ಹುಬ್ಬಳ್ಳಿ: ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಅತ್ಯಂತ ವ್ಯವಸ್ಥಿತವಾಗಿದ್ದು ಯಾವುದೇ ಸಂದರ್ಭದಲ್ಲೂ ಹತೋಟಿ ಮೀರಿ‌ಹೋಗಿಲ್ಲ. ಕೇಂದ್ರ ಸಚಿವೆ ನಿರ್ಮಲಾ ಸಿತಾರಾಮನ್ ಆರೋಪ  ಸತ್ಯಕ್ಕೆ‌ ದೂರವಾಗಿದೆ ಎಂದು  ಗೃಹ ಸಚಿವ ಡಾ. ಜಿ.ಪರಮೇಶ್ವರ (Home Minister Dr G Parameshwara) ಸ್ಪಷ್ಟಪಡಿಸಿದರು.


COMMERCIAL BREAK
SCROLL TO CONTINUE READING

ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಮಾತನಾಡಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ (Union Minister Nirmala Sitharaman) ಅವರ ಹೇಳಿಕೆಗೆ ತಿರುಗೇಟು ನೀಡಿ, ಸ್ವಾಭಾವಿಕವಾಗಿ ಸಮಾಜದಲ್ಲಿ ಅಹಿತಕರ ಘಟನೆಗಳು ನಡೆಯುತ್ತಿರುತ್ತವೆ. ಯಾವ ಕೈಗಾರಿಕೆ ರಾಜ್ಯವನ್ನ ಬಿಟ್ಟು ಹೊರ ಹೋಗುವ ಉದಹಾರಣೆ ಇಲ್ಲ. ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಹೇಳಿದ ಮಾತು ಸತ್ಯಕ್ಕೆ ದೂರವಾಗಿದೆ. ರಾಜ್ಯದಲ್ಲಿ ಕೊಲೆ, ಕಳ್ಳತನ, ದರೋಡೆ, ಡ್ರಗ್ಸ್ ಧಂದೆ ಇರೋದು ನಿಜ. ಆದರೆ, ಯಾವಾಗಿಂದ ಇಂತಹ‌ ಚಟುವಟಿಕೆಗಳಾಗಿವೆ ಅನ್ನೋದು ಅವಲೋಕನ ಮಾಡುವ ಅಗತ್ಯವಿದೆ. ಬಿಜೆಪಿ‌ ಸರ್ಕಾರದ ಅವಧಿಗಿಂತಲೂ ಕಡಿಮೆ ಚಟುವಟಿಕೆ ಇದೆ ಎಂದರು. 


ಇದನ್ನೂ ಓದಿ- "ಭೂ ಕುಸಿತವು ಪ್ರಕೃತಿ ವಿಕೋಪವಲ್ಲ, ಐ.ಆರ್.ಬಿ ಸಂಸ್ಥೆಯ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಆಗಿದೆ"


ರಾಜ್ಯದಲ್ಲಿ‌ ಡ್ರಗ್ಸ್ ಮುಕ್ತವನ್ನಾಗಿಸುವ ಗುರಿ ಹೊಂದಿದ್ದೇವೆ. ಈ ಭಾಗದಲ್ಲೂ ಸಹ ಡ್ರಗ್ಸ್ ದಂಧೆ ಕಡಿವಾಟಕ್ಕೆ ಕ್ರಮ‌ಕೈಗೊಳ್ಳುತ್ತಿದ್ದೇವೆ. ಮೊನ್ನೆಯಷ್ಟೇ ಹುಬ್ಬಳ್ಳಿಯಲ್ಲಿ ಮಾದಕ ವ್ಯಸನಿಗಳನ್ನ ಹಿಡಿದು ತಂದು ಅವರಿಗೆ ಪರೀಕ್ಷೆಗೊಳಪಡಿಸಲಾಗಿದೆ. ಅವರ ಮೂಲಕ ಡ್ರಗ್ಸ್ ಪೆಡ್ಲರ್ ಗಳನ್ನ‌ ಬಂಧಿಸುವ ಕಾರ್ಯ ನಡೆಯುತ್ತಿದೆ. ಈ ಮೂಲಕ‌ ನಾವು ಇಡೀ ರಾಜ್ಯದಲ್ಲಿ ಜಾಗೃತಿ ಮೂಡಿಸುತ್ತಿದ್ದೇವೆ ಎಂದವರು ವಿವರಿಸಿದರು. 


ಇದನ್ನೂ ಓದಿ- Kerala Landslide: ಚಾಮರಾಜನಗರದ ಇಬ್ಬರು ಸಾವು, ಇಬ್ಬರು ನಾಪತ್ತೆ, ಓರ್ವನಿಗೆ ಗಾಯ


ರಾಜ್ಯದ ಪ್ರತಿ ಶಾಲಾ ಕಾಲೇಜುಗಳಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.  ನಿನ್ನೆಯಷ್ಟೇ ಬೆಂಗಳೂರಿನಲ್ಲಿ ಒಬ್ಬ ಡ್ರಗ್ ಪೆಡ್ಲರ್‌ ನನ್ನ ಬಂಧನ ಮಾಡಲಾಗಿದ್ದು, ಅವನು ನೈಜೇರಿಯಾದಿಂದ ಡ್ರಗ್ಸ್ ತಂದು ಮಾರಾಟ ಮಾಡಿರುವುದು ಗಮನಕ್ಕೆ ಬಂದಿದೆ. ಇದಲ್ಲದೇ ಸೈಬರ್ ಕ್ರೈಂ ಗಳ ಹಾವಳಿ ಹೆಚ್ಚಾಗಿದೆ ಎಂಬ ದೂರುಗಳು ಹೆಚ್ಚಾಗಿರುವ ಹಿನ್ನಲೆಯಲ್ಲಿ ಸೈಬರ್ ಕ್ರೈಂ ತಡೆಗಟ್ಟಯವ ಪ್ರಯತ್ನಗಳು ಕೂಡ ನಡೆಯುತ್ತಿವೆ. ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹತೋಟಿಗೆ ತಂದಿದ್ದೇವೆ ಎಂದರು. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.