ಬೆಂಗಳೂರು : ವಿಶ್ವದೆಲ್ಲೆಡೆ ಮಾದಕ ದ್ರವ್ಯ ಆಧುನಿಕ ಪಿಡುಗು ಆಗಿದ್ದು, ಯುವ ಸಮುದಾಯವನ್ನೇ ಹಾಳು ಮಾಡುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್  ಅವರು ಹೇಳಿದರು.


COMMERCIAL BREAK
SCROLL TO CONTINUE READING

ಮಾದಕ ವಸ್ತುಗಳ ವ್ಯಸನದ ಸಮಸ್ಯೆಯನ್ನು ಅರ್ಥೈಸಿಕೊಂಡ ವಿಶ್ವಸಂಸ್ಥೆಯು 1987ರಲ್ಲಿ ಮಾದಕ  ವಸ್ತು ವಿರೋಧಿ ದಿನವನ್ನು ಜೂನ್ 26ರಂದು ಆಚರಿಸಲು ನಿರ್ಣಯಿಸಿತು.ಸಮಾಜಕ್ಕೆ ದೊಡ್ಡ ರೋಗವಾಗಿ ಅಂಟಿಕೊಳ್ಳುತ್ತಿದ್ದು, ಯುವ ಪೀಳಿಗೆ ಸಂಕಷ್ಟಕ್ಕೆ ಸಿಲುಕದಂತೆ ಜಾಗೃತಿ ಮೂಡಿಸಬೇಕಿದೆ ಎಂದರು‌.


ಇದನ್ನೂ ಓದಿ : ರಾಯಚೂರು ನಗರದಲ್ಲಿ ಇಂಥದ್ದೊಂದು ವಿಶಿಷ್ಟ ಆಚರಣೆ ನಡೀತಿದೆ


ಭಾರತವು ಮಾದಕ ವಸ್ತುಗಳ ಸಮಸ್ಯೆಯಲ್ಲಿ ಸಿಲುಕುತ್ತಿದೆ.5 ಕೋಟಿ ಜನ ಮಾದಕ ವ್ಯಸನಕ್ಕೆ ಅಂಟಿಕೊಂಡಿದ್ದಾರೆ.ಯುವಕರು ಹಾಳಾದರೆ,ದೇಶ ಸಂಕಷ್ಟಕ್ಕೆ ಸಿಲುಕಿದಂತಾಗುತ್ತದೆ.ಭಾರತ ಅತಿ ಹೆಚ್ಚು ಯುವಕರನ್ನು ಹೊಂದಿರುವ ದೇಶ.ಬಹಳ ಎಚ್ಚರಿಕೆಯಿಂದ ದೇಶದ ಮುಂದಿನ ಭವಿಷ್ಯವನ್ನು ನೋಡಿಕೊಳ್ಳಬೇಕಿದೆ ಎಂದು ಹೇಳಿದರು. 


ಕೊಲೆ ಪ್ರಕರಣಗಳನ್ನು ಪತ್ತೆ ಹಚ್ಚುವಾಗ 17 ರಿಂದ 20 ವರ್ಷದೊಳಗಿನವರೆ ಭಾಗಿಯಾಗುತ್ತಿರುವುದು ಬೆಳಕಿಗೆ ಬರುತ್ತಿದೆ.ತಪ್ಪಿತಸ್ಥರನ್ನು ತಪಾಸಣೆಗೆ ಒಳಪಡಿಸಿದಾಗ ಮಾದಕ ವ್ಯಸನಿಯಾಗಿದ್ದರು ಎಂಬುದು ಗೊತ್ತಾಗುತ್ತಿದೆ.ಮಾದಕ ವ್ಯಸನದಿಂದ ಸಮಾಜಕ್ಕೆ ಅಪಾಯವಿದ್ದು,ಪಾಲಕರು ತಮ್ಮ ಮಕ್ಕಳ ಚಟುವಟಿಕೆಗಳ ಮೇಲೆ ನಿಗಾವಹಿಸಬೇಕು.ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತು ಹೆಚ್ಚು ಜಾಗೃತಿ ಮೂಡಿಸುವಂತೆ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.


ಇದನ್ನೂ ಓದಿ : ವಿಜಯನಗರ ಜಿಲ್ಲೆಯಲ್ಲಿ ಹಳ್ಳಿ ಹೈದನಿಂದ ಹೊಸ ಆವಿಷ್ಕಾರ


ರಾಜ್ಯ ಸರ್ಕಾರವು ಡ್ರಗ್ಸ್ ಮುಕ್ತ ಕರ್ನಾಟಕ ನಿರ್ಮಾಣದ ಘೋಷಣೆ ಮಾಡಿದೆ. ಸಂಪೂರ್ಣವಾಗಿ ಡ್ರಗ್ಸ್ ಮಟ್ಟ ಹಾಕುವ ನಿಟ್ಟಿನಲ್ಲಿ ಇಲಾಖೆಯು ಯುದ್ಧವನ್ನೆ ಸಾರಿದೆ. 40 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶಪಡಿಸಲಾಗಿದ್ದು, 10 ಟನ್ ಗಾಂಜಾ ಸುಟ್ಟು ಹಾಕಲಾಗಿದೆ.ಇಷ್ಟೊಂದು ಪ್ರಮಾಣದ ಡ್ರಗ್ಸ್ ಯುವಕರ ಕೈಸೇರಿದ್ದರೆ ಎಷ್ಟು ಕುಟುಂಬಗಳು ಹಾಳಾಗುತ್ತಿದ್ದವೋ ಎಂದು ಆತಂಕ ವ್ಯಕ್ತಪಡಿಸಿದರು‌.


ಪ್ರತಿಯೊಬ್ಬರು ಡ್ರಗ್ಸ್‌ನಿಂದ ದೂರ ಇರುತ್ತೇವೆ ಎಂದು ಸಂಕಲ್ಪ ಮಾಡಿಕೊಳ್ಳಬೇಕು. ಐಟಿ‌ ಕಂಪನಿಗಳು ಕೈಗಾರಿಕೆಗಳು ಡ್ರಗ್ಸ್ ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಹೇಳಿದರು.



https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.