ಬೆಂಗಳೂರು : ಅಮೇರಿಕಾದಲ್ಲಿ ಡಿ.ಕೆ.ಶಿವಕುಮಾರ್ ಮತ್ತು ರಾಹುಲ್ ಗಾಂಧಿ ಭೇಟಿಯಾಗಿರುವುದು ನನಗೆ ಗೊತ್ತಿಲ್ಲ.ಸೋಷಿಯಲ್ ಮೀಡಿಯಾದಲ್ಲಿ ಬಂದಿರುವ ಫೋಟೊಗಳನ್ನು ಗಮನಿಸಿದ್ದೇನೆ.ಅವರು ಕುಟುಂಬ ಸಮೇತ ಅಮೇರಿಕಾ ಪ್ರವಾಸ ಹೋಗಿದ್ದಾರೆ.ಆಕಸ್ಮಿಕವಾಗಿ ಅದೇ ಹೋಟೆಲ್‌ನಲ್ಲಿ ಸಿಕ್ಕಿದ್ದಾರೆ ಎಂದರೆ, ಓಡಿ ಹೋಗಲು ಆಗುತ್ತಾ? ಸತ್ಕರಿಸಿರುತ್ತಾರೆ.ಅದು ಬಿಟ್ಟರೆ ಬೇರೆನು ಗೊತ್ತಿಲ್ಲ,ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ಹೇಳಿದರು.


COMMERCIAL BREAK
SCROLL TO CONTINUE READING

ಯಾವುದೇ ಬಿಪಿಎಲ್ ಕಾರ್ಡ್‌ಗಳನ್ನು ಕಡಿತ ಮಾಡುವುದಿಲ್ಲ. ತೆರಿಗೆ ಪಾವತಿ ಮಾಡುತ್ತಿರುವವರು ಬಿಪಿಎಲ್ ಕಾರ್ಡ್ ಪಡೆಯಲು ಅರ್ಹರಲ್ಲ ಎಂಬುದು ನಿಯಮದಲ್ಲಿದೆ.ಸುಳ್ಳು ದಾಖಲೆ ಸಲ್ಲಿಸಿ, ಅಧಿಕಾರಿಗಳ ಮನವೊಲಿಸಿ ಕಾರ್ಡ್ ಪಡೆದಿರುವುದು ತಪ್ಪಲ್ಲವೇ ಎಂದು ಪ್ರಶ್ನಿಸಿದ್ದಾರೆ. 


ಇದನ್ನೂ ಓದಿ : ಪಿಎಸ್ಐ ಪರೀಕ್ಷೆ ಮುಂದೂಡುವ ವಿಚಾರ : ಇಂದೇ ಹೊರ ಬೀಳುವುದೇ ಸರ್ಕಾರದ ತೀರ್ಮಾನ !ಕೆಇಎ ಜೊತೆ ಸಮಾಲೋಚನೆ ಬಳಿಕ ನಿರ್ಧಾರ


ಸರ್ಕಾರ ಬಡವರ ಅನ್ನ ಕಿತ್ತುಕೊಳ್ಳುವ ಪ್ರಯತ್ನ ಮಾಡುತ್ತಿದೆ ಎಂದಿರುವ ಹೆಚ್‌.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಪರಮೇಶ್ವರ್,ಅವರು  ಏನೋ ಹೇಳುತ್ತಾರೆ ಪಾಪ. ಹೆಚ್.ಡಿ.ಕುಮಾರಸ್ವಾಮಿ ಅವರು ದೊಡ್ಡ ಜವಾಬ್ಧಾರಿಯಲ್ಲಿದ್ದಾರೆ. ರಾಜ್ಯಕ್ಕೆ ದೊಡ್ಡ ಕೈಗಾರಿಕೆ, ಸ್ಟೀಲ್ ಇಂಡಸ್ಟ್ರೀಸ್ ನೀಡಿದರೆ ಚೆಂದ ಎಂದು ಹೇಳಿದರು.


 ತನಿಖಾ ಸಂಸ್ಥೆಗಳ ಹಂತದಲ್ಲಿ ವಿವಿಧ ಹಗರಣಗಳ ತನಿಖೆ ಬಾಕಿ ಇರುವ ಪ್ರಕರಣಗಳ ಪ್ರಗತಿ ಪರಿಶೀಲನೆಗೆ ವಾರದೊಳಗೆ ಸಮಿತಿ ಸಭೆ ನಡೆಸುತ್ತೇನೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.  


ಇದನ್ನೂ ಓದಿ : ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ASI


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.