ರಮೇಶ್ ಜಾರಕಿಹೊಳಿ ಮತ್ತು ಕೆ.ಎಸ್.ಈಶ್ವರಪ್ಪ ಸಂಪರ್ಕದಲ್ಲಿದ್ದೇನೆ; ಸಿಎಂ ಬೊಮ್ಮಾಯಿ

ತಮ್ಮ ಮೇಲಿದ್ದ ಪ್ರಕರಣಗಳಲ್ಲಿ ಮುಕ್ತರಾದ ಮೇಲೆ ಮತ್ತೊಮ್ಮೆ ಸಂಪುಟಕ್ಕೆ ಸೇರಬೇಕೆನ್ನುವ ಅವರ ಚಿಂತನೆ ಸರಿಯಿದೆ. ಅವರ ವಿಚಾರವನ್ನು ದೆಹಲಿ ಭೇಟಿ ನೀಡಿದ ಸಂದರ್ಭದಲ್ಲಿ ಚರ್ಚೆ ಮಾಡಿದ್ದೇನೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.  

Written by - Prashobh Devanahalli | Edited by - Ranjitha R K | Last Updated : Dec 20, 2022, 01:06 PM IST
  • ರಮೇಶ್ ಜಾರಕಿಹೊಳಿ ಮತ್ತು ಕೆ.ಎಸ್.ಈಶ್ವರಪ್ಪ ಬಗ್ಗೆ ಸ್ಪಷ್ಟನೆ ನೀಡಿದ ಸಿಎಂ
  • ಅಧಿವೇಶನದಲ್ಲಿ ಭಾಗವಹಿಸದೇ ಇರುವುದು ಬಹಿಷ್ಕಾರವಲ್ಲ.
  • ಕೆಲವು ವಿಚಾರಗಳನ್ನು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ - ಸಿಎಂ
ರಮೇಶ್ ಜಾರಕಿಹೊಳಿ ಮತ್ತು ಕೆ.ಎಸ್.ಈಶ್ವರಪ್ಪ ಸಂಪರ್ಕದಲ್ಲಿದ್ದೇನೆ; ಸಿಎಂ ಬೊಮ್ಮಾಯಿ title=
Basavaraja Bommai

ಬೆಳಗಾವಿ : ರಮೇಶ್ ಜಾರಕಿಹೊಳಿ ಮತ್ತು ಕೆ.ಎಸ್.ಈಶ್ವರಪ್ಪ ಅವರೊಂದಿಗೆ  ಸಂಪರ್ಕದಲ್ಲಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಸುವರ್ಣ ವಿಧಾನಸೌಧದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ ಅವರು ಮಾತನಾಡಿದ ಅವರು ಈ ಸ್ಪಷ್ಟನೆ ನೀಡಿದ್ದಾರೆ. 

ರಮೇಶ್ ಜಾರಕಿಹೊಳಿ ಮತ್ತು ಕೆ.ಎಸ್.ಈಶ್ವರಪ್ಪ ಅವರು ವಿಧಾನಮಂಡಲ ಅಧಿವೇಶನದಲ್ಲಿ ಭಾಗವಹಿಸದೇ ಇರುವುದು ಬಹಿಷ್ಕಾರವಲ್ಲ. ತಮ್ಮ ಮೇಲಿದ್ದ ಪ್ರಕರಣಗಳಲ್ಲಿ ಮುಕ್ತರಾದ ಮೇಲೆ ಮತ್ತೊಮ್ಮೆ ಸಂಪುಟಕ್ಕೆ ಸೇರಬೇಕೆನ್ನುವ ಅವರ ಚಿಂತನೆ ಸರಿಯಿದೆ. ಅವರ ವಿಚಾರವನ್ನು ದೆಹಲಿ ಭೇಟಿ ನೀಡಿದ ಸಂದರ್ಭದಲ್ಲಿ ಚರ್ಚೆ ಮಾಡಿದ್ದೇನೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.  ದೆಹಲಿ ನಾಯಕರು ಕೂಡಾ ಈ ಬಗ್ಗೆ ಸಕಾರಾತ್ಮಕವಾಗಿದ್ದಾರೆ. ಮಿಕ್ಕ ವಿಚಾರಗಳನ್ನು ವೈಯಕ್ತಿಕವಾಗಿ ಹೇಳಲಾಗುವುದು ಎಂದು ಸಿಎಂ ತಿಳಿಸಿದ್ದಾರೆ. ಇನ್ನು  ಕೆಲವು ವಿಚಾರಗಳನ್ನು  ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ ಎಂದು ಬೊಮ್ಮಾಯಿ ಇದೆ ವೇಳೆ ಸ್ಪಷ್ಟಪಡಿಸಿದ್ದಾರೆ. 

ಇದನ್ನೂ ಓದಿ : ಇಡಿ -ಎಲೆಕ್ಷನ್ ಡಿಪಾರ್ಟ್ಮೆಂಟ್, ಐಟಿ - ಇಂಟಲಿಜೆನ್ಸ್ ಡಿಪಾರ್ಟ್ಮೆಂಟ್ : ಬಿ.ಕೆ. ಹರಿಪ್ರಸಾದ್ ವ್ಯಂಗ್ಯ
ಸಿಬಿಐ ದಾಳಿ: 
ಸಿಬಿಐ ದಾಳಿ ಬಗ್ಗೆ ಡಿ.ಕೆ ಶಿವಕುಮಾರ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಸಿಬಿಐ ಸಂವಿಧಾನಾತ್ಮಕವಾಗಿ ಸ್ವಾಯತ್ತವಾಗಿರುವ ಸಂಸ್ಥೆ. ಅವರ ಬಳಿ ಇರುವ ಪ್ರಕರಣ ಇದೆ. ಪ್ರಕರಣದ ಆಧಾರದ ಮೇಲೆ   ಕ್ರಮ ಕೈಗೊಳ್ಳುತ್ತಾರೆ ಎಂದು ತಿಳಿಸಿದ್ದಾರೆ. ಇದು ಡಿ.ಕೆ.ಶಿವಕುಮಾರ್ ಅವರಿಗೂ ತಿಳಿದಿರುವ ವಿಚಾರ ಎಂದಿದ್ದಾರೆ.  

ಹಾಲಾಲ್ ಕಟ್ :
ಹಾಲಾಲ್ ಕುರಿತು ಸುದ್ದಿದಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಹಾಲಾಲ್ ವಿಷಯಕ್ಕೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ ಎಂಸು ಸ್ಪಷ್ಟಪಡಿಸಿದ್ದಾರೆ. 

ಇದನ್ನೂ ಓದಿ Crime News: ಬೆಂಗಳೂರಿನಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ..!

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News