ಹುಲಿಗೆಮ್ಮ ದೇವಿ ಜಾತ್ರೆ: ಮದ್ಯ ಮಾರಾಟ ನಿಷೇಧ
ರಾಜ್ಯದ ಪ್ರಮುಖ ಸುಕ್ಷೇತ್ರವಾದ ಹುಲಿಗಿಯ ಶ್ರೀ ಹುಲಿಗೆಮ್ಮ ದೇವಿ ಜಾತ್ರಾ ಮಹೋತ್ಸವ-2023ರ ಪ್ರಯುಕ್ತ ಕ್ಷೇತ್ರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮದ್ಯೆ ಮಾರಾಟ ನಿಷೇಧಿಸಿ ಕೊಪ್ಪಳ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ್ ಬಾಬು ಅವರು ಆದೇಶ ಹೊರಡಿಸಿದ್ದಾರೆ.
ಬೆಂಗಳೂರು: ರಾಜ್ಯದ ಪ್ರಮುಖ ಸುಕ್ಷೇತ್ರವಾದ ಹುಲಿಗಿಯ ಶ್ರೀ ಹುಲಿಗೆಮ್ಮ ದೇವಿ ಜಾತ್ರಾ ಮಹೋತ್ಸವ-2023ರ ಪ್ರಯುಕ್ತ ಕ್ಷೇತ್ರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮದ್ಯೆ ಮಾರಾಟ ನಿಷೇಧಿಸಿ ಕೊಪ್ಪಳ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ್ ಬಾಬು ಅವರು ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ- WhatsApp New Scam: ವಾಟ್ಸಾಪ್ ನಲ್ಲಿ ಈ ಮೊಬೈಲ್ ನಂಬರ್‌ಗಳಿಂದ ಕರೆ ಬಂದರೆ ಹುಷಾರ್!
ಜಾತ್ರಾ ಮಹೋತ್ಸವದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ ಕಾನೂನು ಸುವ್ಯವಸ್ಥೆ, ಶಾಂತಿ ಪಾಲನೆಗಾಗಿ ಮತ್ತು ಸಾರ್ವಜನಿಕ ಹಿತಾಸಕ್ತಿ ಕಾಪಾಡುವ ಹಿತದೃಷ್ಟಿಯಿಂದ ಕರ್ನಾಟಕ ಅಬಕಾರಿ ಕಾಯ್ದೆ-1965 ರ ಕಲಂ 21ರ ಪ್ರಕಾರ ಹುಲಿಗಿ ಗ್ರಾಮದಲ್ಲಿ ಮೇ 12ರ ಬೆಳಗ್ಗೆ 06 ರಿಂದ ಮೇ 16ರ ರಾತ್ರಿ 11 ಗಂಟೆಯವರೆಗೆ ಮದ್ಯೆ ಮಾರಾಟ ನಿಷೇಧಿಸಿದೆ. ಈ ವಿಷಯವಾಗಿ ಅಬಕಾರಿ ಉಪ ಆಯುಕ್ತರ ನೇತೃತ್ವದಲ್ಲಿ ತನಿಖಾ ತಂಡವನ್ನು ರಚಿಸಿ, ಅದರಲ್ಲಿ ಆರಕ್ಷಕ ವೃತ್ತ ನಿರೀಕ್ಷಕರು ಹಾಗೂ ಅಬಕಾರಿ ವೃತ್ತ ನಿರೀಕ್ಷಕರು, ಕಾರ್ಯನಿರ್ವಹಿಸಲು ಆದೇಶಿಸಿದೆ, ಈ ಆದೇಶವನ್ನು ಅನುಷ್ಠಾನಗೊಳಿಸುವಲ್ಲಿ ನಿರ್ಲಕ್ಷ್ಯತನ ತೋರಿದವರ ವಿರುದ್ಧ ಕಾನೂನು ರೀತಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆದೇಶದಲ್ಲಿ ತಿಳಿಸಿದೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.