1942 ರ ಆಗಸ್ಟ್ 8 ರಂದು ಮಹಾತ್ಮ ಗಾಂಧೀಜಿ ಅವರು ಬ್ರಿಟಿಷರೇ "ಭಾರತ ಬಿಟ್ಟು ತೊಲಗಿ", "ಮಾಡು ಇಲ್ಲವೇ ಮಡಿ" ಎಂಬ ಘೋಷಣೆಯೊಂದಿಗೆ ಕ್ವಿಟ್ ಇಂಡಿಯಾ ಚಳವಳಿ ಆರಂಭಿಸಿದರು. ಈ ಚಳವಳಿಯಲ್ಲಿ ಈಸೂರು ಗ್ರಾಮ ಮೇಲುಗೈ ಸಾಧಿಸಿದೆ ಎಂದರೆ ತಪ್ಪಾಗಲಾರದು. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಈಸೂರು ಗ್ರಾಮದ ಜನರು ಬ್ರಿಟಿಷರಿಗೆ ಸೆಡ್ಡು ಹೊಡೆದು, ಅವರೊಂದಿಗೆ ಕಾದಾಡಿ ವೀರ ಮರಣ ಹೊಂದಿದರು.


COMMERCIAL BREAK
SCROLL TO CONTINUE READING

ಈಸೂರಿನಲ್ಲಿ 1942 ರಲ್ಲಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿಸಲಾಯಿತು. ಪ್ರತಿ ದಿನ ಗ್ರಾಮದ ದೇವರು ವೀರಭದ್ರೇಶ್ವರ ದೇವಸ್ಥಾನದಲ್ಲಿ ಸಭೆ ಸೇರಿ ಊರ ಬೀದಿಗಳಲ್ಲಿ ವಂದೇ ಮಾತರಂ, ಭಾರತ ಮಾತಕೀ ಜೈ ಘೋಷಣೆಯೊಂದಿಗೆ ಮೆರವಣಿಗೆ ನಡೆಸುತ್ತಿದ್ದರು. ಬ್ರಿಟಿಷ್ ಕಂದಾಯ ಅಧಿಕಾರಿಗಳು ಕಂದಾಯ ಕಟ್ಟುವಂತೆ ಬಂದು ಊರಿನ ಗ್ರಾಮಸ್ಥರಿಗೆ ಕೇಳಿದಾಗ ಅವರ ಲೆಕ್ಕ ಪುಸ್ತಕವನ್ನು ಕಸಿದುಕೊಂಡು, ಗಾಂಧಿ ಟೋಪಿ ಧರಿಸುವಂತೆ ಹೇಳಿದರು. ಅವರು ಧರಿಸದೇ ವಾಪಸ್ಸು ಹೋಗಿ ಶಿಕಾರಿಪುರದ ಅಮಲ್ದಾರ್ ಗೆ ದೂರು ನೀಡಿದರು. ಇದರಿಂದ ಈಸೂರಿನ ಜನತೆ ಊರ ದ್ವಾರ ಬಾಗಿಲಿಗೆ "ಬೇಜವಾಬ್ದಾರಿ ಸರ್ಕಾರಿ ಅಧಿಕಾರಿಗಳಿಗೆ ಈಸೂರಿನಲ್ಲಿ ಪ್ರವೇಶವಿಲ್ಲ" ಎಂದು ನಾಮ ಫಲಕವನ್ನು ಹಾಕಿದರು. ಗ್ರಾಮದ ಮಕ್ಕಳಾದ ಸಾಹುಕಾರ್ ಜಯಣ್ಣರನ್ನು ಅಮಲ್ದಾರ್ ಆಗಿ, ಕೆ.ಜಿ ಮಲ್ಲಯ್ಯ ಅವರನ್ನು ಪೋಲಿಸ್ ಸಬ್ ಇನ್ಸ್ಪೆಕ್ಟರ್ ಆಗಿ ನೇಮಕ ಮಾಡಿಕೊಂಡು ಜವಾಬ್ದಾರಿ ಸರ್ಕಾರವನ್ನು ರಚಿಸಿಕೊಂಡರು.


