)
Road Accident: ವೇಗವಾಗಿ ಬಂದ ಕಾರೊಂದು ಗೂಡ್ಸ್ ಆಟೋಗೆ ಡಿಕ್ಕಿ ಹೊಡೆದಿದ್ದು ಆಟೋ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಡ್ಯದ ಮದ್ದೂರಿನ ಚಾಮನಹಳ್ಳಿ ಬಳಿ ನಿನ್ನೆ (ಅ.28) ತಡರಾತ್ರಿ ನಡೆದಿದೆ. ಈ ಘಟನೆಯ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಈ ಭೀಕರ ರಸ್ತೆ ಅಪಘಾತದಲ್ಲಿ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಗೂಡ್ಸ್ ಆಟೋ ಮೇಲಕ್ಕೆ ಹಾರಿ ನಂತರ ಪಲ್ಟಿ ಹೊಡೆದಿದ್ದು ಗೂಡ್ಸ್ ಆಟೋ ಗಂಭೀರ ಗಾಯಗಳಾಗಿವೆ.
ಮದ್ದೂರಿನ ಚಾಮನಹಳ್ಳಿ ಬಳಿ ನಡೆದಿರುವ ಈ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಆಟೋ ಚಾಲಕ ಚಾಲಕ ರಾಜು ಅವರನ್ನು ಚಿಕಿತ್ಸೆಗಾಗಿ ಮದ್ದೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಈ ಭಯಾನಕ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೋರ್ವ ಕೂದಲೆಳೆ ಅಂತರದಲ್ಲಿ ಪಾರಾಗಿರುವುದು ಸಿಸಿಟಿವಿಯ ದೃಶ್ಯಾವಳಿಯಿಂದ ತಿಳಿದುಬಂದಿದೆ.