ನವದೆಹಲಿ: ಭೀಕರ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ನಾಲ್ವರು ಭೀಕರವಾಗಿ ಸಜೀವ ದಹನಗೊಂಡ ಘಟನೆ ನಗರದ ಹೊರವಲಯದ ತಾರಿಹಾಳದ ಖಾಸಗಿ ಕೈಗಾರಿಕೆ ಶೆಡ್ ಯೊಂದರಲ್ಲಿ ಸಂಭವಿಸಿದೆ.ಇದೇ ವೇಳೆ ಎಂಟು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಈ ದುರ್ಘಟನೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನೆಗೆ ಕಾರಣ ಏನು? ಎಷ್ಟು ಮಂದಿ ಬೆಂಕಿಗೆ ಆಹುತಿಯಾಗಿದ್ದಾರೆ ಎಂಬ ಮಾಹಿತಿ ತಿಳಿದು ಬರಬೇಕಿದೆ.ಒಟ್ಟಿನಲ್ಲಿ ಭಯಾನಕ ಅಗ್ನಿ ಅವಘಡದಿಂದ ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: BY Vijayendra : ಪಿಎಸ್ಐ ಹಗರಣ ಕಾಂಗ್ರೆಸ್ ಪಕ್ಷದ ಕೂಸು : ಬಿವೈ ವಿಜಯೇಂದ್ರ
ಈ ದುರ್ಘಟನೆ ಕುರಿತಾಗಿ ಪ್ರತಿಕ್ರಿಯಿಸಿರುವ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಲಾಭುರಾಮ್ ತಾರಿಹಾಳ ಇಂಡಸ್ಟ್ರಿಯಲ್ ಏರಿಯಾದಲ್ಲಿ ಸ್ಪಾರ್ಕರ್ ತಯಾರಿಕೆ ಘಟಕಕ್ಕೆ ಬೆಂಕಿ ಹತ್ತಿದ್ದು ಎಂಟು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.ಈ ಕುರಿತು ಪ್ರಕರಣ ದಾಖಲಾಗಿದೆ ತನಿಖೆಯ ನಂತರವೇ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ ಎಂದು ಹೇಳಿದ್ದಾರೆ.
ಇನ್ನೂ ಮುಂದುವರೆದು ಮಾತನಾಡಿದ ಅವರು 'ಫ್ಯಾಕ್ಟರಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡಿದ್ದು, ಪೊಲೀಸ್ ಸಿಬ್ಬಂದಿ ಹಾಗೂ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದ್ದು, ತನಿಖೆಯ ನಂತರವೇ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ ಎಂದು ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.