ಚಾಮರಾಜನಗರ: ನಿರಂತರವಾಗಿ ರಾತ್ರಿ ಸುರಿದ ಮಳೆಗೆ ಮನೆಗೋಡೆ ಕುಸಿದು  (House wall collapsed due to rain) ವೃದ್ಧೆ ಮೃತಪಟ್ಟಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಸಿಂಗಾನಲ್ಲೂರು ಗ್ರಾಮದಲ್ಲಿ ನಡೆದಿದೆ. 


COMMERCIAL BREAK
SCROLL TO CONTINUE READING

ಸಿಂಗಾನಲ್ಲೂರು ಗ್ರಾಮದ ರಂಗಮ್ಮ(85) ಮೃತ ದುರ್ದೈವಿ. ಸೋಮವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ (Rain) ಮನೆಯ ಒಂದು ಪಾರ್ಶ್ವ ಕುಸಿದ ಪರಿಣಾಮ ಮನೆಯಲ್ಲಿದ್ದ ರಂಗಮ್ಮ ಅವಶೇಷಗಳಡಿ ಸಿಲುಕಿ ಮೃತಪಟ್ಟಿದ್ದಾರೆ. 


ಇದನ್ನೂ ಓದಿ- ಅತಿಥಿ ಶಿಕ್ಷಕಿಗೆ ಸಹ ಶಿಕ್ಷಕನಿಂದ ಲೈಂಗಿಕ ಕಿರುಕುಳ: ಮೆಸೇಜ್ ಮಾಡಿ ಮಂಚಕ್ಕೆ ಕರೆದಿದ್ದ ಕಾಮುಕ...


ಇನ್ನು, ಮಾಜಿ ಶಾಸಕ ಆರ್.ನರೇಂದ್ರ ಸ್ಥಳಕ್ಕೆ ಭೇಟಿ ನೀಡಿ, ಕುಟುಂಬಕ್ಕೆ ನೆರವು ಕೊಡಬೇಕೆಂದು ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. 


ಮಕ್ಕಳು ಪಾರು: 
ಸಿಂಗಾನಲ್ಲೂರು ಗ್ರಾಮದ ಮೃತ ರಂಗಮ್ಮ ಹಾಗೂ ಪುತ್ರಿ ಲಕ್ಷ್ಮಮ್ಮ, ಪುತ್ರ ರಂಗಯ್ಯ ಮನೆಯಲ್ಲಿ ಮಲಗಿದ್ದರು. ಸೋಮವಾರ ತಡ ರಾತ್ರಿ ಒಂದು ಗಂಟೆಯ ವೇಳೆ ಬಿದ್ದ ಮಳೆಗೆ ಏಕಾಏಕಿ ಗೋಡೆ ಕುಸಿದ (Wall Collapsed) ಪರಿಣಾಮ ರಂಗಮ್ಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಗೋಡೆ ಬೀಳುವ ಶಬ್ದಕ್ಕೆ ಎಚ್ಚರವಾದ ಮಗ ಮತ್ತು ಮಗಳು ತಪ್ಪಿಸಿಕೊಂಡು ಪ್ರಾಣ ಉಳಿಸಿಕೊಂಡಿದ್ದಾರೆ. 
 
ಇದನ್ನೂ ಓದಿ- 
ನಮ್ಮ ಮೆಟ್ರೋ ಪ್ರಯಾಣಿಕರಿಗೆ ಶಾಕ್: ಇಂದಿನಿಂದ ಮೂರು ದಿನ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ


ಸ್ಥಳಕ್ಕೆ ಕೊಳ್ಳೇಗಾಲ ತಹಸಿಲ್ದಾರ್  ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.