ಹುಬ್ಬಳ್ಳಿ ಈದ್ಗಾ ಮೈದಾನ ಇನ್ನು ರಾಣಿ ಚೆನ್ನಮ್ಮ ಮೈದಾನ
ಕಳೆದ ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸದಸ್ಯ ಸಂತೋಷ ಚಹ್ವಾನ ಅವರು ನಾಮಕರಣ ಬದಲಾವಣೆ ಕುರಿತು ಮಂಡಿಸಿದ್ದರು.
ಹುಬ್ಬಳ್ಳಿ: ಈದ್ಗಾ ಮೈದಾನವೆಂದೇ ಖ್ಯಾತಿ ಪಡೆದಿದ್ದ ಹುಬ್ಬಳ್ಳಿ ನಗರದ ಹೃದಯ ಭಾಗದಲ್ಲಿರುವ ಕಿತ್ತೂರು ಚೆನ್ನಮ್ಮ ಮೈದಾನಕ್ಕೆ ನೂತನ ಮೇಯರ್ ವಿರೇಶ ಅಂಚಟಗೇರಿ "ಕಿತ್ತೂರು ರಾಣಿ ಚೆನ್ನಮ್ಮ ಮೈದಾನ" ಎಂದು ಮರು ನಾಮಕರಣ ಮಾಡಿದ್ದಾರೆ.
ಈ ಹಿಂದೆ ನಡೆದ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಮೇಯರ್ ಈ ಆದೇಶ ನೀಡಿದ್ದು ಈದ್ಗಾ ಮೈದಾನವೆಂದೇ ಖ್ಯಾತಿ ಪಡೆದಿದ್ದ ಈ ಮೈದಾನ ರಾಷ್ಟ್ರಧ್ವಜಾರೋಹಣ ನೆರವೇರಿಸುವುದಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ, ಲಾಠಿ ಚಾರ್ಜ್, ಗೋಲಿಬಾರ್ ಗಳಂತಹ ಅಹಿತಕರ ಘಟನೆಗಳಿಗೆ ಸಾಕ್ಷಿಯಾಗಿತ್ತು. ಪರಿಣಾಮವಾಗಿ ಈದ್ಗಾ ಮೈದಾನದಲ್ಲಿ ವರ್ಷಕ್ಕೆ 2 ಬಾರಿ ಮಾತ್ರ ನಮಾಜ್ ಮಾಡಲು ಮುಸ್ಲಿಂ ಬಾಂಧವರಿಗೆ ಅವಕಾಶ ಇದ್ದು, ಮಿಕ್ಕಂತೆ ಈ ಮೈದಾನ ಪಾಲಿಕೆಯ ಸ್ವತ್ತಾಗಿದೆ.
ಇದನ್ನೂ ಓದಿ- Mandya: ಕುರಿ ತಿನ್ನಲು ಬಂದು ಕೊಟ್ಟಿಗೆಯಲ್ಲಿ ಸಿಲುಕಿದ ಚಿರತೆ..!
ಕಳೆದ ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸದಸ್ಯ ಸಂತೋಷ ಚಹ್ವಾನ ಅವರು ನಾಮಕರಣ ಬದಲಾವಣೆ ಕುರಿತು ಮಂಡಿಸಿದ್ದರು. ಇದಕ್ಕೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಮೇಯರ್ ವಿರೇಶ ಅಂಚಟಗೇರಿ ಆದೇಶ ಜೀ ನ್ಯೂಸ್ ಗೆ ಲಭ್ಯವಾಗಿದೆ.
[[{"fid":"265008","view_mode":"default","fields":{"format":"default","field_file_image_alt_text[und][0][value]":false,"field_file_image_title_text[und][0][value]":false},"type":"media","field_deltas":{"1":{"format":"default","field_file_image_alt_text[und][0][value]":false,"field_file_image_title_text[und][0][value]":false}},"link_text":false,"attributes":{"class":"media-element file-default","data-delta":"1"}}]][[{"fid":"265009","view_mode":"default","fields":{"format":"default","field_file_image_alt_text[und][0][value]":false,"field_file_image_title_text[und][0][value]":false},"type":"media","field_deltas":{"2":{"format":"default","field_file_image_alt_text[und][0][value]":false,"field_file_image_title_text[und][0][value]":false}},"link_text":false,"attributes":{"class":"media-element file-default","data-delta":"2"}}]]
ಇದನ್ನೂ ಓದಿ- ಮೈಸೂರಿನ ಮಾನಸ ಗಂಗೋತ್ರಿ ಕ್ಯಾಂಪಸ್ನಲ್ಲಿ ಕೇಂದ್ರ ಇಂಟಲಿಜೆನ್ಸ್ ಬ್ಯೂರೋ ನಿವೃತ್ತ ಅಧಿಕಾರಿ ಕೊಲೆ..!
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.