ಕೆ.ಜೆ.ಜಾರ್ಜ್ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ

ಬೆಳಿಗ್ಗೆ 10 ಗಂಟೆಗೆ ಕೆ.ಜೆ.ಜಾರ್ಜ್ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ವತಿಯಿಂದ ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ ಕೈಗೊಳ್ಳಲಾಗಿದೆ.

Last Updated : Sep 16, 2017, 08:00 AM IST
ಕೆ.ಜೆ.ಜಾರ್ಜ್ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ title=
Pic : Twitter

ಬೆಂಗಳೂರು: ಕೆ.ಜೆ.ಜಾರ್ಜ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದೆ. ಪ್ರತಿಭಟನೆಯು ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾ ಕೇಂದ್ರಗಳ ಮುಂದೆ ಬೆಳಿಗ್ಗೆ 10 ಗಂಟೆಗೆ ಪ್ರಾರಂಭವಾಗಲಿದೆ.

ಡಿವೈಎಸ್ಪಿ ಗಣಪತಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸಚಿವ ಕೆ.ಜೆ.ಜಾರ್ಜ್ ತಕ್ಷಣವೇ ರಾಜೀನಾಮೆ ನೀಡಬೇಕು. ಇಲ್ಲವಾದರೆ ಸೆ.16 ರ ನಂತರ ಬಿಜೆಪಿ ವತಿಯಿಂದ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೆ.11 ರಂದು ಆಗ್ರಹಿಸಿದ್ದರು.

Trending News