ಇದನ್ನೂ ಓದಿ: ಸರ್ಕಾರಿ ನೌಕರರಿಗೆ ಬಂಪರ್ !ವೇತನದಲ್ಲಿ ಆಗುವುದು ಒಂದು ಲಕ್ಷಕ್ಕಿಂತ ಅಧಿಕ ಹೆಚ್ಚಳ ! ಯಾವ ಲೆಕ್ಕಾಚಾರದಲ್ಲಿ ಎನ್ನುವ ವಿವರ ಇಲ್ಲಿದೆ


ಹಳ್ಳ ಹಿಡಿದ ಸಿಎಂ ಸಿದ್ದರಾಮಯ್ಯರ ಕನಸಿನ ಇಂದಿರಾ ಕ್ಯಾಂಟೀನ್‌ ಯೋಜನೆ!


ಈಸೂರು ಸ್ವಾತಂತ್ರ ಹೋರಾಟಗಾರರ ಸ್ಮಾರಕ ಅಭಿವೃದ್ಧಿ:


ಈಸೂರು ಹೋರಾಟದ ಇತಿಹಾಸವನ್ನು ಸಾರುವ ದೃಷ್ಟಿಯಿಂದ ಹುತಾತ್ಮರ ಸ್ಮಾರಕಕ್ಕೆ ರೂ.5 ಕೋಟಿ ಹಣ ಬಿಡುಗಡೆ ಮಾಡಲಾಗಿದ್ದು ಈಸೂರನ್ನು ಐತಿಹಾಸಿಕ ಸ್ಥಳವನ್ನಾಗಿ ಮಾಡಲಾಗುತ್ತಿದೆ. ಸ್ಮಾರಕ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿಯಲ್ಲಿದೆ.


ಭಾರತದಲ್ಲಿ ಎಲ್ಲಿಯೂ ನೋಡ ಸಿಗದ ವಿಶೇಷವಾದ ಆಲಂಕರಿಕ ಶೈಲಿಯಲ್ಲಿ ಸ್ಮಾರಕ ಭವನವನ್ನು ವಿನ್ಯಾಸ ಮಾಡಲಾಗುತ್ತಿದ್ದು ಸುತ್ತಲು ಕಲ್ಲಿನಿಂದ ಆಕರ್ಷಕ ತಡೆಗೊಡೆ ರೀತಿ ವಿನ್ಯಾಸಗೊಳಿಸಿ ಸ್ಮಾರಕದ ಒಳಗೆ ಗಲ್ಲಿಗೇರಿದ ಹೋರಾಟಗಾರರ ಹೆಸರುರ್ಳಳ ಕಲ್ಲುಗಳನ್ನು ನಿರ್ಮಿಲಾಗುತ್ತಿದೆ ಜೊತೆಗೆ ಗ್ರಂಥಾಲಯ, ಅತಿಥಿ ಗೃಹ, ಶೌಚಾಲಯ, ಗಾರ್ಡನ್ ನಿರ್ಮಿಸಲಾಗುತ್ತಿದೆ.


ಕ್ವಿಟ್ ಇಂಡಿಯಾ ದಿನಾಚರಣೆ:


ಶಿಕಾರಿಪುರ ಪಟ್ಟಣದ ತಾಲೂಕು ಕಚೇರಿಯ ಮುಂಭಾಗದಲ್ಲಿ ಇರುವ ಸ್ವಾತಂತ್ರ ಹೋರಾಟಗಾರರ ಸ್ಮಾರಕ ಸ್ತಂಭದ ಬಳಿ ಪ್ರತಿ ವರ್ಷ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಆಗಸ್ಟ್ 9 ರಂದು ಶಾಲಾ ಕಾಲೇಜು ವಿದ್ಯಾರ್ಥಿಗಳು, ಹಿರಿಯ ಸ್ವಾತಂತ್ರö್ಯ ಹೋರಾಟಗಾರರನ್ನು ಕರೆಸಿ ತಹಶೀಲ್ದಾರ್ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳನ್ನು ಆಹ್ವಾನಿಸಿ ಈಸೂರು ಸ್ವಾತಂತ್ರö್ಯ ಹೋರಾಟದ ನೆನಪಿಗಾಗಿ ಕ್ವಿಟ್ ಇಂಡಿಯಾ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