Political updates in Karnataka: ನಾನು ಪುಟ್ಬಾಲ್ ಅಲ್ಲ, ಯಾವುದೇ ಕಾರಣಕ್ಕೂ ಎಂಪಿ ಸ್ಥಾನಕ್ಕೆ ಸ್ಪರ್ಧೆ ಇಲ್ಲ: ಪ್ರಕಾಶ್ ಹುಕ್ಕೇರಿ

Prakash Hukkeri MP seat decision : ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕೆರೂರ ಗ್ರಾಮದಲ್ಲಿ ಸಂತುಬಾಯಿ ಏತ ನೀರಾವರಿ ಯೋಜನೆ ಲೋಕಾರ್ಪಣೆ ಮಾಡಿ ಮಾದ್ಯಮಳ ಜೊತೆ ಮಾತನಾಡಿದ ಎಂಎಲ್‌ಸಿ ಪ್ರಕಾಶ್ ಹುಕ್ಕೇರಿ, ಬರುವ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವ ಬಗ್ಗೆ ಚರ್ಚೆ ಕೇಳಿ ಬರ್ತಿದೆ, ಯಾವುದೇ ಕಾರಣಕ್ಕೂ ನಾನು ಸ್ಪರ್ಧೆ ಮಾಡೋದಿಲ್ಲ ಎಂದು ಸ್ಪಷ್ಟಪಡಿಸಿದರು. 

Written by - Yashaswini V | Last Updated : Feb 2, 2024, 11:24 AM IST
  • ಮೊದಲೊಮ್ಮೆ ಶಾಸಕ ಸ್ಥಾನದಲ್ಲಿ ಇದ್ದೆ ರಾಜೀನಾಮೆ ಕೊಡಿಸಿ ಪರಿಷತ್ ಸ್ಪರ್ಧೆಗೆ ಇಳಿಸಿದರು.
  • ಸದ್ಯ ನಾನು ಶಿಕ್ಷಕರ ಮತಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯನಾಗಿ ಕಾರ್ಯವನ್ನು ಮಾಡುತ್ತಿದ್ದೇನೆ.
  • ಮತ್ತೆ ಲೋಕಸಭಾ ಸ್ಪರ್ಧೆ ಅಂದರೆ ನನ್ನ ಏನು ಪುಟಬಾಲ್ ರೀತಿ ತಿಳಿದಿದ್ದಾರೇನೋ?- ಎಂಎಲ್‌ಸಿ ಪ್ರಕಾಶ್ ಹುಕ್ಕೇರಿ
Political updates in Karnataka: ನಾನು ಪುಟ್ಬಾಲ್ ಅಲ್ಲ, ಯಾವುದೇ ಕಾರಣಕ್ಕೂ ಎಂಪಿ ಸ್ಥಾನಕ್ಕೆ ಸ್ಪರ್ಧೆ ಇಲ್ಲ:  ಪ್ರಕಾಶ್  ಹುಕ್ಕೇರಿ title=

ಚಿಕ್ಕೋಡಿ: ಕಾಂಗ್ರೆಸ್ ಪಕ್ಷದಲ್ಲಿ ನನ್ನನ್ನು ಪುಟ್ಬಾಲ್ ರೀತಿಯಲ್ಲಿ ಬಳಸಿಕೊಳ್ಳಬಾರದು ನಾನು ಯಾವುದೇ ಕಾರಣಕ್ಕೂ ಚಿಕ್ಕೋಡಿ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಕಾಂಗ್ರೆಸ್ ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯ ಪ್ರಕಾಶ್ ಹುಕ್ಕೇರಿ ಖಡಕ್ ಸಂದೇಶವನ್ನು ರವಾನಿಸಿದ್ದಾರೆ. 

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕೆರೂರ ಗ್ರಾಮದಲ್ಲಿ ಸಂತುಬಾಯಿ ಏತ ನೀರಾವರಿ ಯೋಜನೆ ಲೋಕಾರ್ಪಣೆ ಮಾಡಿ ಮಾದ್ಯಮಳ ಜೊತೆ ಮಾತನಾಡಿದ ಎಂಎಲ್‌ಸಿ ಪ್ರಕಾಶ್ ಹುಕ್ಕೇರಿ, ಬರುವ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವ ಬಗ್ಗೆ ಚರ್ಚೆ ಕೇಳಿ ಬರ್ತಿದೆ, ಯಾವುದೇ ಕಾರಣಕ್ಕೂ ನಾನು ಸ್ಪರ್ಧೆ ಮಾಡೋದಿಲ್ಲ ಎಂದು ಸ್ಪಷ್ಟಪಡಿಸಿದರು. 

