ಕೇಂದ್ರ ಸರ್ಕಾರದ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದಿಂದ ಮೋಟಾರು ವಾಹನಗಳ ಕಾಯಿದೆಯಡಿ ಅಪರಿಚಿತ ವಾಹನ ಡಿಕ್ಕಿಯಾಗಿ ಅಪಘಾತ ಸಂಭವಿಸಿ ಮರಣ ಹೊಂದುವ ಸಂಸ್ರಸ್ಥರಿಗೆ ಹಾಗೂ ಗಾಯಾಳುಗಳಿಗೆ ಕಾಲಮಿತಿಯಲ್ಲಿ ಪರಿಹಾರ ಪಡೆಯಲು ಅವಕಾಶ ಇದ್ದು ಅರ್ಹರು ಈ ಯೋಜನೆಯಿಂದ ವಂಚಿತರಾಗಬಾರದು.


COMMERCIAL BREAK
SCROLL TO CONTINUE READING

ಇದನ್ನೂ ಓದಿ- ಕಲಾವಿದರ ಮಾಸಾಶನ 3000 ರೂ.ಗೆ ಏರಿಕೆ : ಸಿಎಂ ಸಿದ್ದರಾಮಯ್ಯ ಘೋಷಣೆ 


ಹಿಟ್ ಅಂಡ್ ರನ್ ಪ್ರಕರಣದಲ್ಲಿ ಅಪರಿಚಿತ ವಾಹನದಿಂದ ಅಪಘಾತವಾಗಿ ಮರಣ ಹೊಂದಿದಲ್ಲಿ ರೂ. 2 ಲಕ್ಷ ಮತ್ತು ತೀವ್ರ ಸ್ವರೂಪದ ಗಾಯಾಳುಗಳಾದಲ್ಲಿ ಯಾವುದೇ ಮಧ್ಯಸ್ಥರಿಲ್ಲದೇ ರೂ.50 ಸಾವಿರ ಪರಿಹಾರ ಪಡೆಯುವ ಯೋಜನೆ ಇದಾಗಿದೆ. ಪರಿಹಾರವನ್ನು ನೇರವಾಗಿ ಅವರ ಖಾತೆಗೆ ಯುನೈಟೆಡ್ ಇನ್ಸೂರೆನ್ಸ್ ಕಂಪನಿ ಮೂಲಕ ಪಾವತಿಸಲಾಗುತ್ತದೆ.


ಅರ್ಜಿ ಸಲ್ಲಿಸುವ ಪ್ರಕ್ರಿಯೆ


ಅಪಘಾತವಾಗುವ ವ್ಯಾಪ್ತಿಯ ಠಾಣೆಗಳಲ್ಲಿ ಠಾಣಾಧಿಕಾರಿಗಳು ಎಫ್‍ಐಆರ್ ದಾಖಲಿಸಿ ಹಿಟ್ ಅಂಡ್ ರನ್ ಪ್ರರಕರಣವಾಗಿದ್ದಲ್ಲಿ ಅರ್ಜಿ ನಮೂನೆ ನೀಡಿ ಮೃತರ ವಾರಸುದಾರರು ಹಾಗೂ ಗಾಯಾಳುಗಳ ಕುಟುಂಬದವರಿಗೆ ಮಾಹಿತಿ ನೀಡಬೇಕು. ತಹಶೀಲ್ದಾರ್ ಅಥವಾ ಉಪವಿಭಾಗಾಧಿಕಾರಿಗಳು ಕ್ಲೇಮ್ ತನಿಖಾಧಿಕಾರಿಗಳಾದ ಇವರಿಗೆ ಅರ್ಜಿ ಸಲ್ಲಿಸಲು ತಿಳಿಸಬೇಕು.


ಇದನ್ನೂ ಓದಿ- ಮೋದಿ ತಾಯಿಯವರ ಅವಹೇಳನ ಬಿಜೆಪಿಯವರು ಸಹಿಸಬಹುದು, ನಾವು ಸಹಿಸುವುದಿಲ್ಲ : ಡಿಕೆ ಸುರೇಶ್


ಯಾವ್ಯಾವ ದಾಖಲೆಗಳನ್ನು ಸಲ್ಲಿಸಬೇಕು?


ಸಂತ್ರಸ್ಥರ ವಾರಸುದಾರರು, ಕುಟುಂಬದವರು ನಮೂನೆ-1 ರಲ್ಲಿ ವಿವರ ದಾಖಲಿಸಿ ಎಫ್‍ಐಆರ್ ಸಿ.ರಿಪೋರ್ಟ್, ಬ್ಯಾಂಕ್ ಪಾಸ್ ಬುಕ್, ನಮೂನೆ-4 ರಲ್ಲಿ ವಾರಸತ್ವ, ಮರಣೋತ್ತರ ವರದಿ, ಮರಣ ಪ್ರಮಾಣ ಪತ್ರ, ತೀವ್ರ ಗಾಯಗೊಂಡಿದ್ದಲ್ಲಿ ಆಸ್ಪತ್ರೆಯಲ್ಲಿ ಪಡೆದ ಚಿಕಿತ್ಸೆ ದಾಖಲೆ, ಆಧಾರ್ ಪ್ರತಿಯೊಂದಿಗೆ ಅಪಘಾತ ಸಂಭವಿಸಿದ ವ್ಯಾಪ್ತಿಯ ತಹಶೀಲ್ದಾರ್ ಅಥವಾ ಉಪವಿಭಾಗಾಧಿಕಾರಿಗಳ ಕಚೇರಿಗೆ ಸಂತ್ರಸ್ಥರು ಅರ್ಜಿ ಸಲ್ಲಿಸಬೇಕು.


ತಹಶೀಲ್ದಾರರು ಅಥವಾ ಉಪವಿಭಾಗಾಧಿಕಾರಿಗಳು ಪರಿಹಾರದ ಅರ್ಜಿ ಹಾಗೂ ದಾಖಲೆಗಳನ್ನು ಪರಿಶೀಲಿಸಿ ನಮೂನೆ-2 ರಲ್ಲಿ ಶಿಫಾರಸಿನೊಂದಿಗೆ ಅರ್ಜಿ ಸ್ವೀಕೃತವಾದ 30 ದಿನಗಳೊಳಗಾಗಿ ಕ್ಲೈಮ್ ಸೆಟಲ್‍ಮೆಂಟ್ ಅಧಿಕಾರಿ ಜಿಲ್ಲಾಧಿಕಾರಿಯವರಿಗೆ ಸಲ್ಲಿಸಬೇಕು. 15 ದಿನಗಳೊಳಗಾಗಿ ಜಿಲ್ಲಾಧಿಕಾರಿಯವರು ಅರ್ಜಿ ಪರಿಶೀಲಿಸಿ ನಮೂನೆ-3 ರಲ್ಲಿ ಪರಿಹಾರದ ಆದೇಶ ಮಂಜೂರು ಮಾಡಿ ಜನರಲ್ ಇನ್ಸೂರೆನ್ಸ್ ಕೌನ್ಸಿಲ್‍ಗೆ ಪರಿಹಾರ ಪಾವತಿಗೆ ರವಾನಿಸುವರು. ಅಲ್ಲಿಂದ 15 ದಿನಗಳೊಳಗಾಗಿ ಸಂತ್ರಸ್ಥರ ಖಾತೆಗೆ ಹಣ ಜಮಾ ಮಾಡಲಾಗುತ್ತದೆ. ಇದು ಯೋಜನೆ ಕ್ಲೈಮ್ ಪಡೆಯುವ ಪ್ರಕ್ರಿಯೆಯಾಗಿದೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.