Hubballi-Dharwad News: ಅವಳಿ ನಗರದಲ್ಲಿ ಅನಧಿಕೃತ ಲೇಔಟ್ ಹೆಚ್ಚಳ ; " ಖರೀದಿದಾರರೇ ಮೋಸ ಹೋಗಬೇಡಿ; ಎಫ್‍ಐಆರ್ ದಾಖಲಿಸಿ"

ಹುಬ್ಬಳ್ಳಿ-ಧಾರವಾಡ ಮಹಾನಗರ ಸೇರಿದಂತೆ ಜಿಲ್ಲೆಯ ವಿವಿಧ ಪಟ್ಟಣಗಳಲ್ಲಿ ನಿಯಮಾನುಸಾರ ಅನುಮತಿ ಪಡೆಯದೇ ಬಿಲ್ಡರ್‍ಗಳು ಅನಧಿಕೃತವಾಗಿ ಲೇಔಟ್ ನಿರ್ಮಿಸಿ, ಗ್ರಾಹಕರಿಗೆ ಅಕ್ರಮವಾಗಿ ಮಾರಾಟ ಮಾಡುತ್ತಿದ್ದಾರೆ. ಗ್ರಾಹಕರು ಕಂತು, ರಿಯಾಯಿತಿಗಳಿಗೆ ಮರುಳಾಗಿ ಮೋಸ ಹೋಗಬಾರದು ಎಂದು ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಎಚ್ಚರಿಕೆ ನೀಡಿದ್ದಾರೆ.

Written by - Manjunath N | Last Updated : Jul 6, 2023, 05:49 PM IST
  • ಈಗಾಗಲೇ ಹುಬ್ಬಳ್ಳಿ ಧಾರವಾಡ ಮಹಾನಗರ ವ್ಯಾಪ್ತಿಯಲ್ಲಿ ಸುಮಾರು 200 ಎಕರೆ ಪ್ರದೇಶದಲ್ಲಿ ಅನಧಿಕೃತ ಬಡಾವಣೆ ನಿರ್ಮಿಸಿದ್ದನ್ನು ಸಮೀಕ್ಷೆ ಮೂಲಕ ಗುರುತಿಸಲಾಗಿದೆ.
  • ಅವುಗಳನ್ನು ತೆರವುಗೊಳಿಸಲು ಕ್ರಮ ವಹಿಸಲಾಗುವುದು ಮತ್ತು ಅನಧಿಕೃತ ಬಡಾವಣೆ ನಿರ್ಮಿಸಿದವರ ವಿರುದ್ಧ ಎಫ್‍ಐಆರ್ ದೊಂದಿಗೆ ಕ್ರಿಮಿನಲ್ ಪ್ರಕರಣ ದಾಖಲಿಸುವುದಾಗಿ ಅವರು ಹೇಳಿದರು.
  • ಅನಧಿಕೃತ ಬಡಾವಣೆಗಳನ್ನು ಗುರುತಿಸಲು ಮತ್ತು ಅವುಗಳನ್ನು ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲು ಕ್ರಮವಹಿಸಲಾಗುತ್ತದೆ.
Hubballi-Dharwad News: ಅವಳಿ ನಗರದಲ್ಲಿ ಅನಧಿಕೃತ ಲೇಔಟ್ ಹೆಚ್ಚಳ ; " ಖರೀದಿದಾರರೇ ಮೋಸ ಹೋಗಬೇಡಿ; ಎಫ್‍ಐಆರ್ ದಾಖಲಿಸಿ" title=