ಇದನ್ನೂ ಓದಿ- ಕಲ್ಯಾಣ ಕರ್ನಾಟಕದ ಸ್ಥಳೀಯ ಆಡಳಿತ ಬಲವರ್ಧನೆಗಾಗಿ "ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್" 

ಮೊದಲೊಮ್ಮೆ ಶಾಸಕ ಸ್ಥಾನದಲ್ಲಿ ಇದ್ದೆ ರಾಜೀನಾಮೆ ಕೊಡಿಸಿ ಪರಿಷತ್ ಸ್ಪರ್ಧೆಗೆ ಇಳಿಸಿದರು. ಸದ್ಯ ನಾನು ಶಿಕ್ಷಕರ ಮತಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯನಾಗಿ ಕಾರ್ಯವನ್ನು ಮಾಡುತ್ತಿದ್ದೇನೆ. ಮತ್ತೆ ಲೋಕಸಭಾ ಸ್ಪರ್ಧೆ ಅಂದರೆ ನನ್ನ ಏನು ಪುಟಬಾಲ್ ರೀತಿ ತಿಳಿದಿದ್ದಾರೇನೋ? ನಾನು ಯಾವುದೇ ಕಾರಣಕ್ಕೂ ದೆಹಲಿ ರಾಜಕಾರಣ ಮಾಡುವುದಿಲ್ಲ, ಶಿಕ್ಷಕರ ಮತಕ್ಷೇತ್ರದಿಂದ ನನ್ನನ್ನು ಆಯ್ಕೆ ಮಾಡಿ ಕೊಟ್ಟಿದ್ದಾರೆ, ನನ್ನ ಅಧಿಕಾರ ಅವಧಿ ಆರು ವರ್ಷ ಇದೆ, ನನ್ನ ಆಯ್ಕೆ ಮತ್ತೆ ಚುನಾವಣೆಗೆ ನಿಲ್ಲೋದಕ್ಕೆ ಅಲ್ಲ, ಚುನಾವಣೆ ಎಂಬುದು ಪುಟ್ಬಾಲ್ ಮ್ಯಾಚ್ ತರ ಅಲ್ಲ. ನನ್ನ ಅವಧಿ ಇನ್ನೂ ಐದು ವರ್ಷ ಇದೆ. ವಿಧಾನಪರಿಷತ್ ಸದಸ್ಯನಾಗಿ ಒಳ್ಳೆಯ ಕೆಲಸವನ್ನು ಮಾಡುತ್ತಿದ್ದೇನೆ, 12 ರಿಂದ 13 ಕೋಟಿ ಈಗಾಗಲೇ ಶಿಕ್ಷಕರ ಏಳಿಗೆಗಾಗಿ ಖರ್ಚು ಮಾಡಲಾಗಿದೆ. ವಾಯುವ್ಯ ಶಿಕ್ಷಕರ ಮತಕ್ಷೇತ್ರ ದೊಡ್ಡದಾಗಿರುವುದರಿಂದ ಇಲ್ಲಿ ಶಿಕ್ಷಕರ ಕುಂದುಕೊರತೆಗಳು ಬಹಳಷ್ಟಿದೆ, ಅವರ ಕೆಲಸಗಳನ್ನು ಮಾಡುತ್ತಾ ನಾನು ಮುಂದುವರಿಯುತ್ತೇನೆ. ಯಾವುದೇ ಕಾರಣಕ್ಕೂ ನಾನು ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಿಲ್ಲ ಸ್ಪರ್ಧೆ ಮಾಡುವವರು ಮಾಡ್ಲಿ ಎಂದರು. 

ಇದನ್ನೂ ಓದಿ- "ಬಿಜೆಪಿ ಆಡಳಿತದಲ್ಲಿ ದೇಶದ ಸಂವಿಧಾನ, ಪ್ರಜಾಪ್ರಭುತ್ವ ಅವಸಾನದ ಹಾದಿಗೆ ಸರಿಯುತ್ತಿದೆ"- ಸಿಎಂ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ ಚುನಾವಣೆಗೆ ಸ್ಪರ್ಧೆ ಮಾಡುವ ಅಂತ ಹೇಳಿದ್ರು ನಾನು ಸ್ಪರ್ಧೆ ಮಾಡುವುದಿಲ್ಲ, ಅವರಿಗೆ ನಾನು ಯಾವುದೇ ಲಿಖಿತ ರೂಪದಲ್ಲಿ ಸ್ಪರ್ಧೆ ಮಾಡುತ್ತೇನೆ ಎಂದು ಬರೆದು ಕೊಟ್ಟಿಲ್ಲ ಮತ್ತು ಅದು ಯಾವುದೇ ನಿಯಮಗಳು ಕೂಡ ಇಲ್ಲ. ಹಿಂದೆ ಸಿಎಂ ಸಿದ್ದರಾಮಯ್ಯ ಅವರ ಅನತೆಯಂತೆ ನಾನು ವಾಯುವ್ಯ ಮತ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದೇನೆ, ವಿಧಾನಪರಿಷತ್ ಸದಸ್ಯರಾಗಿ ನಾನು ಮುಂದುವರೆಯುತ್ತೇನೆ, ನಾನು ಯಾವುದೇ ಪರಿಸ್ಥಿತಿ ಬಂದರೂ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ, ಯಾವುದೇ ಪರಿಸ್ಥಿತಿಯಲ್ಲೂ ಎಷ್ಟೇ ಒತ್ತಡ ಬಂದರೂ ನಾನು ಶಿಕ್ಷಕರ ಮತಕ್ಷೇತ್ರದಿಂದ ಮುಂದುವರಿಯುತ್ತೇನೆ, ಕಾಂಗ್ರೆಸ್ ಹೈಕಮಾಂಡ್ ನನ್ನನ್ನು ಚುನಾವಣೆಗೆ ನಿಲ್ಲುವಂತೆ ಒತ್ತಾಯ ಮಾಡಬಾರದು, ಯಾವುದೇ ಕಾರಣಕ್ಕೂ ನಾನು ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಸ್ಪಷ್ಟನೆ ನೀಡಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News