ಬೆಂಗಳೂರು: ಬಿಜೆಪಿಯ ಎಷ್ಟು ನಾಯಕರು ರಾಮಾಯಣವನ್ನು ಓದಿದ್ದಾರೆ? ರಾಮಾಯಣದ ಅಯೋಧ್ಯ ಕಾಂಡದಲ್ಲಿ ಇದರಲ್ಲಿ ರಾಮ ಹಾಗೂ ಭರತನ ಸಂಭಾಷಣೆಯಲ್ಲಿ ರಾಮ ತಮ್ಮ ತಮ್ಮನಿಗೆ ನನ್ನ ಉಪಸ್ಥಿತಿಯಲ್ಲಿ ಹದಿನಾಲ್ಕು ವರ್ಷ ರಾಜ್ಯವನ್ನು ಆಳ್ವಿಕೆ ಮಾಡು ಎಂದು ಹೇಳುತ್ತಾನೆ. ಆಗ ರಾಜ್ಯ, ರಾಜ್ಯದ ಮಂತ್ರಿಮಂಡಲ, ಬಜೆಟ್, ತೆರಿಗೆ ಹೇಗೆ ಹಾಕಬೇಕು, ವೇತನ, ಬೇಹುಗಾರಿಕೆ ಸೇರಿದಂತೆ ಎಲ್ಲಾ ವಿಚಾರವನ್ನು ತ್ರೇತಾಯುಗದಲ್ಲಿ ಪ್ರಸ್ತಾಪಿಸಲಾಗಿದೆ. ಮೋದಿಯವರೇ ಈ ವಿಚಾರವನ್ನು ನೀವು ಯಾವತ್ತಾದರೂ ವಿಮರ್ಶೆ ಮಾಡಿದ್ದೀರಾ? ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಅವರು ಬಿಜೆಪಿ ನಾಯಕರನ್ನು ಪ್ರಶ್ನಿಸಿದ್ದಾರೆ.


COMMERCIAL BREAK
SCROLL TO CONTINUE READING

ನಮ್ಮ ರಾಜ್ಯದ ಮುಖ್ಯಮಂತ್ರಿಗಳು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಬಗ್ಗೆ ಸಾಕಷ್ಟು ಮಾತನಾಡುತ್ತಿದ್ದಾರೆ. ಮೊನ್ನೆ ಮೋದಿ ಅವರು ಮಾಡಿದ ಭಾಷಣದಲ್ಲಿ ಪ್ರಪಂಚಕ್ಕೆ ರಾಮಾಯಣವನ್ನು ಪರಿಚಯಿಸಿದ ಮಹರ್ಷಿ ವಾಲ್ಮೀಕಿ ಅವರ ಹೆಸರನ್ನು ಪ್ರಸ್ತಾಪಿಸಲಿಲ್ಲ. ಭಾಗದಲ್ಲಿ ಹಾಗೂ ರಾಜ್ಯದಲ್ಲಿ ವಾಲ್ಮೀಕಿ ಸಮಾಜವು ಪರಿಶಿಷ್ಟ ಪಂಗಡಕ್ಕೆ ಸೇರಿದ್ದು, ಇವರ ಬಗ್ಗೆ ಬಿಜೆಪಿ ಯಾಕೆ ಮಾತನಾಡುತ್ತಿಲ್ಲ. 


ಇದನ್ನೂ ಓದಿ : PM Kisan ಯೋಜನೆಯಲ್ಲಿ ಪತಿ-ಪತ್ನಿ ಇಬ್ಬರಿಗೂ ಸಿಗುತ್ತಾ 6,000 ರೂ.! ನಿಯಮ ಏನು ಹೇಳುತ್ತೆ?


