ಬೆಂಗಳೂರು : ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಕುರಿತು ಸರ್ಕಾರದ ಹಂತದಲ್ಲಿ ಚರ್ಚೆಯಾಗಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್  ಸ್ಪಷ್ಟಪಡಿಸಿದ್ದಾರೆ. ಸಚಿವರು, ಮುಖಂಡರು ದೆಹಲಿಗೆ ಹೋದಾಗ ಎಐಸಿಸಿ ಕಚೇರಿಗೆ ಭೇಟಿ ನೀಡುವುದು ಸಂಪ್ರದಾಯ.ಇದಕ್ಕೆ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಗ್ಯಾರಂಟಿ ಯೋಜನೆಗಳು ಬಡವರಿಗೆ ಮಾತ್ರ ತಲುಪಬೇಕು ಎಂಬುದು ಬಹಳ ಜನರ ಅಭಿಪ್ರಾಯವಾಗಿದೆ. ಈಗಾಗಲೇ ಬಜೆಟ್‌ನಲ್ಲಿ ಗ್ಯಾರಂಟಿ ಯೋಜನೆಗಳಿಗೆ 56 ಸಾವಿರ ಕೋಟಿ ಮೀಸಲಿಡಲಾಗಿದೆ. ಹೀಗಾಗಿ ಗ್ಯಾರಂಟಿ ಯೋಜನೆಗಳನ್ನು ಪರಿಷ್ಕರಣೆ ಮಾಡುವುದು ಸಾಧ್ಯವಿಲ್ಲ ಎಂದಿದ್ದಾರೆ. 


COMMERCIAL BREAK
SCROLL TO CONTINUE READING

ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಚರ್ಚೆಗಳಾಗುತ್ತಿರುವುದು ನಿಜ. ಶಾಸಕರು, ಕಾರ್ಯಕರ್ತರು ಸಾರ್ವಜನಿಕವಾಗಿ ಅಲ್ಲಲ್ಲಿ ಮಾತನಾಡಿರಬಹುದು.ಆದರೆ ಪಕ್ಷದ ವೇದಿಕೆಯಲ್ಲಿ, ಸರ್ಕಾರದ ಹಂತದಲ್ಲಿ ಈ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ ಎನ್ನುವುದನ್ನು ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಶೇ.‌13ರಷ್ಟು ಮತ ಹೆಚ್ಚಾಗಿವೆ.ಗ್ಯಾರಂಟಿ ಯೋಜನೆಗಳಿಂದ ಮತ ಹೆಚ್ಚಾಗಿದೆ ಎಂದು ಯಾಕೆ ವಿಶ್ಲೇಷಣೆ ಮಾಡಬಾರದು ಎಂದ ಅವರು, ಗ್ಯಾರಂಟಿ ಯೋಜನೆ ಪರಿಷ್ಕರಣೆ ಬಗ್ಗೆ ನನ್ನ ಅಭಿಪ್ರಾಯವೊಂದೇ ಮುಖ್ಯವಾಗುವುದಿಲ್ಲ. ಒಬ್ಬೊಬ್ಬರು ಒಂದೊಂದು ಹೇಳಿಕೆಗಳನ್ನು ನೀಡುತ್ತಾ ಹೋದರೆ ಗೊಂದಲ ಉಂಟಾಗುತ್ತದೆ ಎಂದು ಹೇಳಿದ್ದಾರೆ. 


ಇದನ್ನೂ ಓದಿ : 2024ನೇ ಸಾಲಿನ ದಸರಾದಲ್ಲಿ ಪಾಲ್ಗೊಳ್ಳುವ ಆನೆಗಳ ಪಟ್ಟಿ ಬಿಡುಗಡೆ: ಅಭಿಮನ್ಯು ಸೇರಿ 14 ಆನೆಗಳು ಭಾಗಿ


ಮೂಡಾ ವಿಚಾರದಲ್ಲಿ ರಾಜ್ಯಪಾಲರ ನಡೆಯ ಬಗ್ಗೆ ವಕ್ತಾರನಾಗಿ ನಾನೇನು ಹೇಳಲು ಹೋಗುವುದಿಲ್ಲ.ತಪ್ಪು ತೀರ್ಮಾನ ತೆಗೆದುಕೊಳ್ಳುತ್ತಿದ್ದೀರಿ.ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬೇಡಿ.ಸಿಎಂ ಅವರಿಗೆ ನೀಡಿರುವ ಶೋಕಾಸ್ ನೋಟಿಸ್ ವಾಪಸ್ ಪಡೆಯುವಂತೆ ಕ್ಯಾಬಿನೆಟ್ ತೀರ್ಮಾನಿಸಿ ರಾಜ್ಯಪಾಲರಿಗೆ ಸಲಹೆ ಮಾಡಿದೆ.ಇದನ್ನು ರಾಜ್ಯಪಾಲರು ಸ್ವೀಕರಿಸಬೇಕು.ಇಲ್ಲವಾದರೆ ಮುಂದಿನ ಕ್ರಮದ ಬಗ್ಗೆ ಸಮರ್ಥನೆ ನೀಡಬೇಕಾಗುತ್ತದೆ ಎಂದು ಹೇಳಿದರು‌


ಒಳಮೀಸಲಾತಿ ಜಾರಿ ಮಾಡುವ ಕುರಿತು ಎಐಸಿಸಿಯವರು ರಾಜ್ಯ ಸರ್ಕಾರಕ್ಕೆ ಯಾವ ನಿರ್ದೇಶನ ನೀಡುತ್ತಾರೆಯೋ, ಅದರ ಪ್ರಕಾರ ಮುಂದುವರಿಯುತ್ತೇವೆ. ಈ ಬಗ್ಗೆ ಹೈಕಮಾಂಡ್ ಹಂತದಲ್ಲಿ ಚರ್ಚೆಯಾಗಬೇಕು ಎಂದರು.


ಇದನ್ನೂ ಓದಿ : ಎತ್ತಿನಹೊಳೆ ಯೋಜನೆ ಚೆಕ್‌ ಡ್ಯಾಂಗೆ ಪ್ರಾಯೋಗಿಕವಾಗಿ ನೀರು


ಭೋವಿ ನಿಗಮದ ಮೇಲೆ ಸಿಐಡಿ ದಾಳಿ ನಡೆಸಿರುವ ಕುರಿತು ಪ್ರತಿಕ್ರಿಯಿಸಿದ ಪರಮೇಶ್ವರ್ ಅಕ್ರಮದ ಬಗ್ಗೆ ತನಿಖೆಗೆ ಆದೇಶಿಸಲಾಗಿತ್ತು.ಇದರ ಭಾಗವಾಗಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.ಬಿಜೆಪಿ ಅಧಿಕಾರವಧಿಯಲ್ಲಿ ನಡೆದಿರುವ ಎಲ್ಲಾ ಅಕ್ರಮಗಳ ಬಗ್ಗೆ ತನಿಖೆ ಮಾಡುತ್ತೇವೆ ಎಂದು ಹೇಳಿದ್ದಾರೆ.ಎಲ್ಲವನ್ನೂ ತಾರ್ಕಿಕ ಅಂತ್ಯಕ್ಕೆ ತರಬೇಕು‌‌ ಎಂದು ಹೇಳಿದ್ದಾರೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