ಧಾರವಾಡ : ಹುಬ್ಬಳ್ಳಿ-ಧಾರವಾಡ ಮಹಾನಗರ ಸೇರಿದಂತೆ ಜಿಲ್ಲೆಯ ವಿವಿಧ ಪಟ್ಟಣಗಳಲ್ಲಿ ನಿಯಮಾನುಸಾರ ಅನುಮತಿ ಪಡೆಯದೇ ಬಿಲ್ಡರ್‍ಗಳು ಅನಧಿಕೃತವಾಗಿ ಲೇಔಟ್ ನಿರ್ಮಿಸಿ, ಗ್ರಾಹಕರಿಗೆ ಅಕ್ರಮವಾಗಿ ಮಾರಾಟ ಮಾಡುತ್ತಿದ್ದಾರೆ. ಗ್ರಾಹಕರು ಕಂತು, ರಿಯಾಯಿತಿಗಳಿಗೆ ಮರುಳಾಗಿ ಮೋಸ ಹೋಗಬಾರದು ಎಂದು ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಎಚ್ಚರಿಕೆ ನೀಡಿದ್ದಾರೆ.

ಅವರು ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದಿಂದ ಮಹಾನಗರ ವ್ಯಾಪ್ತಿಯಲ್ಲಿ ನಿರ್ಮಾಣವಾಗಿರುವ ಅನಧಿಕೃತ ಬಡಾವಣೆಗಳ ತೆರವುಗೊಳಿಸಲು ವಿವಿಧ ಇಲಾಖಾ ಅಧಿಕಾರಿಗಳ ಟಾಸ್ಕ್ ಪೆÇೀರ್ಸ್ ಸಮಿತಿ ರಚನೆಗೆ ಸಭೆ ಜರುಗಿಸಿ, ಮಾತನಾಡಿದರು.

ಧಾರವಾಡ ನಗರದ ಗುಲಗಂಜಿಕೊಪ್ಪ ಅಮ್ಮಿನಭಾವಿ ರಸ್ತೆ, ಹೆಬ್ಬಳ್ಳಿ ರಸ್ತೆ, ನಿಗದಿ ರಸ್ತೆ ಸೇರಿದಂತೆ ಧಾರವಾಡ ನಗರ ಸುತ್ತ ಮುತ್ತ ಹಾಗೂ ಹುಬ್ಬಳ್ಳಿನಗರ ಸುತ್ತಲಿನ ಪ್ರದೇಶಗಳಲ್ಲಿ ಕೆಲವು ಮಾಲೀಕರು, ಬಿಲ್ಡರ್‍ಗಳು ಅನುಮತಿ ಪಡೆಯದೇ ಅನಧೀಕೃತವಾಗಿ ಬಡಾವಣೆಗಳನ್ನು ನಿರ್ಮಿಸುತ್ತಿದ್ದಾರೆ. ಇಂತಹ ಅಕ್ರಮ ಬಡಾವಣೆಗಳನ್ನು ತೆರವುಗೊಳಿಸಲು ಕಠಿಣ ಕ್ರಮ ಕೈಗೊಳ್ಳಬೇಕೆಂದು ಅವರು ನಿರ್ದೇಶಿಸಿದರು.ನೋಂದಣಿ ಆಗದ ಸೈಟ್‍ಗಳನ್ನು ಯಾರು ಖರೀದಿಸಬಾರದು.ಬಾಂಡ್ ಮೇಲೆ ಖರೀದಿಸಿದರೆ ನಿಮ್ಮ ಹಣಕ್ಕೆ ಅಥವಾ ಸೈಟ್‍ಗೆ ಸುರಕ್ಷತೆ ಇರುವುದಿಲ್ಲ. ಲೇಔಟ್ ಮಾಲೀಕರು ನೀಡುವ ರಿಯಾಯಿತಿ ಅಥವಾ ಕಂತಿನ ಆಫರ್‍ಗಳಿಗೆ ಮರುಳಾಗಿ ಸೈಟ್ ಖರೀದಿಸಿ ಮೋಸ ಹೋಗಬಾರದು ಎಂದು ಎಚ್ಚರಿಸಿದರು.

