ಹುಬ್ಬಳ್ಳಿ: ಬಹುಮತಕ್ಕೆ ಬೇಕಿದ್ದ ಮ್ಯಾಜಿಕ್ ಸಂಖ್ಯೆಗಿಂತ ಕಡಿಮೆ ಕ್ಷೇತ್ರದಲ್ಲಿ ಇಂಡಿ ಮೈತ್ರಿಕೂಟ ಸ್ಪರ್ಧೆ ಮಾಡಿದ್ದು, ಅಧಿಕಾರಕ್ಕೆ ಬರಲು ಹೇಗೆ ಸಾಧ್ಯ? ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: Bourn Vita : ಆರೋಗ್ಯ ಪಾನೀಯ ಲಿಸ್ಟ್ ನಿಂದ "ಬೋರ್ನ್ ವೀಟಾ" ಔಟ್ : ಕೇಂದ್ರ ಆದೇಶ
ಹುಬ್ಬಳ್ಳಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಶೇ.50ರಷ್ಟು ಕಡಿಮೆ ಕ್ಷೇತ್ರಗಳಿಗೆ ಸ್ಪರ್ಧಿಸಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಹಗಲುಗನಸು ಕಾಣುತ್ತಿದೆ ಎಂದು ಟೀಕಿಸಿದರು.
ಬಹುಮತದ ಸರ್ಕಾರಕ್ಕೆ 272 ಸದಸ್ಯರ ಬಲ ಬೇಕು. ಆದರೆ, ಕಾಂಗ್ರೆಸ್ ನೇತೃತ್ವದ ಇಂಡಿ ಮೈತ್ರಿಕೂಟ ಸ್ಪರ್ಧಿಸಿದ್ದೇ 230 ಕ್ಷೇತ್ರಗಳಲ್ಲಿ. ಇಂಡಿ ಹೊರತಾಗಿ 60-70 ಸ್ಪರ್ಧಿಗಳು ಕಣದಲ್ಲಿದ್ದಾರೆ. ಆದರೂ ಕಾಂಗ್ರೆಸ್ ಅಧಿಕಾರಕ್ಕೆ ಬರುವ ಹಗಲುಗನಸು ಕಾಣುತ್ತಿದೆ ಕಾಂಗ್ರೆಸ್ ಎಂದರು.
ಕಾಂಗ್ರೆಸ್ ನೇತೃತ್ವದ ಇಂಡಿ ಮೈತ್ರಿಕೂಟ 230 ಕ್ಷೇತ್ರಗಳ ಪೈಕಿ ಹೆಚ್ಚು ಅಂದರೆ 100 ಸ್ಥಾನಗಳನ್ನು ಗೆಲ್ಲಬಹುದು ಅಷ್ಟೇ ಎಂದು ಜೋಶಿ ಭವಿಷ್ಯ ನುಡಿದರು.
ಇದನ್ನೂ ಓದಿ: ಬೆಳಗ್ಗೆ ಎದ್ದ ತಕ್ಷಣ ಈ ಎಲೆಯ ರಸ ಕುಡಿಯಿರಿ: ಕೂಡಲೇ ಬ್ಲಡ್ ಶುಗರ್ ಮಟ್ಟ ನಿಯಂತ್ರಣವಾಗುತ್ತೆ! ಮತ್ತೆಂದೂ ಹೆಚ್ಚಾಗಲ್ಲ
ಕಾಂಗ್ರೆಸ್ ಪಕ್ಷ 40 ಕ್ಷೇತ್ರಗಳಲ್ಲಿ ಮತ್ತು ಅದರ ಬೆಂಬಲಿತ ಅಂಗ ಪಕ್ಷಗಳು 60 ಸ್ಥಾನಗಳನ್ನು ಗೆದ್ದುಕೊಳ್ಳಬಹುದು. ಪರಿಸ್ಥಿತಿ ಹೀಗಿರುವಾಗ ಇವರಿಂದ ಸುಭದ್ರ ಸರ್ಕಾರ ರಚನೆ ಹೇಗೆ ಸಾಧ್ಯವಾಗುತ್ತದೆ? ಎಂದು ಸಚಿವ ಜೋಶಿ ಪ್ರಶ್ನಿಸಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.