಿಧಾನಸೌಧದಲ್ಲಿ ಗುರುವಾರ ಮಾತನಾಡಿದ  ಗೃಹ ಸಚಿವ ಡಾ.ಜಿ ಪರಮೇಶ್ವರ್, ಲಾಟಿ ಏಟು ತಿನ್ನಬೇಕೋ? ಗುಂಡು ಹಾರಿಸಿಕೊಳ್ಳಬೇಕೋ ಅಥವಾ ಶಾಂತಿಯಿಂದ ರಾಜ್ಯ ನಡೆಸಬೇಕೋ ಎಂದು ಜನರೇ ತೀರ್ಮಾನ ಮಾಡಲಿ ಎಂದರು.

ಪೊಲೀಸ್ ಇಲಾಖೆ ಶಿಸ್ತಿನ ಇಲಾಖೆ,‌ ಪೊಲೀಸ್ ಇಲಾಖೆಯಲ್ಲಿ ಸಲ್ಯೂಟ್ ಸಿಗುತ್ತದೆ, ಒದೆನೂ ಸಿಗುತ್ತದೆ. ಮುಂದುವರಿದು ಗುಂಡು ಹಾರಿಸೋದು ಇರುತ್ತದೆ. ಆದರೆ ಯಾರಿಗೆ ಯಾವುದು ಬೇಕೋ ತೀರ್ಮಾನ ಮಾಡಿ..! ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದರು.

ಇದನ್ನೂ ಓದಿ: ಗ್ಯಾರೆಂಟಿಗಳು ಉಚಿತ, ಖಚಿತ, ಖಂಡಿತ, ಸದ್ಯಕ್ಕೆ ಮೂರು ಮಾತ್ರ ನಿಶ್ಚಿತ

ನಮ್ಮ ಪ್ರಣಾಳಿಕೆಯಲ್ಲಿ ಯಾರು ಶಾಂತಿ ಕದಡುತ್ತಾರೆ ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ವ್ಯಕ್ತಿ ಅಥವಾ ಸಂಘಟನೆ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದೇವೆ. ಅವರು ಯಾರು ಅದನ್ನು ಮಾಡಲ್ಲ ಎಂದರೆ ಭಯ ಪಡುವ ಅಗತ್ಯ ಇಲ್ಲ, ಮಾಡುತ್ತೇವೆ ಅಂದರೆ ಅವರಿಗೆ ಭಯ ಆಗುತ್ತದೆ ಎಂದರು.

ನಾಗರೀಕ ಸಮುದಾಯ ಹಾಗೂ ಸಂಘಟನೆಗಳಿಗೆ ನಾನು ಮನವಿ ಮಾಡುತ್ತೇನೆ ನಮ್ಮದು ಕುವೆಂಪು ನಾಡು,‌ಸರ್ವಜನಾಂಗದ ಶಾಂತಿಯ ತೋಟ ಮಾಡುತ್ತೇವೆ. ಜನರು ಪಕ್ಷಪಾತವಾಗಿ, ಜಾತ್ಯಾತೀತವಾಗಿ ಸಹಕಾರ ಕೊಡಬೇಕು ಎಂದು ಮನವಿ ಮಾಡಿದರು.

ಇದನ್ನೂ ಓದಿ: ನಳಂದಾ ಕಾಲೇಜು ಬಳಿ ಭೀಕರ ಅಪಘಾತ; ಸ್ಕೂಟರ್ ಸವಾರನ ತಲೆ ಹೋಳು!

ಇನ್ನು ನೈತಿಕ ಪೊಲೀಸ್ ಗಿರಿ ಹಾಗೂ ‌ಮತೀಯ ಘಟನೆಗಳನ್ನು ಸಹಿಸುವುದಿಲ್ಲ. ಅದಕ್ಕೆ ಯಾವ ರೀತಿ ಕಠಿಣ ಕ್ರಮ ಕೈಗೊಳ್ಳಬೇಕು ಎಂಬುದನ್ನು ಕೈಗೊಳ್ಳುತ್ತೇವೆ ಎಂದರು. ಇನ್ನು ಪಿಎಸ್ ಐ ಪರೀಕ್ಷೆ ಅಕ್ರಮದ ಬಗ್ಗೆ ಹಿರಿಯ ಅಧಿಕಾರಿಗಳ ಚರ್ಚೆ ಮಾಡಿದ್ದೇನೆ.

ಮುಂದೆ ಯಾವ ರೀತಿ ಕ್ರಮ ಕೈಗೊಳ್ಳಬೇಕು ಎಂಬ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತೇವೆ. ಯಾರು ನೇರ ಹಾಗೂ ಪರೋಕ್ಷವಾಗಿ ಭಾಗಿಯಾಗಿದ್ದಾರೆ ಅವರು ವಿರುದ್ಧ ಕ್ರಮ ಕೈಗೊಳ್ಳಲು ಹಿಂದೇಟು ಹಾಕಲ್ಲ  ಎಂದರು.ಇನ್ನು ಬಜರಂಗದಳ ಬ್ಯಾನ್ ವಿಚಾರವಾಗಿ, ಬಜರಂಗ ದಳ ಬ್ಯಾನ್ ಮಾಡುವ ಸಂದರ್ಭ ಬರಲಾರದು, ಬಂದರೆ ಮಾಡ್ತೀವಿ ಎಂದು ಹೇಳಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News