ಬೆಂಗಳೂರು: ದಮ್ಮಿದ್ದರೆ ಬಿಜೆಪಿ ಯಾತ್ರೆ ಹಿಮ್ಮೆಟ್ಟಿಸಿ ಎಂದು ಸವಾಲು ಹಾಕಿದ್ದ ಸಿಎಂ ಬಸವರಾಜ್ ಬೊಮ್ಮಾಯಿಗೆ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಭಾನುವಾರ ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ‘‘ಜನಮರ್ದನ’ ಅಲ್ಲಲ್ಲ, ‘ಜನಸ್ಪಂದನ’ ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿಯವರ ವೀರಾವೇಶದ ಭಾಷಣ ಕೇಳಿ ಖುಷಿಯಾಯಿತು. ಸಂಘ ಪರಿವಾರ ಇಂತಹ ಜೋರು ಮಾತುಗಳನ್ನು ಸಹಿಸವುದಿಲ್ಲ, ಇದೇ ರೀತಿ ಮಾತನಾಡಿಯೇ ಪಾಪ ಬಿ.ಎಸ್.ಯಡಿಯೂರಪ್ಪ ಜೈಲು ಸೇರಿದ್ದು ಎನ್ನುವುದು ನೆನಪಿರಲಿ’ ಅಂತಾ ಕುಟುಕಿದ್ದಾರೆ.
‘ದಮ್ ಇದ್ದರೆ ಬಿಜೆಪಿ ಯಾತ್ರೆ ಹಿಮ್ಮೆಟ್ಟಿಸಿ ಎಂದು ಸಿಎಂ ಬೊಮ್ಮಾಯಿ ಸವಾಲು ಹಾಕಿದ್ದಾರೆ. ನಾವು ಯಾಕೆ ಹಿಮ್ಮೆಟ್ಟಿಸಲು ಹೋಗ್ಬೇಕು? ಸಮಾವೇಶದಲ್ಲಿಯ ಖಾಲಿ ಕುರ್ಚಿಗಳನ್ನು ನೋಡಿದರೆ ನಿಮ್ಮ "ಜಾತ್ರೆ"ಯನ್ನು ನಮ್ಮ ಜನರೇ ಹಿಮ್ಮೆಟ್ಟಿಸಿದ್ದಾರೆ ಎಂದು ನಿಮಗೆ ಅನಿಸಲ್ವಾ?’ ಅಂತಾ ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: ರಾಹುಲ್ ಗಾಂಧಿ ಶರ್ಟ್ ಮೇಲೆ ಬಿಜೆಪಿಗರ ಕಣ್ಣು : ಬೆಲೆ 41,257 ರೂ. ಅಂತೆ..!
‘ಸಿಎಂ ಬೊಮ್ಮಾಯಿಯವರೇನಮಗೆ ಸವಾಲು ಹಾಕುವ ಧಮ್ ನಿಮಗಿಲ್ಲ ಎನ್ನುವುದು ಸ್ವತಃ ನಿಮಗೂ ಗೊತ್ತು. ನಿಮಗೆ ಧಮ್ ಇದ್ದರೆ ಮೊದಲು ನಿಮ್ಮ ಸಂಪುಟದಲ್ಲಿರುವ ಖಾಲಿ ಸ್ಥಾನಗಳನ್ನು ತುಂಬಿ. ಕನಿಷ್ಠ ಬಸವನಗೌಡ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳಿ. ಆ ಮೇಲೆ ನಿಮ್ಮ ಧಮ್ ನೋಡೋಣ. ನನ್ನ ಆಡಳಿತ ಕಾಲದ ಹಗರಣಗಳನ್ನು ಬಯಲಿಗೆಳೆಯುತ್ತೇವೆಂದು ಕೆಲವು ದಿನಗಳಿಂದ ಬಿಜೆಪಿ ನಾಯಕರು ಹೇಳುತ್ತಲೇ ಇದ್ದಾರೆ. ಮೊನ್ನೆ ಮಾಜಿ ಸಿಎಂ ಯಡಿಯೂರಪ್ಪರಿಗೆ ಹೈಕೋರ್ಟ್ ನೋಟೀಸ್ ನೀಡಿದ್ದನ್ನು ನೋಡಿದರೆ ಇವರು ಹೇಳಿದ್ದು ನನಗೋ, ಯಡಿಯೂರಪ್ಪನವರಿಗೋ? ಎಂದು ಗೊಂದಲವಾಗುತ್ತಿದೆ’ ಅಂತಾ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ಮುಖ್ಯಮಂತ್ರಿ @BSBommai ಅವರೇ, ನಮಗೆ ಸವಾಲು ಹಾಕುವ ಧಮ್ ನಿಮಗಿಲ್ಲ ಎನ್ನುವುದು ಸ್ವತಃ ನಿಮಗೂ ಗೊತ್ತು. ನಿಮಗೆ ಧಮ್ ಇದ್ದರೆ ಮೊದಲು ನಿಮ್ಮ ಸಂಪುಟದಲ್ಲಿರುವ ಖಾಲಿ ಸ್ಥಾನಗಳನ್ನು ತುಂಬಿ ಬಿಡಿ. ಕನಿಷ್ಠ ಬಸವನಗೌಡ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳಿ. ಆ ಮೇಲೆ ನಿಮ್ಮ ಧಮ್ ನೋಡೋಣ. 3/8#ಜನಮರ್ದನ_ಸರ್ಕಾರ