ಇದನ್ನೂ ಓದಿ- ಫ್ರೀ ರೇಶನ್ ಜೊತೆಗೆ ಈ ಸೌಲಭ್ಯ ಕೂಡಾ ಇನ್ನು ಸಂಪೂರ್ಣ ಉಚಿತ ! ಪಡಿತರ ಚೀಟಿದಾರರಿಗೆ ಜಾಕ್ ಪಾಟ್

ಈಗಾಗಲೇ ಹುಬ್ಬಳ್ಳಿ ಧಾರವಾಡ ಮಹಾನಗರ ವ್ಯಾಪ್ತಿಯಲ್ಲಿ ಸುಮಾರು 200 ಎಕರೆ ಪ್ರದೇಶದಲ್ಲಿ ಅನಧಿಕೃತ ಬಡಾವಣೆ ನಿರ್ಮಿಸಿದ್ದನ್ನು ಸಮೀಕ್ಷೆ ಮೂಲಕ ಗುರುತಿಸಲಾಗಿದೆ. ಅವುಗಳನ್ನು ತೆರವುಗೊಳಿಸಲು ಕ್ರಮ ವಹಿಸಲಾಗುವುದು ಮತ್ತು ಅನಧಿಕೃತ ಬಡಾವಣೆ ನಿರ್ಮಿಸಿದವರ ವಿರುದ್ಧ ಎಫ್‍ಐಆರ್ ದೊಂದಿಗೆ ಕ್ರಿಮಿನಲ್ ಪ್ರಕರಣ ದಾಖಲಿಸುವುದಾಗಿ ಅವರು ಹೇಳಿದರು.ಅನಧಿಕೃತ ಬಡಾವಣೆಗಳನ್ನು ಗುರುತಿಸಲು ಮತ್ತು ಅವುಗಳನ್ನು ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲು ಕ್ರಮವಹಿಸಲಾಗುತ್ತದೆ. ಇದಕ್ಕಾಗಿ ವಿವಿಧ ಇಲಾಖೆ ಅಧಿಕಾರಿಗಳ ತಂಡಗಳನ್ನು ರಚಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಅನಧಿಕೃತ ಬಡಾವಣೆ ನಿರ್ಮಿಸಲು ಸಹಕಾರ ನೀಡುವ ಮತ್ತು ಕಾನೂನು ಬಾಹಿರವಾಗಿ 11ಎ ಸ್ಕೇಚ್, ಖಾತಾ ಉತಾರ ನೀಡುವ, ಇಲಾಖಾ ನೋಂದಣಿ ಮಾಡಿಕೊಳ್ಳುವ ಸಿಬ್ಬಂದಿಗಳ ವಿರುದ್ಧ ತನಿಖೆ ಮಾಡಿ, ಅಧಿಕಾರಿ ಮತ್ತು ಸಿಬ್ಬಂದಿಗಳ ಮೇಲೆ ಶಿಸ್ತು ಕ್ರಮ ಜರುಗಿಸಿ, ಸರ್ಕಾರಿ ಕೆಲಸದಿಂದ ಬಿಡುಗಡೆಗೊಳಿಸಲು ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದರು.

