ಮಾನವ ಸರಪಳಿ: ಗಡಿಜಿಲ್ಲೆಯಲ್ಲಿ 1 ಕಿಮೀ ಧ್ವಜ, ಜಾನಪದ ಸಂಸ್ಕೃತಿ ಅನಾವರಣ
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಜಗತ್ತಿನ ಅತಿದೊಡ್ಡ ಮಾನವ ಸರಪಳಿಗೆ ಚಾಮರಾಜನಗರ ಕೂಡ ಬೆಸೆದುಕೊಂಡಿತು.
ಚಾಮರಾಜನಗರ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಜಗತ್ತಿನ ಅತಿದೊಡ್ಡ ಮಾನವ ಸರಪಳಿಗೆ ಚಾಮರಾಜನಗರ ಕೂಡ ಬೆಸೆದುಕೊಂಡಿತು. ಚಾಮರಾಜನಗರ ಮತ್ತು ಮೈಸೂರು ಗಡಿಭಾಗವಾದ ಮೂಗುರು ಕ್ರಾಸ್ ನಲ್ಲಿ ಆರಂಭಗೊಂಡ ಮಾನವ ಸರಪಳಿ ಚಾಮರಾಜನಗರದ ರಾಮಸಮುದ್ರದ ಅಂಬೇಡ್ಕರ್ ಪ್ರತಿಮೆ ಬಳಿ ಕೊನೆಗೊಂಡಿತು.
ವಿವಿಧ ರಾಜ್ಯಗಳ ಸಂಸ್ಕೃತಿ ದರ್ಶನ
ಶಾಲಾ- ಕಾಲೇಜಿನ ವಿದ್ಯಾರ್ಥಿಗಳು ಮಾನವ ಸರಪಳಿ ಹಾದು ಹೋಗಿದ್ದ ಮಾರ್ಗದಲ್ಲಿ ಭಾರತದ ಒಂದೊಂದು ರಾಜ್ಯದ ಧಿರಿಸು ಧರಿಸಿ ವಿವಿಧೆತೆಯಲ್ಲಿ ಏಕತೆಯ ಸಂಸ್ಕೃತಿ ಪ್ರತಿಬಿಂಬಿಸಿದರು.
ಕರ್ನಾಟಕ, ತಮಿಳುನಾಡು, ತೆಲಂಗಾಣ, ಆಂದ್ರಪ್ರದೇಶ, ಮಹಾರಾಷ್ಟ್ರ, ಜಾರ್ಖಂಡ್ ಹೀಗೆ ವಿವಿಧ ರಾಜ್ಯಗಳ ಸಾಂಪ್ರದಾಯಿಕ ಉಡುಪು ಧರಿಸಿ ಆಯಾ ರಾಜ್ಯದ ಭೂಪಟ ಹಿಡಿದು ನಾವೆಲ್ಲ ಒಂದು ಎಂದರು.
ಇದನ್ನೂ ಓದಿ: Road Accident: ಲಾರಿ-ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ, 8 ಮಂದಿ ಸ್ಥಳದಲ್ಲೇ ಸಾವು!
ಜಾನಪದ ಸಂಸ್ಕೃತಿ ಅನಾವರಣ
ಚಾಮರಾಜನಗರ ಜಾನದಪಗಳ ತವರೂರಾಗಿದ್ದು ಮಾನವ ಸರಪಳಿಯ ಪ್ರಮುಖ ವೃತ್ತಗಳಲ್ಲಿ ಜಾನಪದ ನೃತ್ಯ ಪ್ರಸ್ತುತ ಪಡಿಸಲಾಯಿತು. ಸೋಲಿಗರ ಗೊರುಕನ, ಜೇನುಕುರುಬರ ನೃತ್ಯ, ಗೊರವರ ಕುಣಿತ, ಹುಲಿ ವೇಷ, ವೀರಗಾಸೆ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳು ಗಮನ ಸೆಳೆದವು.
1 ಕಿಮೀ ಧ್ವಜ- ಸಾಂಪ್ರದಾಯಿಕ ಧಿರಿಸು:
ಪ್ರಜಾಪ್ರಭುತ್ವದ ಸಂಭ್ರಮಾಚರಣೆ ಹಿನ್ನೆಲೆ ಸರ್ಕಾರಿ ನೌಕರರು, ಕಾಲೇಜಿನ ಉಪನ್ಯಾಸಕರು, ಸಾರ್ವಜನಿಕರು, ರೈತರು, ಕನ್ನಡ ಪರ ಹೋರಾಟಗಾರರು ಪ್ರತಿನಿಧಿಸಿದರು. ಮಹಿಳೆಯರು ಹಸಿರು ಸೀರೆ, ಪುರುಷರು ಬಿಳಿ ಪಂಚೆ, ಶರ್ಟ್ , ಶಲ್ಯ ಧರಿಸಿ ಮಿಂಚಿದರು.
ರೈತರು ಹಸಿರು ಟಬೆಲ್, ಕನ್ನಡಪರ ಹೋರಾಟಗಾರರು ನಾಡ ಧ್ವಜ, ಹೋರಾಟಗಾರರು ನೀಲಿ ಶಲ್ಯ ಹೊದ್ದಿದ್ದರು. ರಾಮಸಮುದ್ರದಲ್ಲಿ 1 ಕಿಮೀ ಉದ್ದದ ಭಾರತ ಧ್ವಜ ಹಿಡಿದು ರಾಷ್ಟ್ರಗೀತೆ ಹಾಡಿದ್ದು ಎಲ್ಲರ ಮನ ಗೆದ್ದಿತು.
ನಿರೀಕ್ಷಿತ ಮಟ್ಟದಲ್ಲಿ ಸೇರದ ಜನರು
ಗಡಿಜಿಲ್ಲೆ ಚಾಮರಾಜನಗರಲ್ಲಿ 25 ಕಿಮೀ ಉದ್ದದ ಮಾನವ ಸರಪಳಿ 19.5 ಸಾವಿರ ಮಂದಿ ಸೇರುತ್ತಾರೆ ಎನ್ನಲಾಗಿತ್ತು. ಆದರೆ, ಜಿಲ್ಲಾಡಳಿತದ ನಿರೀಕ್ಷೆ ಹುಸಿಯಾಗಿ ಮಾನವ ಸರಪಳಿ ಅಲ್ಲಲ್ಲಿ ನಿರೀಕ್ಷಿತ ಪ್ರಮಾಣದ ಜನರು ಸೇರದೇ ಇದ್ದದ್ದು ಕಂಡುಬಂದಿತು. ಇದಕ್ಕೆ ಸಚಿವ ಕೆ.ವೆಂಕಟೇಶ್ ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿ, ಜನರು ಗ್ರಾಮಾಂತರ ಪ್ರದೇಶದಿಂದ ಬರುತ್ತಿದ್ದನ್ನು ನಾನೇ ನೋಡಿದೆ, ಇಷ್ಟು ಜನರು ಸೇರಿರುವುದೇ ದೊಡ್ಡದು, ಜನರನ್ನು ಪ್ರೋತ್ಸಾಹಿಸೋಣ ಎಂದರು.
ಇದನ್ನೂ ಓದಿ: ನೀರಿಗೆ ಬಿದ್ದ ಮಗುವನ್ನು ರಕ್ಷಿಸಲು ಯತ್ನಿಸಿದ ಸಿಂಹ.. ನೆಟ್ಟಿಗರ ಮನ ಗೆದ್ದ ವಿಡಿಯೋ ವೈರಲ್!
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.