ಮಂಗಳೂರು : ಕೇಂದ್ರ ಸರ್ಕಾರ, ಕೇಂದ್ರ ಸಚಿವರು  ಟೋಲ್ ಗೇಟ್ ಅನ್ನು ಕಾನೂನು ಬಾಹಿರ ಎಂದು ಹೇಳಿದ್ದರೂ, ಆ ಟೋಲ್ ಗೇಟನ್ನು ಇನ್ನೂ ತೆರವು ಗೊಳಿಸಿಲ್ಲ. ಟೋಲ್ ಗೇಟ್ ತೆರವು ಮಾಡದ ಕರಾವಳಿಯ ಜನಪ್ರತಿನಿಧಿಗಳ ವಿರುದ್ಧ ಸಮಾನ ಮನಸ್ಕ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ . ಟೋಲ್ ಗೇಟ್ ತೆರವಿಗೆ ಆಗ್ರಹಿಸಿ, ಸಮಾನ ಮನಸ್ಕ ಸಂಘಟನೆಗಳು  ಟೋಲ್ ಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. 


COMMERCIAL BREAK
SCROLL TO CONTINUE READING

ಕಟ್ಟೆಯೊಡೆದ ಆಕ್ರೋಶ, ಸರ್ಕಾರದ ವಿರುದ್ಧ ಘೋಷಣೆ, ಟೋಲ್ ಗೆ ಮುತ್ತಿಗೆ. ಹೌದು, ಈ ದೃಶ್ಯ ಕಂಡು ಬಂದಿದ್ದು ಮಂಗಳೂರು ನಗರದ ಸುರತ್ಕಲ್ ನಲ್ಲಿ. ಮಂಗಳೂರು ನಗರದ ಎನ್ಐಟಿಕೆ ಬಳಿಯಿರುವ ಸುರತ್ಕಲ್ ಟೋಲ್ ಗೇಟ್ ತೆರವಿಗೆ ಆಗ್ರಹಿಸಿ, ಪ್ರತಿಭಟನೆ ನಡೆಯಿತು.  ಈ ವೇಳೆ ಪ್ರತಿಭಟನಾಕಾರರು ಏಕಾಏಕಿ ಟೋಲ್ ಗೇಟ್‌ನತ್ತ ಮುತ್ತಿಗೆ ಹಾಕಿದರೂ. ಈ ಸಂದರ್ಭದಲ್ಲಿ ಪೊಲೀಸರು ಬ್ಯಾರಿಕೇಡ್ ಇಟ್ಟು ಪ್ರತಿಭಟನಾಕಾರರನ್ನು ತಡೆಯುವ ಪ್ರಯತನ್ ನಡೆಸಿದರು. ಆದರೆ ಸಾವಿರಾರು ಪ್ರತಿಭಟನಾಕಾರರು ಏಕಾಏಕಿ ಬ್ಯಾರಿಕೇಡ್‌ಗಳನ್ನು ತಳ್ಳಿಕೊಂಡು ಟೋಲ್‌ನತ್ತ ಓಡಿ ಹೋದ ಘಟನೆ ನಡೆಯ್ತು.


ಇದನ್ನೂ ಓದಿ : SSLC ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ : ನಿಮಗೆ 100 ದಿನ ಉಚಿತ ಕೋಚಿಂಗ್!


ಸ್ಥಳದಲ್ಲಿ ಸಾವಿರಾರು ಪೊಲೀಸರನ್ನು ನಿಯೋಜನೆ ಮಾಡಿದ್ದರೂ, ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಹರಸಾಹಸ ಪಡಬೇಕಾಯಿತು. ಆದರೂ ಟೋಲ್‌ನತ್ತ ನುಗ್ಗಿದ ಪ್ರತಿಭಟನಾಕಾರರು ಟೋಲ್ ಸಂಗ್ರಹ ವಸ್ತುಗಳನ್ನು ಪುಡಿ ಪುಡಿ ಮಾಡಿದರು . ಈ ವೇಳೆ ಪೊಲೀಸರು ನೂರಾರು ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡರು. ಕೆಲಕಾಲದವರೆಗೆ ಟೋಲ್ ಗೇಟ್‌ನಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದ್ದು, ನಂತರ ಪೊಲೀಸರು ಟೋಲ್ ಗೇಟ್‌ನಲ್ಲಿ ಸುಗಮ ವಾಹನ ಸಂಚಾರಕ್ಕೆ ಅವಕಾಶ ಮಾಡಿ ಕೊಟ್ಟರು.


ಸುರತ್ಕಲ್ ಟೋಲ್ ತೆರವಿಗಾಗಿ ಕಳೆದ ಹಲವಾರು ವರ್ಷಗಳಿಂದ ಹೋರಾಟ ನಡೆಯುತ್ತಿದೆ.  ಇದೀಗ ಸಂಸದರು, ಜಿಲ್ಲಾಡಳಿತ ಕೆಲವೇ ದಿನಗಳಲ್ಲಿ ಟೋಲ್ ತೆರವು ಮಾಡಿಸುವುದಾಗಿ ಭರವಸೆ ನೀಡಿದ್ದಾರೆ. 


 ಇದನ್ನೂ ಓದಿ : ದೀಪಾವಳಿ ಸಂದರ್ಭ ನಿಲ್ದಾಣದಲ್ಲಿ ಜನದಟ್ಟಣೆ ತಡೆಯಲುಕ್ರಮ : ಪ್ಲಾಟ್‌ಪಾರಂ ಟಿಕೆಟ್ ದರ ಹೆಚ್ಚಳ


 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.