ಧಾರವಾಡ : ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 21 ನೇ ಅವಧಿಯ ಮಹಾಪೌರ ಹಾಗೂ ಉಪಮಹಾಪೌರ ಸ್ಥಾನಗಳಿಗೆ ಮೇ.28 ರಂದು ಚುನಾವಣೆ ನಡೆಸಲಾಗುವುದು ಎಂದು ಚುನಾವಣಾಧಿಕಾರಿಗಳೂ ಆಗಿರುವ ಬೆಳಗಾವಿ ವಿಭಾಗ ಪ್ರಾದೇಶಿಕ ಆಯುಕ್ತ ಆಮ್ಲನ್ ಆದಿತ್ಯ ಬಿಸ್ವಾಸ್ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಮಹಾಪೌರ ಸ್ಥಾನವು ಸಾಮಾನ್ಯ ವರ್ಗ, ಉಪಮಹಾಪೌರ ಸ್ಥಾನವು ಸಾಮಾನ್ಯ ಮಹಿಳಾ ವರ್ಗಕ್ಕೆ ಮೀಸಲಿಡಲಾಗಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಮೇ.28 ರಂದು ಚುನಾವಣೆ ನಡೆಯಲಿದೆ. ಅಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಾಮಪತ್ರಗಳನ್ನು ಸ್ವೀಕರಿಸಲಾಗುವುದು. ಮಧ್ಯಾಹ್ನ 3 ಗಂಟೆಗೆ ಸಭೆ ಪ್ರಾರಂಭವಾಗುವುದು.
ಇದನ್ನೂ ಓದಿ: ತಾರಕಕ್ಕೆ ಏರಿದ ಬಿಎಂಟಿಸಿ-ಮೆಟ್ರೋ ನಡುವಿನ ಫೀಡರ್ ಬಸ್ ತಿಕ್ಕಾಟ
ನಾಮಪತ್ರಗಳ ಪರಿಶೀಲನೆ ನಂತರ ಉಮೇದುವಾರರ ಘೋಷಣೆ ನಾಮಪತ್ರ ಹಿಂಪಡೆಯಲು ಅವಕಾಶ ಕಲ್ಪಿಸಲಾಗುವುದು.ಅಗತ್ಯವಿದ್ದರೆ ಕೈ ಎತ್ತುವ ಮೂಲಕ ಮತದಾನ ನಡೆಸಿ ಮಹಾಪೌರ ಹಾಗೂ ಉಪಮಹಾಪೌರರನ್ನು ಚುನಾಯಿಸಲಾಗುವುದು ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