— Siddaramaiah (@siddaramaiah) September 11, 2022
‘ಬಿಜೆಪಿ ನಾಯಕರ ಧಮ್ಕಿ ಮತ್ತು ಬ್ಲಾಕ್ ಮೇಲ್ ತಂತ್ರಗಳಿಗೆ ನಾನು ಹೆದರುವುದಿಲ್ಲ. ನಿಮ್ಮ ಬ್ಲಾಕ್ ಮೇಲ್ ತಂತ್ರಗಳನ್ನು ಮೊದಲು ನಿಮ್ಮವರ ಮೇಲೆ ಬಳಸಿಕೊಳ್ಳಿ. ನಮ್ಮ ಸರ್ಕಾರದ ಹಗರಣಗಳನ್ನು ಬಯಲಿಗೆಳೆಯುವ ಮೊದಲು ಬಿಜೆಪಿ ನಾಯಕರ ಮೇಲೆ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಸಾಲು ಸಾಲು ಹಗರಣಗಳನ್ನು ಇತ್ಯರ್ಥ ಮಾಡಿಕೊಂಡು ಬನ್ನಿ. ನೀವು ಬೀಸುವ ಕತ್ತಿ ನಿಮ್ಮ ಕುತ್ತಿಗೆಯನ್ನೇ ಕೊಯ್ಯದಿರಲಿ’ ಅಂತಾ ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಸಿಎಂ ಕಚೇರಿಯಲ್ಲಿ ಕೆಲಸ : ಬೊಮ್ಮಾಯಿ ಘೋಷಣೆ
ನನ್ನ ಆಡಳಿತ ಕಾಲದ ಹಗರಣಗಳನ್ನು ಬಯಲಿಗೆಳೆಯುತ್ತೇವೆ ಎಂದು ಕೆಲವು ದಿನಗಳಿಂದ @BJP4Karnataka ನಾಯಕರು ಹೇಳುತ್ತಲೇ ಇದ್ದಾರೆ. ಮೊನ್ನೆ ಮಾಜಿ ಮುಖ್ಯಮಂತ್ರಿ @BSYBJP ಅವರಿಗೆ ಹೈಕೋರ್ಟ್ ನೋಟೀಸ್ ನೀಡಿದ್ದನ್ನು ನೋಡಿದರೆ ಇವರು ಹೇಳಿದ್ದು ನನಗೋ, ಯಡಿಯೂರಪ್ಪನವರಿಗೋ? ಎಂದು ಗೊಂದಲವಾಗುತ್ತಿದೆ. 4/8#ಜನಮರ್ದನ_ಸರ್ಕಾರ
— Siddaramaiah (@siddaramaiah) September 11, 2022
‘ಭ್ರಷ್ಟಾಚಾರದ ಬಗ್ಗೆ ಸಾರ್ವಜನಿಕ ಚರ್ಚೆಗೆ ನೀವು ಸಿದ್ಧರಿದ್ದಿರಾ ಸಿಎಂ ಬೊಮ್ಮಾಯಿಯವರೇ? ನಮ್ಮ ಪಕ್ಷ ಸಿದ್ಧ ಇದೆ. ನೀವು ಸಿದ್ಧವಿದ್ದರೆ ಸಾರ್ವಜನಿಕ ಚರ್ಚೆಗೆ ಸ್ಥಳ-ಸಮಯ ನೀವೇ ನಿರ್ಧರಿಸಿ ತಿಳಿಸಿ ನಾನು ಬರ್ತೇನೆ. ಧಮ್ ಎಂದರೆ ಧಮ್ ಬಿರಿಯಾನಿ ಎಂದು ನೀವು ತಿಳಿದುಕೊಂಡ ಹಾಗಿದೆ. ಭ್ರಷ್ಟಾಚಾರವನ್ನೇ ವಿಷಯವನ್ನಾಗಿಟ್ಟು ಚುನಾವಣೆ ಎದುರಿಸುವ ಧಮ್ ನಿಮಗಿದೆಯೇ ಸಿಎಂ ಬೊಮ್ಮಾಯಿಯವರೇ? ನಿಮಗೆ ಆ ಧಮ್ ಇಲ್ಲ. ಕೊನೆಗೆ ಹಿಂದು-ಮುಸ್ಲಿಂ, ಮಂದಿರ-ಮಸೀದಿ, ಹಿಜಾಬ್–ಕೇಸರಿ ಶಾಲುಗಳ ವಿವಾದದಲ್ಲಿಯೆ ನಿಮ್ಮ ಪ್ರಚಾರ ಕೊನೆಗೊಳ್ಳುವುದು. ಬೇರೆ ದಾರಿ ನಿಮಗಿಲ್ಲ’ ಅಂತಾ ಸಿದ್ದರಾಮಯ್ಯ ಟೀಕಾಪ್ರಹಾರ ನಡೆಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.