ಪ್ಲಾಟ್ ಅಥವಾ ನಿರ್ಮಿತ ಮನೆ, ಫಾರ್ಮ್‍ಹೌಸ್ ಖರೀದಿಸುವ ಗ್ರಾಹಕರು ನಗರಾಭಿವೃದ್ಧಿ ಪ್ರಾಧಿಕಾರ ಅಥವಾ ಸೂಕ್ತ ಪ್ರಾಧಿಕಾರದಿಂದ ಬಡಾವಣೆ ನಿರ್ಮಾಣಕ್ಕೆ ಅಗತ್ಯ ಅನುಮತಿ ಪಡೆದಿರುವುದನ್ನು ಖಾತರಿ ಮಾಡಿಕೊಳ್ಳಬೇಕು. ಖರೀದಿಸುವ ಮೊದಲು ಪ್ರಾಧಿಕಾರದಲ್ಲಿ ಈ ಕುರಿತು ವಿಚಾರಿಸಿ, ದಾಖಲೆಗಳನ್ನು ಉಚಿತವಾಗಿ ಪರಿಶೀಲಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು. ಎನ್‍ಎ ಆಗಿದೆ ಅಂದ್ರೆ ಲೇಔಟ್ ಅಲ್ಲ: ಜಮೀನ ಮಾಲೀಕರು ಅಥವಾ ಬಿಲ್ಡರ್‍ಗಳು ಎನ್‍ಎ ಆಗಿದೆ ಎಂದು ಹೇಳಿ, ಪ್ಲಾಟ್ ಮಾಡಿ ಜನರಿಗೆ ಮಾರಾಟ ಮಾಡುತ್ತಾರೆ. ಎನ್‍ಎ ಪ್ಲಾಟ್ ಮಾರಾಟಕ್ಕಿದೆ ಎಂಬ ಬೋರ್ಡ್ ನೋಡಿ, ಸೈಟ್ ಖರೀದಿಸಬಾರದು. ಎನ್‍ಎ ಅಂದ್ರೆ ಸದರಿ ಭೂಮಿ ಕೃಷಿಯೇತರ ಬಳಕೆಗೆ ಅನುಮತಿಸಲು ಜಿಲ್ಲಾಧಿಕಾರಿಗಳು ನಿಯಮಾನುಸಾರ ನೀಡಿರುವ ಬಿನ್ ಶೇತ್ಕಿ ಬಳಕೆ ಪತ್ರ. ಈ ಪತ್ರದೊಂದಿಗೆ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿ, ಪ್ರಾಧಿಕಾರ ಅನುಮಿಸುವ ಲೇಔಟ್ ನಕ್ಷೆ ಅನುಸಾರ ಬಡಾವಣೆ ನಿರ್ಮಿಸಿ, ರಸ್ತೆ, ಪಾರ್ಕ್, ಸಿಎ ಸೈಟ್‍ಗಳನ್ನು ಸಂಬಂಧಿಸಿದ ಇಲಾಖೆಗಳಿಗೆ ಹಸ್ತಾಂತರಿಸಿದಾಗ ಬಿಲ್ಡರ್‍ಗೆ ಸಿ.ಸಿ.ಸರ್ಟಿಫಿಕೆಟ್ ಸೀಗುತ್ತದೆ. ಅಂದಾಜು ಒಂದು ಎಕರೆ ಎನ್‍ಎ ಭೂಮಿಯಲ್ಲಿ ಬಡಾವಣೆ ನಿರ್ಮಿಸಿದರೆ ಅದರಲ್ಲಿನ ರಸ್ತೆ, ಪಾರ್ಕ್, ಸಿಎ ಸೈಟ್ ಸೇರಿ ಸುಮಾರು ಶೇ.45 ರಷ್ಟು ಭೂಮಿ ಸಾರ್ವಜನಿಕ ಬಳಕೆಗೆ ಮೀಸಲಿರುತ್ತದೆ. ಉಳಿದದ್ದನ್ನು ಗ್ರಾಹಕರಿಗೆ ಮಾರಬಹುದು. ಯಾವೆಲ್ಲಾ ಸೈಟ್‍ಗಳನ್ನು ಖರೀದಿಸಬಹುದು ಎಂಬುದನ್ನು ಪ್ರಾಧಿಕಾರ ಅನುಮತಿಸಿರುವ ಸೈಟ್ ನಕ್ಷೆಯಲ್ಲಿ ಗ್ರಾಹಕರು ಗುರುತಿಸಬಹುದು. ಎμÉ್ಟೂ ಸಂದರ್ಭದಲ್ಲಿ ರಸ್ತೆಗೆ ಮೀಸಲಿಟ್ಟ ಜಾಗದ ಮೇಲೆ ತೋರಿಸಿದ ಸೈಟ್ ಖರೀದಿಸಿ, ಗ್ರಾಹಕ ಮೋಸ ಹೋಗುವ ಸಾಧ್ಯತೆ ಇರುತ್ತದೆ. ಆದ್ದರಿಂದ ಎಲ್ಲ ರೀತಿಯಲ್ಲಿ ಪರಿಶೀಲಿಸಿ, ಗ್ರಾಹಕರು ಅಧಿಕೃತ ಬಡಾವಣೆಗಳಲ್ಲಿ ಮಾತ್ರ ಸೈಟ್‍ಗಳನ್ನು ಖರೀದಿಸುವಂತೆ ಜನರಲ್ಲಿ ಜಾಗೃತಿ ಮೂಡಬೇಕೆಂದು ಅವರು ತಿಳಿಸಿದರು.

