ಬೆಂಗಳೂರು: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕು ಮತ್ತು ನಾನು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಎಂದು ಹೇಳಿಕೆ ನೀಡಿ ಸದಾ ಸುದ್ದಿಯಲ್ಲಿ ಇರುತ್ತಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಅರಣ್ಯ ಸಚಿವರಾಗಿದ್ದ ಉಮೇಶ್ ಕತ್ತಿ ಮಂಗಳವಾರ ರಾತ್ರಿ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಇದರೊಂದಿಗೆ ಉತ್ತರ ಕರ್ನಾಟಕ ಅಭಿವೃದ್ಧಿಯ ಆಶಾದೀಪವೂ ಆರಿದಂತಾಗಿದೆ. 


COMMERCIAL BREAK
SCROLL TO CONTINUE READING

ಒಂಬತ್ತು ಬಾರಿ ಚುನಾವಣೆ ಎದುರಿಸಿ 8 ಬಾರಿ ಗೆದ್ದಿದ್ದ ಉಮೇಶ್ ಕತ್ತಿ:
1985ರಲ್ಲಿ ರಾಜಕೀಯಕ್ಕೆ ಎಂಟ್ರಿ ನೀಡಿದ ಉಮೇಶ್ ಕತ್ತಿ, ಆರು ಪಕ್ಷಗಳನ್ನು ಬದಲಿಸಿದ್ದಾರೆ.
ಒಂಬತ್ತು ಬಾರಿ ಚುನಾವಣೆ ಎದುರಿಸಿ 8 ಬಾರಿ ಗೆದ್ದಿರುವ ಉಮೇಶ್ ಕತ್ತಿ ನಾಲ್ಕನೇ ಬಾರಿಗೆ ಸಚಿವರಾಗಿದ್ದರು. 


ಇದನ್ನೂ ಓದಿ- ನ್ಯೂಯಾರ್ಕ್ ಕನ್ನಡ ಕೂಟದಲ್ಲಿ ಸಚಿವ ನಿರಾಣಿ ಭಾಗಿ: ಉತ್ತರ ಕರ್ನಾಟಕ ಸಂಘದ ಪೋಸ್ಟರ್ ಬಿಡುಗಡೆ


ಬೆಳಗಾವಿಯ ಕೆಎಲ್‌ಇ ಸೊಸೈಟಿಯ ಲಿಂಗರಾಜ್ ಕಾಲೇಜಿನಲ್ಲಿ ಪಿಯುಸಿ ತನಕ ವ್ಯಾಸಂಗ ಮಾಡಿರುವ ಉಮೇಶ್ ಕತ್ತಿ ಅವರು ಹುಕ್ಕೇರಿ ಕ್ಷೇತ್ರದಿಂದ 1985ರಲ್ಲಿ ಮೊದಲ ಬಾರಿಗೆ ಜನತಾ ಪಕ್ಷದಿಂದ ಚುನಾವಣಾ ಕಣಕ್ಕಿಳಿದರು. ಮೊದಲ ಪ್ರಯತ್ನದಲ್ಲೇ ಗೆಲುವು ಕಂಡರು. 1989ರಲ್ಲಿ ಜನತಾದಳಕ್ಕೆ ಬಂದು ಅಭ್ಯರ್ಥಿಯಾಗಿ ಕಣಕ್ಕಿಳಿದು ಗೆದ್ದರು. 1994ರಲ್ಲಿಯೂ ಗೆದ್ದು ಹ್ಯಾಟ್ರಿಕ್ ಬಾರಿಸಿದರು. 1999ರಲ್ಲಿ ಸಂಯುಕ್ತ ಜನತಾದಳ (ಜೆಡಿಯು)ನಿಂದ ಸ್ಪರ್ಧಿಸಿ 4ನೇ ಬಾರಿಯೂ ಗೆದ್ದರು.


2004ರಲ್ಲಿ ಕಾಂಗ್ರೆಸ್‌ಗೆ ಬಂದ ಉಮೇಶ್ ಕತ್ತಿ ಚುನಾವಣೆಯಲ್ಲಿ ಸೋಲು ಕಂಡರು. ರಾಜಕೀಯ ಜೀವನದಲ್ಲಿ ಇದೊಂದೇ ಚುನಾವಣೆಯಲ್ಲಿ ಉಮೇಶ್ ಕತ್ತಿ ಸೋಲು ಕಂಡಿರುವುದು. 2008ರಲ್ಲಿ ಜೆಡಿಎಸ್ ಸೇರಿ ಮತ್ತೆ ಅದೇ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಕಂಡರು. ಬಳಿಕ ಆಪರೇಷನ್ ಕಮಲಕ್ಕೆ ಒಳಗಾಗಿ ಬಿಜೆಪಿ ಸೇರಿದರು. ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದು 6ನೇ ಗೆಲುವು ಸಾಧಿಸಿದರು. 2013, 2018ರ ಚುನಾವಣೆಯಲ್ಲಿಯೂ ಹುಕ್ಕೇರಿ ಕ್ಷೇತ್ರದಿಂದ ಕಣಕ್ಕಿಳಿದು ಗೆಲುವು ಸಾಧಿಸಿದರು.


ಇದನ್ನೂ ಓದಿ- ಮಳೆ ಅವಾಂತರಕ್ಕೆ ಯಳಂದೂರು ತತ್ತರ : ಪೊಲೀಸ್ ಠಾಣೆ, ಶಾಲಾ-ಕಾಲೇಜು ಮುಳುಗಡೆ!


ಶಾಸಕರಾಗಿದ್ದ ತಂದೆ ವಿಶ್ವನಾಥ್ ಕತ್ತಿ ನಿಧನದಿಂದಾಗಿ ರಾಜಕೀಯಕ್ಕೆ ಬಂದ ಉಮೇಶ್ ಕತ್ತಿ 1996ರಲ್ಲಿ ಮೊದಲ ಬಾರಿಗೆ ಸಕ್ಕರೆ ಖಾತೆ ಸಚಿವರಾದರು. 2008ರಲ್ಲಿ ತೋಟಗಾರಿಕೆ ಮತ್ತು ಬಂಧಿಖಾನೆ ಸಚಿವರಾದರು.
2010ರಲ್ಲಿ ಕೃಷಿ ಸಚಿವರಾದರು. ಕರ್ನಾಟಕದಲ್ಲಿ ಮೊದಲ ಬಾರಿಗೆ ಪ್ರತ್ಯೇಕ ಕೃಷಿ ಬಜೆಟ್ ಮಂಡಿಸಿದ ಕೀರ್ತಿ ಉಮೇಶ್ ಕತ್ತಿ ಅವರದ್ದು. 2019ರಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಸಂಪುಟ ಆಹಾರ ಮತ್ತು ನಾಗರೀಕ ಪೂರೈಕೆ ಖಾತೆಯನ್ನೂ ನಿರ್ವಹಿಸಿದ್ಸರು. 
2021ರಲ್ಲಿಯೂ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಉಮೇಶ್ ಕತ್ತಿ ಅರಣ್ಯ ಇಲಾಖೆ ಖಾತೆ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.