ತುಮಕೂರು: ತುಮಕೂರು ಜಿಲ್ಲೆ‌ ಶಿರಾ ತಾಲ್ಲೂಕಿನ ಕಳ್ಳಂಬೆಳ್ಳ ಬಳಿಯ ಬಾಲೆನಹಳ್ಳಿ ಗೇಟ್ ಬಳಿ ಗುರುವಾರ ನಸುಕಿನಲ್ಲಿ ಲಾರಿ ಹಾಗೂ ಟೆಂಪೋ ಟ್ರ್ಯಾಕ್ಸ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ‌ ಅಪಘಾತದಲ್ಲಿ 9 ಜನರು ಸಾವನ್ನಪ್ಪಿದ್ದು 14ಕ್ಕೂ ಹೆಚ್ಚು ಜನರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಬೆಳಗಿನ ಜಾವ ಸರಿಸುಮಾರು 4 . 30ಕ್ಕೆ ಈ ದುರಂತ ಸಂಭವಿಸಿದೆ.


COMMERCIAL BREAK
SCROLL TO CONTINUE READING

ಟೆಂಪೋ ಟ್ರ್ಯಾಕ್ಸ್ ರಾಯಚೂರು ಕಡೆಯಿಂದ ಬೆಂಗಳೂರು ಕಡೆಗೆ ತೆರಳುತ್ತಿತ್ತು. ಲಾರಿ ಬೆಂಗಳೂರು ಕಡೆಯಿಂದ ತೆರಳಿತ್ತಿತ್ತು. ಟೆಂಪೋ ಟ್ರ್ಯಾಕ್ಸ್ ನಲ್ಲಿ 20 ಜನ ತೆರಳುತ್ತಿದ್ದರು. ವೇಗವಾಗಿ ಚಲಿಸುತ್ತಿದ್ದ ಲಾರಿಯು ಟೆಂಪೋ ಟ್ರ್ಯಾಕ್ಸ್ ಗೆ ಡಿಕ್ಕಿ ಹೊಡೆದ ರಭಸಕ್ಕೆ 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ. ಅಲ್ಲದೆ 14ಕ್ಕೂ ಹೆಚ್ಚು ಜನರಿಗೆ ಗಂಭೀರ ರೀತಿಯ ಗಾಯಗಳಾಗಿವೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.


ಮೃತರನ್ನು  ಕಷ್ಣಪ್ಪ, ಸುಜಾತ, ವಿನೋದ ಹಾಗೂ ನಾಲ್ಕು ವರ್ಷದ  ಎರಡು ಹೆಣ್ಣು ಮಕ್ಕಳು ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ದುರ್ಗಮ್ಮ, ಬಾಲಾಜಿ, ಉಮೇಶ್, ಯಲ್ಲಮ್ಮ, ಅನಿಲ್, ದೇವರಾಜ್, ಮೌನಿಕ, ನಾಗಮ್ಮ,  ನಾಗಪ್ಪ, ವಸಂತ,  ವೈಶಾಲಿ, ಲಿಲಿತ ಎಂದು ಗುರುತಿಸಲಾಗಿದೆ. 


ಇದನ್ನೂ ಓದಿ- Rain Alert: ರಾಜ್ಯದ ಹಲವೆಡೆ ಇಂದು ಭಾರೀ ಮಳೆ, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್


ಕಳ್ಳಂಬೆಳ್ಳ ಸಬ್ ಇನ್ಸ್ಪೆಕ್ಟರ್. ಶಿರಾ ಗ್ರಾಮಾಂತರ ಸರ್ಕಲ್ ಇನ್ಸ್ಪೆಕ್ಟರ್ ಮತ್ತು ಸಿಬ್ಬಂದಿ‌ ಭೇಟಿ ಹಾಗೂ ತುಮಕೂರು ಎಸ್ಪಿ ರಾಹುಲ್ ಕುಮಾರ್ ಶಹಪೂರ್ ವಾಡ್ ಸ್ಥಳಕ್ಕೆ ಭೇಟಿ ಮಾಡಿ ಪರಿಶೀಲನೆ ನಡೆಸಿದ್ದಾರೆ.


ಇದನ್ನೂ ಓದಿ- ನ್ಯಾಯಾಂಗ ತನಿಖೆ ನಡೆಸಿದ್ರೆ ಸರ್ಕಾರದ ಭ್ರಷ್ಟಾಚಾರವನ್ನು ನಾವು ಸಾಬೀತು ಮಾಡುತ್ತೇವೆ: ಸಿದ್ದರಾಮಯ್ಯ


ಅಪಘಾತದಿಂದ ಮೃತಪಟ್ಟವರು ರಾಯಚೂರು ಜಿಲ್ಲೆಯ ಸಿಂಧನೂರು, ಲಿಂಗಸೂರು, ದೇವದುರ್ಗದ ನಿವಾಸಿಗಳು. ಅವರೆಲ್ಲರೂ ಕೂಲಿ ಕಾರ್ಮಿಕರಾಗಿದ್ದು ಕೆಲಸಕ್ಕಾಗಿ ಬೆಂಗಳೂರಿಗೆ ಹೋಗುತ್ತಿದ್ದರು. ಆ ಸಂದರ್ಭದಲ್ಲಿ ಟೆಂಪೋ ಟ್ರ್ಯಾಕ್ಸ್ ಗೆ ಲಾರಿ‌ಯು ಡಿಕ್ಕಿ ಹೊಡೆದಿದೆ ಎಂದು ಹೇಳಲಾಗುತ್ತಿದೆ‌. ಲಾರಿ ಮತ್ತು ಟೆಂಪೋ ಟ್ರ್ಯಾಕ್ಸ್ ಚಾಲಕರ ಬಗೆಗಿನ ಮಾಹಿತಿ ಇನ್ನಷ್ಟೇ ಗೊತ್ತಾಗಬೇಕಿದೆ. ತನಿಖೆ ಕೈಗೆತ್ತಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.