ಇದನ್ನೂ ಓದಿ- ಫ್ರೀ ರೇಶನ್ ಜೊತೆಗೆ ಈ ಸೌಲಭ್ಯ ಕೂಡಾ ಇನ್ನು ಸಂಪೂರ್ಣ ಉಚಿತ ! ಪಡಿತರ ಚೀಟಿದಾರರಿಗೆ ಜಾಕ್ ಪಾಟ್

ಕೃಷಿ ಭೂಮಿಗಳಲ್ಲಿ ಅನಧಿಕೃತವಾಗಿ ಬಡಾವಣೆ ನಿರ್ಮಿಸಲಾಗುತ್ತಿದೆ. ಇದನ್ನು ನಿಲ್ಲಿಸಬೇಕು. ಜಿಲ್ಲೆಯ ಯಾವುದೇ ಸ್ಥಳದಲ್ಲಿ ಅನಧಿಕೃತವಾಗಿ ಬಡಾವಣೆ ನಿರ್ಮಾಣವಾಗುತ್ತಿದ್ದರೆ ಸಾರ್ವಜನಿಕರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಮಾಹಿತಿ ನೀಡಬೇಕು. ಅಗತ್ಯವಿದ್ದರೆ ಮಾಹಿತಿದಾರರ ಹೆಸರು ಗೌಪ್ಯವಾಗಿಟ್ಟು ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸಿ, ಜಮೀನು ವಶಪಡಿಸಿಕೊಳ್ಳಲಾಗುವುದು ಎಂದು ಅವರು ತಿಳಿಸಿದರು.ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಹಾಗೂ ಟಾಸ್ಕ್ ಪೆÇೀರ್ಸ್ ಸಮಿತಿ ಸದಸ್ಯಕಾರ್ಯದರ್ಶಿ ಡಾ.ಸಂತೋಷಕುಮಾರ ಬಿರಾದಾರ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸಭೆ ನಿರ್ವಹಿಸಿದರು.

ಸಭೆಯಲ್ಲಿ ಉಪ ಪೋಲಿಸ್  ಆಯುಕ್ತ ರಾಜೀವ ಎಂ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಬಿ.ಎಸ್. ಮೂಗನೂರಮಠ, ಉಪವಿಭಾಗಾಧಿಕಾರಿ ಅಶೋಕ ತೇಲಿ, ಹುಬ್ಬಳ್ಳಿ ನಗರ ತಹಶೀಲ್ದಾರ ಕಲ್ಲಗೌಡ ಪಾಟೀಲ, ಹೆಸ್ಕಾಂ ಇಇ, ಎಂ.ಎಂ. ನದಾಫ ಸೇರಿದಂತೆ ಭೂದಾಖಲೆಗಳ ಇಲಾಖೆ, ಹೆಸ್ಕಾಂ, ಉಪನೋಂದಣಿ, ಜಲಮಂಡಳಿ, ಗ್ರಾಮೀಣ ನೀರು ಸರಬರಾಜು ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=38l6m8543Vk

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
 

 

Trending News