ಬೆಂಗಳೂರು: ತೋಟಗಾರಿಕೆ ಇಲಾಖೆಯಿಂದ 2022-23 ನೇ ಸಾಲಿಗಾಗಿ  ಐದು ಮಹಿಳಾ  ಹಾಗೂ ಹತ್ತು ಜನ ಪುರುಷ ಅಭ್ಯರ್ಥಿಗಳು ಸೇರಿ ಒಟ್ಟು 15 ಅಭ್ಯರ್ಥಿಗಳಿಗೆ ಮೇ 2,2022 ರಿಂದ ಫೆಬ್ರುವರಿ 28,2023 ರವರೆಗೆ ಒಟ್ಟು 10 ತಿಂಗಳುಗಳ ಅವಧಿಗೆ ಗದಗದಲ್ಲಿರುವ  ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ತರಬೇತಿ ನೀಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಪಂಚರಾಜ್ಯ ಫಲಿತಾಂಶ.. ಆತ್ಮಾವಲೋಕನಕ್ಕೆ ಶೀಘ್ರದಲ್ಲೇ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ!


ಅರ್ಜಿಗಳನ್ನು ಧಾರವಾಡ (Dharwad) ಜಿಲ್ಲೆಯ ತೋಟಗಾರಿಕೆ ಉಪ ನಿರ್ದೇಶಕರ ಕಛೇರಿಯಲ್ಲಿ ಸಲ್ಲಿಸಬೇಕು. ಸಾಮಾನ್ಯ ಅಭ್ಯರ್ಥಿಗಳಿಗೆ 30 ರೂ. ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 15 ರೂ. ಅರ್ಜಿ ಶುಲ್ಕವಿದೆ.ಈ ಶುಲ್ಕವನ್ನು ಇಂಡಿಯನ್ ಪೋಸ್ಟಲ್ ಆರ್ಡರ್ ಅಥವಾ ಬ್ಯಾಂಕ್ ಡಿಡಿಯನ್ನು ತೋಟಗಾರಿಕೆ ಉಪ ನಿರ್ದೇಶಕರ ಹೆಸರಿನಲ್ಲಿ ಪಡೆದು ಅರ್ಜಿ ಜೊತೆಗೆ ಲಗತ್ತಿಸಬೇಕು.


ಇದನ್ನೂ ಓದಿ: ಆರೋಗ್ಯ ಇಲಾಖೆಯ ಗುತ್ತಿಗೆ ನೌಕರರ ವೈದ್ಯಕೀಯ ವೆಚ್ಚವನ್ನು ಸರ್ಕಾರ ಭರಿಸಲಿ -ಪ್ರಿಯಾಂಕ್ ಖರ್ಗೆ


ಅರ್ಜಿ ನಮೂನೆಗಳನ್ನು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿಯಲ್ಲಿ ಅಥವಾ ಇಲಾಖಾ ವೆಬ್‍ಸೈಟ್  https://horticulturedir.karnataka.gov.in  ನಲ್ಲಿ ಮಾರ್ಚ್ 15ರಿಂದ ಏಪ್ರಿಲ್ 16 ರವರೆಗೆ ಲಭ್ಯವಿದ್ದು, ಡೌನ್‍ಲೋಡ್ ಮಾಡಿಕೊಳ್ಳಬಹುದು.


ಭರ್ತಿ ಮಾಡಿದ ಅರ್ಜಿಗಳನ್ನು ಏಪ್ರಿಲ್ 16ರ ಸಂಜೆ 5 ಗಂಟೆಯೊಳಗೆ ದಾಖಲಾತಿಗಳೊಂದಿಗೆ ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಇಲಾಖೆ ಕಚೇರಿಯ ದೂರವಾಣಿ ಸಂಖ್ಯೆ: (0836-2957801).ಗೆ ಸಂಪರ್ಕಿಸಬಹುದು ಎಂದು ತೋಟಗಾರಿಕೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