Home minister : ಬೀದರ್ ನಲ್ಲಿ ಬಿಜೆಪಿ ಮುಖಂಡರು ನಡೆಸಿದ ಪ್ರತಿಭಟನೆಯ ವೇಳೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಬಗ್ಗೆ ದುರುದ್ದೇಶಪೂರ್ವಕವಾಗಿ ಆಡಿರುವ ಅವಹೇಳನಕಾರಿ ಮಾತುಗಳು ಇಡೀ ದಲಿತ ಸಮುದಾಯಕ್ಕೆ ಮಾಡಿದ ಅವಮಾನವಾಗಿದೆ. 


COMMERCIAL BREAK
SCROLL TO CONTINUE READING

ಇದನ್ನು ಓದಿ : Manvita Kamath : "ಮೇ ಮೆಂಟಲ್ ಹೊ ಜಾವಾ " ಎಂದ ಕೆಂಡಸಂಪಿಗೆ ಹುಡುಗಿಯ ಫೋಟೋಸ್ ಇಲ್ಲಿವೆ ನೋಡಿ


ಇದು ಬಿಜೆಪಿ ಸಂಸ್ಕೃತಿಗೆ ಹಿಡಿದ ಕನ್ನಡಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.


ಬಿಜೆಪಿ ಬೀದರ್ ನಲ್ಲಿ ಮೊನ್ನೆ ನಡೆಸಿದ ಪ್ರತಿಭಟನೆ ವೇಳೆ ಹಾಲಿ ಸಂಸದ ಮತ್ತು ಕೇಂದ್ರ ಸಚಿವ ಭಗವಂತ ಖೂಬಾ ಹಿಂಬಾಲಕರು, ಖೂಬಾ ಅವರ ಕುಮ್ಮಕ್ಕಿನಿಂದಲೇ ಡಾ. ಜಿ. ಪರಮೇಶ್ವರ ಅವರ ಬಗ್ಗೆ ಅತ್ಯಂತ ಅವಹೇಳನಕಾರಿ ಪದಗಳನ್ನು ಬಳಸಿ ಅವಮಾನಿಸಿದ್ದಾರೆ.  ಇದು ರಾಜ್ಯದ ಗೃಹ ಸಚಿವರಿಗೆ ಮಾಡಿದ ಘೋರ ಅವಮಾನವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಬಿಜೆಪಿಯ ಈ ವರ್ತನೆಯನ್ನು ತಾವು ಉಗ್ರವಾಗಿ ಖಂಡಿಸುವುದಾಗಿ ಅವರು ತಿಳಿಸಿದ್ದಾರೆ. ಬಿಜೆಪಿ ಕಾಂಗ್ರೆಸ್ ನ ಎಲ್ಲ ನಾಯಕರ ಬಗ್ಗೆ ವೈಯಕ್ತಿಕ ಆರೋಪಗಳನ್ನು ಮಾಡುತ್ತಿದೆ. ಕೀಳು ಮಟ್ಟದ ರಾಜಕೀಯ ಮಾಡುತ್ತಿದೆ. ಇದು ಆ ಪಕ್ಷದ ಕೆಟ್ಟ ಸಂಸ್ಕೃತಿಯಾಗಿದೆ. 


ಇದನ್ನು ಓದಿ : PL 2024 : ಮುಂಬೈ ವಿರುದ್ಧ ರಾಜಸ್ಥಾನ್ ಪಂದ್ಯ, ಟಾಸ್ ಗೆದ್ದು MI ಬ್ಯಾಟಿಂಗ್ ಆಯ್ಕೆ


ಜಿಲ್ಲಾ ಪೊಲೀಸರು ಕೂಡಲೇ ಪ್ರತಿಭಟನೆಯಲ್ಲಿ ಗೃಹಸಚಿವರಿಗೆ ಅವಮಾನ ಮಾಡಿದವರ ವಿರುದ್ಧ ಮತ್ತು ಅದಕ್ಕೆ ಕುಮ್ಮಕ್ಕು ನೀಡಿರುವ ಸಂಸದರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು, ಚುನಾವಣೆ ಆಯೋಗ ಕೂಡ ಖೂಬಾ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.