ಅಯೋಧ್ಯೆಯಲ್ಲಿ ಮಹರ್ಷಿ ವಾಲ್ಮೀಕಿ ಅವರ ಸ್ಮಾರಕ ನಿರ್ಮಾಣ ಮಾಡುತ್ತಿಲ್ಲ ಏಕೆ? ಸತ್ಯಮೇವ ಜಯತೆ ಹಾಗೂ ರಾಮನ ಆದರ್ಶಗಳೇ ನನ್ನ ಆದರ್ಶ ಎಂದು ಮೋದಿ ಅವರು ಹೇಳಿದ್ದಾರೆ. ಆದರೆ ಶ್ರೀರಾಮ, ರಾವಣನ ವಿರುದ್ಧ ಯುದ್ಧ ಮಾಡಿದ್ದು ತನ್ನ ಹೆಂಡತಿಯ ರಕ್ಷಣೆಗಾಗಿ. ಆದರೆ ಮೋದಿಯವರು ತಮ್ಮ ಪತ್ನಿಯನ್ನು ವಿವಾಹವಾಗುವ ಸಂದರ್ಭದಲ್ಲಿ ಕಷ್ಟ ಹಾಗೂ ಸುಖದಲ್ಲಿ ನಾನು ನಿಮ್ಮ ಜೊತೆ ಇರುತ್ತೇನೆ ಎಂದು ವಾಗ್ದಾನ ಮಾಡಿದ್ದರು. ಆದರೆ ನಂತರ ತಮ್ಮ ಪತ್ನಿಯನ್ನು ದೂರ ಮಾಡಿದ್ದು ಯಾಕೆ ಇದು ರಾಮನ ಆದರ್ಶವೇ?  ಎಂದು ಅವರು ಪ್ರಶ್ನಿಸಿದರು. ಶ್ರೀ ರಾಮನ ಆದರ್ಶವನ್ನು ಪಾಲಿಸುವುದಾದರೆ 2014ರಲ್ಲಿ ನೀವು ವರ್ಷಕ್ಕೆ ಎರಡು ಕೋಟಿ ಉದ್ಯೋಗ ನೀಡುವುದಾಗಿ ಹೇಳಿದ್ದೀರಿ. ಈಗ ಎಂಟು ವರ್ಷಗಳ ನಂತರ 70,000 ಉದ್ಯೋಗ ಸೃಷ್ಟಿಗೆ ಪ್ರಯತ್ನಿಸುತ್ತಿದ್ದೀರಿ. ಬೆಲೆ ಏರಿಕೆ ಕಡಿಮೆ ಮಾಡುವುದಾಗಿ ಹೇಳಿದ್ದೀರಿ, ಆದರೆ ಇಂದು ಪೆಟ್ರೋಲ್ ಡೀಸೆಲ್ ಅಡುಗೆ ಅನಿಲ ಹಾಗೂ ದಿನನಿತ್ಯದ ವಸ್ತುಗಳ ಬೆಲೆ ಗಗನಕ್ಕೆ ಏರಿದೆ. ಒಂದು ಕಡೆ ನಿರುದ್ಯೋಗ ಮತ್ತೊಂದು ಕಡೆ ಬಡತನ ಹಾಗೂ ದೇಶದಲ್ಲಿ ಸಾಮಾಜಿಕ ಸಾಮರಸ್ಯ ನಾಶವಾಗುತ್ತಿದೆ. ಮೋದಿಯವರೇ ಇದೇನಾ ನೀವು ಪಾಲಿಸುತ್ತಿರುವ ಶ್ರೀರಾಮಚಂದ್ರನ ಆದರ್ಶ? ಎಂದು ವ್ಯಂಗವಾಡಿದರು.


ಇದನ್ನೂ ಓದಿ : UK Prime Minister: ಇಂಗ್ಲೆಂಡ್‌ನ ನೂತನ ಪ್ರಧಾನಿಯಾಗಿ ರಿಷಿ ಸುನಕ್‌ ಆಯ್ಕೆ


ಕೇವಲ ಮತದಾನಕ್ಕಾಗಿ ರಾಮನ ಜಪ ಮಾಡುವುದನ್ನು ಬಿಟ್ಟು, ರಾಮನ ಆದರ್ಶವನ್ನು ಯಥಾವತ್ತಾಗಿ ಜೀವನದಲ್ಲಿ ಅಳವಡಿಸಿಕೊಂಡರೆ, ಮಹಾತ್ಮ ಗಾಂಧಿ ಹಾಗೂ ನಮ್ಮ ಸಂವಿಧಾನ ಬಯಸಿದಂತಹ ಜಾತಿ ರಹಿತ ವರ್ಗ ರಹಿತ ಹಾಗೂ ಶೋಷಣೆ ರಹಿತ ಸಮಾಜ ಕಟ್ಟಲು ಸಾಧ್ಯ. ಆದರೆ ಬಿಜೆಪಿಯವರು ಈ ನಿಟ್ಟಿನಲ್ಲಿ ಆಡಳಿತ ನಡೆಸುತ್ತಿಲ್ಲ. ಈ ಬಗ್ಗೆ ದೇಶದ ಜನ ಅರ್ಥ ಮಾಡಿಕೊಳ್ಳುತ್ತಾರೆ ಎಂದು ನಾನು ಭಾವಿಸಿದ್ದೇನೆ"  ಎಂದು ಹೇಳಿದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.