ನವಗ್ರಹ ತೀರ್ಥ ಕ್ಷೇತ್ರಕ್ಕೆ ಗೃಹ ಸಚಿವ ಭೇಟಿ: ಜೈನ್ ಮುನಿಗಳಿಗೆ ಧೈರ್ಯ ತುಂಬಿದ ಪರಮೇಶ್ವರ್..!
ಹುಬ್ಬಳ್ಳಿಯ ವರೂರಿನ ಜೈನಮುನಿ ಗುಣಧರನಂದಿ ಮಹಾರಾಜ್ ಸ್ವಾಮೀಜಿ ಭೇಟಿಗೆ ಆಗಮಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ, ಹುಬ್ಬಳ್ಳಿ ತಾಲೂಕಿನ ವರೂರಿನ ನವಗ್ರಹ ತೀರ್ಥಂಕರ ಕ್ಷೇತ್ರಕ್ಕೆ ಭೇಟಿ ನೀಡಿ ಜೈನ್ ಮುನಿಗಳಿಗೆ ಧೈರ್ಯ ತುಂಬಿದ್ದಾರೆ.
ಹುಬ್ಬಳ್ಳಿ: ಚಿಕ್ಕೋಡಿ ತಾಲೂಕು ಹಿರೆಕೋಡಿಯ ಕಾಮಕುಮಾರ ನಂದಿ ಮಹಾರಾಜ ಸ್ವಾಮೀಜಿ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ತಾಲೂಕಿನ ವರೂರಿನ ಜೈನ್ ಆಶ್ರಮಕ್ಕೆ ರಾಜ್ಯ ಗೃಹ ಸಚಿವ ಜಿ.ಪರಮೇಶ್ವರ ಭೇಟಿ ನೀಡಿದರು.
ಹೌದು, ಹುಬ್ಬಳ್ಳಿಯ ವರೂರಿನ ಜೈನಮುನಿ ಗುಣಧರನಂದಿ ಮಹಾರಾಜ್ ಸ್ವಾಮೀಜಿ ಭೇಟಿಗೆ ಆಗಮಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ, ಹುಬ್ಬಳ್ಳಿ ತಾಲೂಕಿನ ವರೂರಿನ ನವಗ್ರಹ ತೀರ್ಥಂಕರ ಕ್ಷೇತ್ರಕ್ಕೆ ಭೇಟಿ ನೀಡಿ ಜೈನ್ ಮುನಿಗಳಿಗೆ ಧೈರ್ಯ ತುಂಬಿದ್ದಾರೆ.
ಇದನ್ನೂ ಓದಿ- ಪೊರಕೆ ಕಡ್ಡಿ ಕೀಳಲು ಹೋದಾಗ ಆನೆ ದಾಳಿ: ಅಪ್ಪ ಬಲಿ- ಮಗ ಪಾರು
ಇನ್ನು ಜೈನ ಮುನಿಗಳ ಹತ್ಯೆ ಖಂಡಿಸಿ ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಜೈನಮುನಿ ಗುಣಧರನಂದಿ ಮಾಹಾರಾಜ್ ಸ್ವಾಮೀಜಿಗಳನ್ನು ಭೇಟಿ ಮಾಡಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್, ಭದ್ರತೆಯ ಭರವಸೆ ನೀಡಿದರು. ಅಲ್ಲದೇ ಜೈನ ಮಂದಿರದಲ್ಲಿ ಸ್ವಾಮೀಜಿಗಳ ಜೊತೆ ಪ್ರಕರಣ ಕುರಿತು ಚರ್ಚೆ ಮಾಡುತ್ತಿರೋ ಗೃಹ ಸಚಿವರಿಗೆ ಸಚಿವ ಸಂತೋಷ ಲಾಡ್, ಶಾಸಕ ಪ್ರಸಾದ್ ಅಬ್ಬಯ್ಯ ಸೇರಿದಂತೆ ಸ್ಥಳೀಯ ಮುಖಂಡರು ಸಾಥ್ ನೀಡಿದರು.
ಇದನ್ನೂ ಓದಿ- ಬಿಸಿಬಿಸಿ ರಾಗಿಮುದ್ದೆ-ನಾಟಿ ಕೋಳಿ ಸಾರಿನ ಘಮ ಘಮ..ಮುದ್ದೆ ತಿನ್ನುವ ಸ್ಪರ್ಧೆ..!
ನಿನ್ನೆಯಷ್ಟೇ ದೂರವಾಣಿ ಮೂಲಕ ಜೈನ್ ಮುನಿಗಳ ಜೊತೆಗೆ ಮಾತನಾಡಿದ್ದ ಗೃಹ ಸಚಿವ ಜಿ. ಪರಮೇಶ್ವರ ಸಾಂತ್ವನ ಹೇಳಿದ್ದರು. ಇಂದು ಸ್ವತಃ ತಾವೇ ಭೇಟಿ ಮಾಡಿ ಧೈರ್ಯ ತುಂಬಿ ಭರವಸೆ ನೀಡಿದ್ದಾರೆ.
ಇದಕ್ಕೂ ಮುನ್ನ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಭೇಟಿ ನೀಡಿದ್ದರು. ಹುಬ್ಬಳ್ಳಿ ತಾಲೂಕಿನ ವರೂರಿಗೆ ಭೇಟಿ ನೀಡಿದ ಎಡಿಜಿಪಿ ವರೂರಿನ ಜೈನ ಮುನಿ ಗುಣಧರನಂದಿ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಒಂದು ಗಂಟೆಗೂ ಅಧಿಕ ಕಾಲ ಸಮಾಲೋಚನೆ ನಡೆಸಿದರು. ಈ ವೇಳೆ ಪ್ರಕರಣ ಕುರಿತು ಏನೆಲ್ಲ ಬೆಳವಣಿಗೆ ಆಗಿದೆ ಎಂಬುದರ ಕುರಿತು ಮಾಹಿತಿ ನೀಡಿದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=38l6m8543Vk
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.